ಬೆಂಗಳೂರು: ಅಪರಿಚಿತ ಕಾರೊಂದು ಡಿಕ್ಕಿಯಾದ ಪರಿಣಾಮ (Hit and Run) ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆಜೆಸ್ಟಿಕ್‌ನಿಂದ ಫ್ರೀಡಂ ಪಾರ್ಕ್ ಕಡೆ ತೆರಳುವ ಫ್ಲೈಓವರ್ ಮೇಲೆ (Road Accident) ಈ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸುಮಾರು 9.30 ವೇಳೆಯಲ್ಲಿ ದುರ್ಘಟನೆ ನಡೆದಿದೆ. ವಾಹನ ಡಿಕ್ಕಿಯಾಗಿ ವ್ಯಕ್ತಿಯ ದೇಹವನ್ನು ಸುಮಾರು 100 ಮೀಟರ್ ಎಳೆದೊಯ್ದಿದೆ. ವ್ಯಕ್ತಿ ಅಂದಾಜು 35ರಿಂದ 40 ವರ್ಷದವರಾಗಿದ್ದು, ಹೆಚ್ಚಿನ ವಿವರಗಳು ತಿಳಿದುಬರಬೇಕಿವೆ. ವಾಹನ ಸ್ಥಳದಿಂದ ಪರಾರಿಯಾಗಿದೆ. ಉಪ್ಪಾರ್ ಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ಸರಣಿ ಅಪಘಾತ
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಬಳಿ ಐದು ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಒಂದರ ಹಿಂದೊಂದು ಬಂದು ಗುದ್ದಿಕೊಂಡಿವೆ. ಮುಂಜಾನೆ ಸಂಪೂರ್ಣವಾಗಿ ಮಂಜು ಆವರಿಸಿದ್ದುದರಿಂದ ರಸ್ತೆ ಕಾಣದೆ ಅಪಘಾತವಾಗಿದೆ ಎಂದು ತರ್ಕಿಸಲಾಗಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು
ಬೆಂಗಳೂರು: ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಬಸ್ ನಿಲ್ದಾಣದ ಟರ್ಮಿನಲ್ 1ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಾರು 30 ವರ್ಷದ ಯುವಕ ಮೃತಪಟ್ಟಿದ್ದಾನೆ. ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದ್ದು, ಮೃತನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಉಪ್ಪಾರಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road Accident: ಬೈಕ್ ಸವಾರರಿಬ್ಬರ ಜೀವ ತೆಗೆದ ಅಪಘಾತ