High court order : ಪ್ರಧಾನಿಯ ನಿಂದನೆ ಬೇಜವಾಬ್ದಾರಿಯುತ, ಆದರೆ ದೇಶದ್ರೋಹ ಅಲ್ಲ; ಹೈಕೋರ್ಟ್‌ ತೀರ್ಪು - Vistara News

ಕೋರ್ಟ್

High court order : ಪ್ರಧಾನಿಯ ನಿಂದನೆ ಬೇಜವಾಬ್ದಾರಿಯುತ, ಆದರೆ ದೇಶದ್ರೋಹ ಅಲ್ಲ; ಹೈಕೋರ್ಟ್‌ ತೀರ್ಪು

High court order : ಪ್ರಧಾನಿಯನ್ನು ನಿಂದಿಸುವುದು ಅವಹೇಳನಕಾರಿ ಮತ್ತು ಬೇಜವಾಬ್ದಾರಿಯುತ ನಡವಳಿಕೆ. ಅದೂ ಶಾಲೆಯಲ್ಲಿ ಈ ಕೆಲಸ ನಡೆಯಲೇಬಾರದು. ಹಾಗಂತ, ಇದು ದೇಶದ್ರೋಹವೇನೂ ಅಲ್ಲ ಎಂದಿದೆ ರಾಜ್ಯ ಹೈಕೋರ್ಟ್‌.

VISTARANEWS.COM


on

Karnataka high court teachers appointment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಪ್ರಧಾನಿಯನ್ನು ನಿಂದಿಸಿದರೆ (Insulting Prime Minister) ಅದನ್ನು ದೇಶದ್ರೋಹ (Sedition law) ಎಂದು ಪರಿಗಣಿಸಲಾಗದು ಎಂಬ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ (Karnataka High court) ನೀಡಿದೆ. ಈ ರೀತಿಯ ನಿಂದನೆಗಳನ್ನು ಅವಹೇಳನಕಾರಿ ಮತ್ತು ಬೇಜವಾಬ್ದಾರಿಯ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಎನ್ನಲಾಗದು ಎಂದು ಅದು ಹೇಳಿದೆ (High court order).

ಬೀದರ್‌ನ ಶಾಲೆಯೊಂದರಲ್ಲಿ (School in Bidar) ಅಭಿನಯಿಸಲಾದ ನಾಟಕದಲ್ಲಿ ಮಕ್ಕಳು ಪ್ರಧಾನಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬ ಸಂಭಾಷಣೆ ಹೇಳಿದ್ದರು. ಈ ಕಾರಣಕ್ಕಾಗಿ ಶಾಲೆಯ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ನೇತೃತ್ವದ ಪೀಠ ಶಾಲೆಯ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ವಜಾ ಮಾಡಿದೆ. ಇದರ ಜತೆಗೇ ಎಲ್ಲ ಶಾಲೆಗಳಿಗೆ ಸಲಹೆ ರೂಪದಲ್ಲಿ ಎಚ್ಚರಿಕೆಯನ್ನೂ ನೀಡಿದೆ.

ಯಾವ ಪ್ರಕರಣವಿದು, ಏನಾಗಿತ್ತು?

ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕಾಯಿದೆಗಳ ಬಗ್ಗೆ ದೇಶದಲ್ಲಿ ಭಾರಿ ಚರ್ಚೆ, ಪ್ರತಿಭಟನೆ ನಡೆಯುತ್ತಿದ್ದ ಸಮಯವದು. ಬೀದರ್‌ನ ಶಾಹಿನ್‌ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ಇದನ್ನೇ ಆಧರಿಸಿ ಒಂದು ನಾಟಕ ಪ್ರದರ್ಶನ ಮಾಡಿದ್ದರು. 2020ರ ಜನವರಿ 21ರಂದು ಶಾಲೆಯ 4, 5 ಹಾಗೂ 6ನೇ ತರಗತಿ ವಿದ್ಯಾರ್ಥಿಗಳಿಂದ ಒಂದು ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.

ಇದರಲ್ಲಿ ಈ ಕಾನೂನು ಜಾರಿಗೆ ತರಲು ಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎನ್ನುವ ಸಂಭಾಷಣೆ ಇತ್ತು. ಜತೆಗೆ ಇದು ಜಾರಿಗೆ ಬಂದರೆ ಮುಸ್ಲಿಮರು ದೇಶ ಬಿಟ್ಟು ಹೋಗಬೇಕಾದೀತು ಎಂದು ಹೇಳಲಾಗಿತ್ತು.

ಈ ನಾಟಕ ಮತ್ತು ಅದರ ಸಂಭಾಷಣೆಯನ್ನು ಆಧರಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಪೊಲೀಸರಿಗೆ ದೂರು ನೀಡಿತ್ತು. ಪೊಲೀಸರು ಬೀದರ್‌ನ ಶಾಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್, ಅಬ್ದುಲ್ ಕಾಲೇಖ್, ಮೊಹಮ್ಮದ್ ಬಿಲಾಲ್ ಇನಾಂದಾರ್ ಹಾಗೂ ಮೊಹಮ್ಮದ್ ಮೆಹತಾಬ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಇದೀಗ ಕೋರ್ಟ್‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿದೆ. ಆದರೆ, ಕೆಲವೊಂದು ಎಚ್ಚರಿಕೆಗಳನ್ನು ನೀಡಿದೆ.

ನ್ಯಾಯಮೂರ್ತಿಗಳ ಅಭಿಪ್ರಾಯವೇನು?

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎನ್ನಲಾದ ನಿಂದನಾತ್ಮಕ ಪದಗಳು ಅವಹೇಳನಕಾರಿ ಮಾತ್ರವಲ್ಲ, ಬೇಜವಾಬ್ದಾರಿಯುತವಾದುದು. ಸರ್ಕಾರದ ವಿರುದ್ಧ ರಚನಾತ್ಮಕ ಟೀಕೆ – ಟಿಪ್ಪಣಿಗಳನ್ನು ಮಾಡಬಹುದು. ಆದರೆ, ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ತೆಗೆದುಕೊಳ್ಳುವ ನಿರ್ಧಾರಗಳನ್ನು ನಿಂದನಾತ್ಮಕವಾಗಿ ಟೀಕಿಸುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ದೇಶದ್ರೋಹ ಪ್ರಕರಣ ಯಾಕೆ ಅನ್ವಯವಾಗುವುದಿಲ್ಲ?

  1. ಶಾಲೆಯ ವಿದ್ಯಾರ್ಥಿಗಳು ತಮ್ಮ ನಾಟಕದಲ್ಲಿ ಸರ್ಕಾರದ ವಿವಿಧ ನೀತಿ ನಿರೂಪಣೆಗಳನ್ನು ಟೀಕಿಸಿದ್ದಾರೆ ಎಂದು ವಾದಿಸಲಾಗಿತ್ತು. ಸರ್ಕಾರದ ಈ ನೀತಿಗಳಿಮದ ಮುಸ್ಲಿಮರು ದೇಶ ಬಿಟ್ಟು ಹೋಗುವಂತೆ ಮಾಡಲಾಗುತ್ತಿದೆ ಎಂದು ನಾಟಕದಲ್ಲಿ ಬಿಂಬಿಸಲಾಗಿತ್ತು.
  2. ಈ ವಿಚಾರವನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು, ಈ ನಾಟಕವು ಶಾಲೆಯ ಆವರಣದಲ್ಲಿ ನಡೆದಿದೆ. ಮಕ್ಕಳ ಬಾಯಿಯಿಂದ ಹೊರಬಿದ್ದ ಪದಗಳಿಂದ ಸಮಾಜದಲ್ಲಿ ಹಿಂಸೆ ಅಥವಾ ಅಶಾಂತಿ ಸೃಷ್ಟಿ ಆಗುವಂತೆ ಇರಲಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.
  3. ಐಪಿಸಿ ಸೆಕ್ಷನ್ 153(ಎ)ನಲ್ಲಿ ಇರುವಂತೆ ಧಾರ್ಮಿಕ ಗುಂಪುಗಳ ನಡುವೆ ಅಸಹಿಷ್ಣುತೆ ಮೂಡಿಸುವ ಯಾವುದೇ ಕೃತ್ಯವೂ ಈ ಪ್ರಕರಣದಲ್ಲಿ ಕಂಡು ಬಂದಿಲ್ಲ.
  4. ಈ ಪ್ರಕರಣದ ಆರೋಪಿಯೊಬ್ಬರು ನಾಟಕದ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ಬಳಿಕವಷ್ಟೇ ಅದು ಎಲ್ಲರ ಗಮನಕ್ಕೆ ಬಂದಿತು ಎಂದು ನ್ಯಾಯಾಲಯ ಹೇಳಿದೆ.
  5. ಈ ನಾಟಕದ ಮೂಲಕ ಸಮಾಜದಲ್ಲಿ ಅಶಾಂತಿ, ಹಿಂಸೆ ಸೃಷ್ಟಿಸುವ ವಾತಾವರಣ ನಿರ್ಮಾಣವಾಗುತ್ತದೆ ಎಂಬ ಊಹೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗದು.

ಶಾಲೆಗಳಿಗೆ ಕೋರ್ಟ್‌ ಕಿವಿಮಾತು

ಇದೇ ವೇಳೆ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರು ಶಾಲೆಗಳಿಗೂ ಕೆಲವೊಂದು ಕಿವಿಮಾತು ಹೇಳಿದ್ದಾರೆ.

  1. ಶಾಲೆಗಳಲ್ಲಿ ನಾಟಕ ಪ್ರದರ್ಶಿಸುವಾಗ ಅದು ಮಕ್ಕಳ ಶೈಕ್ಷಣಿಕ ಆಸಕ್ತಿಯನ್ನು ಹೆಚ್ಚಿಸುವಂತಿರಲಿ. ಕ್ರಿಯಾತ್ಮಕವಾಗಿ ಯೋಚಿಸಲು ಅನುಕೂಲವಾಗುವ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳಿ.
  2. ಪ್ರಸಕ್ತ ರಾಜಕೀಯ ವಿಷಯಗಳನ್ನೇ ಎತ್ತಿಕೊಂಡಾಗ ಅದು ಪುಟ್ಟ ಮನಸುಗಳನ್ನು ಬೇರೆ ರೀತಿಯಲ್ಲಿ ಪ್ರಚೋದಿಸುವ, ಭ್ರಷ್ಟಗೊಳಿಸುವ ಸಾಧ್ಯತೆ ಇರುತ್ತದೆ.
  3. ಮಕ್ಕಳಿಗೆ ಪಠ್ಯ ವಿಷಯದಲ್ಲಿ ಜ್ಞಾನ ಹೆಚ್ಚಿಸಲು ಅನುಕೂಲವಾಗುವ ಜ್ಞಾನಾಧರಿತ ಇಲ್ಲವೇ ತಂತ್ರಜ್ಞಾನ ಆಧರಿತ ವಿಚಾರಗಳನ್ನು ತಿಳಿಸುವುದು ಉತ್ತಮ.
  4. ಶಾಲೆಗಳು ಜ್ಞಾನದ ತೊರೆಯನ್ನು ಮಕ್ಕಳ ಕಡೆಗೆ ಹರಿಸಿ ಅವರ ಕಲ್ಯಾಣ ಮತ್ತು ಸಮಾಜದ ಅಭಿವೃದ್ಧಿಗೆ ಬಳಸಬೇಕು. ಅದು ಬಿಟ್ಟು ಮಕ್ಕಳಿಗೆ ಸರ್ಕಾರದ ನೀತಿಗಳನ್ನು ಟೀಕಿಸುವುದು, ಸಾಂವಿಧಾನಿಕ ವ್ಯಕ್ತಿ/ಸಂಸ್ಥೆಗಳನ್ನು ಅಪಮಾನಿಸುವುದನ್ನು ಕಲಿಸುವುದು ಸರಿಯಲ್ಲ.

ಇದನ್ನೂ ಓದಿ: Viral Video: ಶಿಕ್ಷಕಿಯ ನಿವೃತ್ತಿ, ಬಿಕ್ಕಿ ಬಿಕ್ಕಿ ಅತ್ತು ಬೀಳ್ಕೊಟ್ಟ ಮಕ್ಕಳು; ಶಾಲಾ ದಿನಗಳ ನೆನಪಿಸುವ ವಿಡಿಯೊ ಇದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ 1ರವರೆಗೆ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

VISTARANEWS.COM


on

Aravind Kejriwal
Koo

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ ಜೂನ್ 2ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌(Supreme Court)ನಲ್ಲಿ ನಡೆಯಿತು. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠವು ಎರಡು ಭಾಗಗಳಾಗಿ ವಿಂಗಡಿಸಿದೆ. ಅವರ ಪ್ರಮುಖ ಅರ್ಜಿಯು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ಬಂಧನವನ್ನು ಪ್ರಶ್ನಿಸಿದೆ ಮತ್ತು ಅದನ್ನು “ಕಾನೂನುಬಾಹಿರ” ಎಂದು ಘೋಷಿಸುವಂತೆ ಕೋರಿದೆ. ಎರಡನೇ ಅಂಶವು ನಡೆಯುತ್ತಿರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಮಂಜೂರು ಮಾಡಲು ಸಂಬಂಧಿಸಿದೆ. ಎರಡನೇ ಭಾಗಕ್ಕೆ ಸಂಬಂಧಿಸಿ ಇಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದೆ. ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನು ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ. ರಾಜಕಾರಣಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯ ಎಂದು ಜನ ಭಾವಿಸುತ್ತಾರೆ ಎಂದು ಈಗಾಗಲೇ ವಾದ ಮಂಡಿಸಿದ್ದರು. ಇದಾದ ಬಳಿಕ ಈ ಪ್ರಕರಣವನ್ನು ನ್ಯಾಯಪೀಠ ಎರಡು ಭಾಗವನ್ನಾಗಿ ವಿಭಜಿಸಿತ್ತು. ಒಂದು ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ. ಮತ್ತೊಂದು ಮಧ್ಯಂತರ ಜಾಮೀನು ಅರ್ಜಿ. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು ಮತ್ತು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸುವುದಾಗಿ ಹೇಳಿತ್ತು.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Continue Reading

ದೇಶ

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

MP High Court: ಮಧ್ಯ ಪ್ರದೇಶ ಹೈಕೋರ್ಟ್‌ ನೀಡಿದ ಮಹತ್ವದ ತೀರ್ಪಿನಲ್ಲಿ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

VISTARANEWS.COM


on

MP High Court
Koo

ಭೋಪಾಲ್‌: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (MP High Court) ತೀರ್ಪು ನೀಡಿದೆ. ವೈವಾಹಿಕ ಅತ್ಯಾಚಾರವು ಭಾರತೀಯ ದಂಡ ಸಂಹಿತೆಯಡಿ ಅಪರಾಧವಲ್ಲದ ಕಾರಣ, ಈ ಪ್ರಕರಣದಲ್ಲಿ ಹೆಂಡತಿಯ ‘ಸಮ್ಮತಿ’ ಎಂಬ ಪರಿಕಲ್ಪನೆಯು ‘ಮುಖ್ಯವಲ್ಲ’ ಎಂದು ಅದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ಹಲವು ತೀರ್ಪುಗಳು ಮತ್ತು ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿನ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರು, ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ದಂಪತಿಯು 2019ರ ಮೇಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದು ವರ್ಷದ ಮೊದಲೇ ಅಂದರೆ 2020ರ ಫೆಬ್ರವರಿಯಿಂದ ಪತ್ನಿ ಅವರ ಪೋಷಕರ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪತಿ ಹೇಳಿದ್ದಾರೆ. ಇತ್ತ ಪತ್ನಿ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿದ್ದಾರೆ. ಸದ್ಯ ಇದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಮಧ್ಯೆ 2022ರ ಜುಲೈಯಲ್ಲಿ ಪತ್ನಿ ಮತ್ತೆ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಿ ಪತಿಯ ವಿರುದ್ಧ ಮತ್ತೊಂದು ಎಫ್‌ಆರ್‌ಐ ದಾಖಲಿಸಿದ್ದರು.

“ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಅಹ್ಲುವಾಲಿಯಾ ಹೇಳಿ ಅರ್ಜಿದಾರರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿದರು. ಐಪಿಸಿ ಸೆಕ್ಷನ್‌ 375ರ ಅಡಿಯಲ್ಲಿ ಅತ್ಯಾಚಾರದ ತಿದ್ದುಪಡಿ ವ್ಯಾಖ್ಯಾನವನ್ನು ಉಲ್ಲೇಖಿಸಿ, ಕೆಲವು ಸಂದರ್ಭಗಳಲ್ಲಿ ಅಸಹಜ ಕೃತ್ಯಕ್ಕೆ ಪತ್ನಿಯ ಒಪ್ಪಿಗೆ ಪಡೆಯುವುದು ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್‌

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ಪ್ರಮುಖ ಸುದ್ದಿ

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Kanthesh : ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

VISTARANEWS.COM


on

Kantesh
Koo

ಬೆಂಗಳೂರು: ಕರ್ನಾಟkದಲ್ಲಿ ಈಗ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಚರ್ಚೆ ಜೋರಾಗಿ ನಡೆಯುತ್ತಿದೆ. ಲೈಂಗಿಕ ಹಗರಣವೊಂದು ಬಯಲಾದ ಬಳಿಕ ಈ ವಿಷಯ ಗಂಭೀರ ಎನಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೊ ಹರಿದಾಡಿ ಕೇಸು ದಾಖಲಾಗಿ, ತನಿಖಾ ತಂಡ ರಚನೆಯಾದ ಬಳಿಕ ಚರ್ಚೆಗೆ ಸಾಕಷ್ಟು ವಿಷಯಗಳು ಸಿಕ್ಕಿವೆ. ಇವೆಲ್ಲದರ ನಡುವೆ ಬಿಜೆಪಿಯ ರಾಷ್ಟ್ರೀಯ ನಾಯಕರ ಮಾತಿಗೆ ಸೊಪ್ಪು ಹಾಕದೇ ಪಕ್ಷೇತರರಾಗಿ ಶಿವಮೊಗ್ಗ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Kanthesh )​ ಕೂಡ ತಮಗೆ ಸಂಬಂಧಿಸಿದ ತಮ್ಮ ಮಾನ ಹಾನಿ ಮಾಡುವ ಯಾವುದೇ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದಿದ್ದಾರೆ. ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

ಅರ್ಜಿಯಲ್ಲಿ ಏನಿದೆ?:

ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.

ಯಡಿಯೂರಪ್ಪ ವಿರುದ್ಧ ಬಂಡೆದ್ದ ಅಪ್ಪ, ಮಗ

ಮಾಜಿ ಸಚಿವ ಹಾಗೂ ಬಿಜೆಪಿ ಕಟ್ಟಾಳು ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಕುಟುಂಬ ರಾಜಕಾರಣ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಇದನ್ನೂಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

Continue Reading
Advertisement
MLC Election
ಕರ್ನಾಟಕ2 mins ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

CAA
EXPLAINER4 mins ago

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Fortis Hospital doctors team performed a successful complex kidney transplant surgery for two patients with robotic assistance
ಕರ್ನಾಟಕ6 mins ago

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

V. Sunil Kumar latest statemetn
ಬೆಂಗಳೂರು13 mins ago

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

private hospitals heads and health department officers Meeting at vijayanagara DC office
ವಿಜಯನಗರ23 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್25 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ27 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್27 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Team India Coach Applications
ಕ್ರೀಡೆ32 mins ago

Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

CAA
ದೇಶ36 mins ago

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌