Site icon Vistara News

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ ಭವಿಷ್ಯಕ್ಕೆ ಮಾರಕವಾಗುವ ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜುಲೈ 18ರಂದು ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆ ಕರೆದಿದ್ದಾರೆ.

ಕಳೆದ ವಾರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ಕರ್ನಾಟಕ ರಾಜ್ಯವನ್ನೂ ಒಳಗೊಂಡಂತೆ ಒಟ್ಟು 56826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳು ಗಡುವು ನೀಡಿದೆ.

ವಿರೋಧ ಏಕೆ?

ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ಧಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ. ಕರ್ನಾಟಕ ಸರ್ಕಾರ ಈ ಹಿಂದೆಯೇ ಡಾ. ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ. ಅಲ್ಲದೆ, ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂದು ಈ ಭಾಗದ ಶಾಸಕರ ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಸಭೆ ಕರೆಯಲಾಗಿದ್ದು, ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು ಎಂದು ಗೃಹಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ಘೋಷಣೆ ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಬಿಡುವೇ ಇಲ್ಲವಂತೆ!

Exit mobile version