Site icon Vistara News

Holi 2024: ರಂಗುರಂಗಿನ ಹೋಳಿ ಹಬ್ಬಕ್ಕೆ ಮಾ. 19ರಿಂದ ಸ್ಪೆಷಲ್‌ ರೈಲುಗಳು; ಎಲ್ಲಿಂದ, ಎಲ್ಲಿಗೆ ಓಡಾಟ?

Special trains for Holi festival

ಬೆಂಗಳೂರು: ಹೋಳಿ ಹಬ್ಬದ (Holi 2024)ಪ್ರಯುಕ್ತ ನೈರುತ್ಯ ರೈಲ್ವೆ ಇಲಾಖೆಯು ವಿಶೇಷ ರೈಲುಗಳ (Express trains) ಸಂಚಾರ ಆರಂಭಿಸುತ್ತಿದೆ. ಮಾ.25ರಂದು ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ ಇರಲಿದೆ. ಹೀಗಾಗಿ ಮಾ.19ರಿಂದ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ (Special trains) ಇರಲಿದೆ.

ಸರ್‌.ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ 2 ಟ್ರಿಪ್ ಹಾಗೂ ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ 2 ಟ್ರಿಪ್, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ 1 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.

ರೈಲುಗಳ ವಿವರ ಹೀಗಿದೆ..

1.ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06557/06558)

ರೈಲುಗಳ ಸಂಚಾರ: ಮಾರ್ಚ್ 19 ಮತ್ತು 26, 2024 ರಂದು ರೈಲು ಸಂಖ್ಯೆ 06557 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:55 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2:00 ಗಂಟೆಗೆ ಕಣ್ಣೂರು ನಿಲ್ದಾಣವನ್ನು ತಲುಪಲಿದೆ. ಮಾರ್ಚ್ 20 ಮತ್ತು 27ರಂದು ರೈಲು ಸಂಖ್ಯೆ 06558 ಕಣ್ಣೂರಿನಿಂದ ರಾತ್ರಿ 8 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 1 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ, ಕೃಷ್ಣರಾಜಪುರಂ, ಬಂಗಾರಪೇಟೆ ಜಂ, ಸೇಲಂ ಜಂ, ಈರೋಡ್ ಜಂ, ಕೊಯಮತ್ತೂರು ಜಂ, ಪಾಲಕ್ಕಾಡ್ ಜಂ, ಶೋರನೂರ್ ಜಂ, ತಿರೂರ್, ಕೋಝಿಕ್ಕೋಡ್, ವಡಕರ ಮತ್ತು ಥಲಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

2.ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06555/06556)

ರೈಲುಗಳ ಸಂಚಾರ: ಮಾರ್ಚ್ 23 ಮತ್ತು 30, 2024 ರಂದು ರೈಲು ಸಂಖ್ಯೆ 06555 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:55 ಗಂಟೆಗೆ ಹೊರಟು, ಮರುದಿನ ಸಂಜೆ 7:10 ಗಂಟೆಗೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ. ಮಾರ್ಚ್ 24 ಮತ್ತು 31, 2024 ರಂದು ರೈಲು ಸಂಖ್ಯೆ 06556 ಕೊಚುವೇಲಿ ನಿಲ್ದಾಣದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಸಂಜೆ 4:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ ಜಂ, ಈರೋಡ್ ಜಂ, ತಿರುಪ್ಪೂರು, ಕೊಯಮತ್ತೂರು ಜಂ, ಪಾಲಕ್ಕಾಡ್ ಜಂ, ಒಟ್ಟಪ್ಪಲಂ, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ಮೇಲಿನ ವಿಶೇಷ ರೈಲುಗಳಲ್ಲಿ (06557/58 ಮತ್ತು 06555/56) ಎಸಿ -ಟು ಟೈಯರ್ (1), ಎಸಿ -ತ್ರಿ ಟೈಯರ್ (6), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (3) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ.

  1. ಎಸ್ಎಸ್ಎಸ್ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07311/07312)

ರೈಲುಗಳ ಸಂಚಾರ: ಮಾರ್ಚ್ 24, 2024 ರಂದು ರೈಲು ಸಂಖ್ಯೆ 07311 ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಸಂಜೆ 7:30 ಗಂಟೆಗೆ ಹೊರಟು, ಮರುದಿನ ಸಂಜೆ 7:20 ಗಂಟೆಗೆ ಅಹಮದಾಬಾದ್ ನಿಲ್ದಾಣವನ್ನು ತಲುಪಲಿದೆ. ಮಾರ್ಚ್ 25, 2024 ರಂದು ರೈಲು ಸಂಖ್ಯೆ 07312 ಅಹಮದಾಬಾದ್ ನಿಲ್ದಾಣದಿಂದ ರಾತ್ರಿ 9:25 ಗಂಟೆಗೆ ಹೊರಟು, ಮರುದಿನ ಸಂಜೆ 7:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕಿನಲ್ಲಿ, ಧಾರವಾಡ, ಲೋಂಡಾ ಜಂ, ಬೆಳಗಾವಿ, ಘಟಪ್ರಭಾ, ಮಿರಜ್ ಜಂ, ಸಾಂಗ್ಲಿ, ಸತಾರಾ, ಪುಣೆ ಜಂ, ಲೋನಾವಲ, ಕಲ್ಯಾಣ್ ಜಂ, ವಸಾಯಿ ರೋಡ್, ಬೋಯಿಸರ್, ವಾಪಿ, ಸೂರತ್, ವಡೋದರಾ ಮತ್ತು ಆನಂದ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲಿನಲ್ಲಿ ಎಸಿ-ಟು ಟೈಯರ್ (1), ಎಸಿ-ತ್ರಿ ಟೈಯರ್ (2), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (5) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 19 ಬೋಗಿಗಳನ್ನು ಒಳಗೊಂಡಿರುತ್ತದೆ. ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಈ ವಿಶೇಷ ರೈಲು ಸೇವೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Isha Ambani Bash: ಅಂಬಾನಿಯವರ ಹೋಳಿ ಬಾಷ್‌ನಲ್ಲಿ ಸೀರೆಯಲಿ ಮಿಂಚಿದ ಪ್ರಿಯಾಂಕಾ ಚೋಪ್ರಾ! ಯಾರೆಲ್ಲ ಭಾಗಿ?

ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು

ಯಶವಂತಪುರ ಬೈಪಾಸ್ ಮೂಲಕ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗಿದೆ.

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 2024 ರಿಂದ ಜೂನ್ 29, 2024 ರವರೆಗೆ ಪ್ರತಿ ಶನಿವಾರ ಬೆಳಿಗ್ಗೆ 6:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 6:15 ಕ್ಕೆ ರಾಮೇಶ್ವರಂ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 7, 2024 ರಿಂದ ಜೂನ್ 30, 2024 ರವರೆಗೆ ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ರಾಮೇಶ್ವರಂ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07:25 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲುಗಳು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು, ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ನಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪುದುಕ್ಕೊಟ್ಟೈ, ಕಾರೈಕುಡಿ, ಮನಮದುರೈ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ವಿಶೇಷ ರೈಲಿನಲ್ಲಿ ಎಸಿ-2 ಟೈಯರ್-1, ಎಸಿ-3 ಟೈಯರ್-3, ಸ್ಲೀಪರ್ ಕ್ಲಾಸ್ ಕೋಚ್-9, ಜನರಲ್ ಸೆಕೆಂಡ್ ಕ್ಲಾಸ್ ಕೋಚ್-5 ಮತ್ತು ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಕೋಚ್-2 ಸೇರಿದಂತೆ ಒಟ್ಟು 20 ಬೋಗಿಗಳಿವೆ.

ಸೂಚನೆ: ರೈಲುಗಳ ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರ ಬೈಪಾಸ್ ಮೂಲಕ ಸಂಚರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version