Site icon Vistara News

Hit and Run Case | ಐಷರ್ ವಾಹನ‌ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರ ಸಾವು

Hit and Run Case

ಆನೇಕಲ್: ತಾಲೂಕಿನ ಮಾಯಸಂದ್ರ ಬಳಿ ಐಷರ್ ವಾಹನ‌ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಸೋಮವಾರ ರಾತ್ರಿ ಡಿಕ್ಕಿಹೊಡೆದು (Hit and Run Case) ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ.

ಮೃತರು ಉತ್ತರ ಭಾರತ ಮೂಲದವರು ಎಂದು ತಿಳಿದುಬಂದಿದೆ. ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತ ಮಾಡಿದ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಯುವಕ ಸಾವು
ಬೆಂಗಳೂರು: ನಗರದ ಪೀಣ್ಯ ೧೪ನೇ ಕ್ರಾಸ್ ಬಳಿ ಬಿಎಂಟಿಸಿ ಬಸ್‌ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ದೀಪಕ್ (೩೦) ಮೃತ ಯುವಕ. ಓವರ್ ಟೇಕ್ ಮಾಡುವ ಬರದಲ್ಲಿ ಬಸ್‌ ಚಕ್ರದಡಿ ಬೈಕ್‌ ಸವಾರ ಸಿಲುಕಿದ್ದಾನೆ ಎನ್ನಲಾಗಿದೆ.
ರಾಷ್ಟ್ತೀಯ ಹೆದ್ದಾರಿ-೪ರ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆ ಬಸ್ ತೆರಳುತಿದ್ದಾಗ ಬೈಕ್‌ ಸವಾರ ಎಡಭಾಗದಿಂದ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಬೈಕ್ ಚಲಾಯಿಸುವ ವೇಳೆ ಹೆಲ್ಮೆಟ್ ಕೂಡ ಹಾಕಿಲ್ಲ ಎನ್ನಲಾಗಿದೆ. ಘಟನೆ ಸಂಬಂಧ ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Road accident | ಮದುವೆ ದಿಬ್ಬಣದ ಕಾರು ಪಲ್ಟಿಯಾಗಿ ಸುಳ್ಯದ ತಾಯಿ-ಮಗಳು ದಾರುಣ ಮೃತ್ಯು

Exit mobile version