Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ - Vistara News

ಬೆಂಗಳೂರು

Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

Honey Trap : ಮಿಸ್‌ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುವ ಐನಾತಿ ಲೇಡಿಯೊಬ್ಬಳು ತನ್ನ ಗ್ಯಾಂಗ್‌ ಸಮೇತ ಪೊಲೀಸ್‌ ಬಲೆಗೆ ಬಿದ್ದಿದ್ದಾಳೆ. ಹನಿಟ್ರ್ಯಾಪ್‌ ಮೂಲಕ ಹಣ ಮಾಡಲು ಹೋಗಿ ಜೈಲುಪಾಲಾಗಿದ್ದಾಳೆ.

VISTARANEWS.COM


on

Honey trap gang arrested in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿ ಟ್ರ್ಯಾಪ್ ಗ್ಯಾಂಗ್‌ವೊಂದು (Honey trap) ಸಿಕ್ಕಿಬಿದ್ದಿದೆ. ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಳು. ಮಿಸ್ ಕಾಲ್ ಕೊಡುವ ಈ ಖತರ್ನಾಕ್‌ ಲೇಡಿ, ಹುಡುಗರನ್ನು ಲವ್‌ನಲ್ಲಿ ಬೀಳುವಂತೆ ಮಾಡಿ ಪಟಾಯಿಸುತ್ತಿದ್ದಳು.

ಸದ್ಯ ಲೇಡಿ ಸೇರಿ ಸಂಪಿಗಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಜ್ಮಾಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳು. ಐನಾತಿ ಹೆಂಗಸು ಸಂಪಿಗೆಹಳ್ಳಿಯ ತನ್ನ ಮನೆಯನ್ನೇ ಹನಿಟ್ರ್ಯಾಪ್ ಅಡ್ಡೆಯಾಗಿ ಮಾಡಿಕೊಂಡಿದ್ದಳು.

ಮೊದಲಿಗೆ ಅಪರಿಚಿತ ಸಂಖ್ಯೆಗೆ ಕರೆ ಮಾಡುವ ಐನಾತಿ ಗ್ಯಾಂಗ್, ಬೆಂಗಳೂರಿನವರು ಎಂದು ಗೊತ್ತಾದರೆ ಸಾಕು ಸಲುಗೆಯಿಂದ ಮಾತಾಡುತ್ತಿದ್ದಳು. ಎಷ್ಟರ ಮಟ್ಟಿಗೆ ಎಂದರೆ ಕಷ್ಟ ಸುಖ ವಿಚಾರಿಸುವ ರೀತಿ ಹತ್ತಿರವಾಗುತ್ತಿದ್ದ ಚಾಲಾಕಿ ನಜ್ಮಾ, ನಂತರ ಪರಿಚಯ ಆದವರಿಂದಲೇ ಸಣ್ಣ ಮೊತ್ತದ ಹಣ ಪಡೆದು ಹಿಂದಿರುಗಿಸುತ್ತಿದ್ದಳು.

ಬಳಿಕ ನಿಧಾನವಾಗಿ ಯುವಕರನ್ನು ಲೈಂಗಿಕವಾಗಿ ಪ್ರಚೋದಿಸಿ ಮಾತನಲ್ಲೇ ಮೋಡಿ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲ ಬಾ.. ಏಕಾಂತದಲ್ಲಿ ಕಾಲ ಕಳೆಯೋಣ ಎಂದು ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಇವಳನ್ನು ನಂಬಿ ಬಂದ ಯುವಕರನ್ನು ಸೀದಾ ಮನೆಯ ಬೆಡ್‌ ರೂಮ್‌ಗೆ ಕರೆದುಕೊಂಡು ಹೋಗುತ್ತಿದ್ದಳು.

ಇನ್ನೇನು ಯುವಕ ಖುಷಿಯಲ್ಲಿ ತೇಲಾಡುತ್ತಿದ್ದಾಗಲೇ ನಜ್ಮಾಕೌಸರ್ ಗ್ಯಾಂಗ್ ಎಂಟ್ರಿ ಕೊಡುತ್ತಿತ್ತು. ಯಾರೋ ನೀನು ಏಕೆ ಬಂದಿದ್ದೀಯಾ ಎಂದು ಬೆದರಿಸುತ್ತಿತ್ತು. ಹಣ ಕೊಡು, ಇಲ್ಲವಾದಲ್ಲಿ ರೇಪ್ ಕೇಸ್ ಹಾಕಿಸುತ್ತೇವೆ ಎಂದು ಧಮ್ಕಿ ಹಾಕಿ ವಸೂಲಿ ಮಾಡುತ್ತಿದ್ದರು. ಇದೇ ರೀತಿ ಕಳೆದ ವಾರ ಕೊರಿಯರ್ ಬಾಯ್‌ಗೆ ಟ್ರ್ಯಾಪ್ ಮಾಡಿದ್ದರು. ಸಂತ್ರಸ್ತ ಯುವಕ ಕೊಟ್ಟ ದೂರಿನನ್ವಯ ನಜ್ಮಾ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್‌ ಆಗಿದೆ.

ಇದನ್ನೂ ಓದಿ: Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ

ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನವಾಗಿದೆ. ಮೈಸೂರಿನ ಬೈಲುಕುಪ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದ ಪುನೀತ್(25) ಬಂಧಿತ ಆರೋಪಿ. ಬೈಲಕುಪ್ಪೆ ಪೆಟ್ರೋಲ್ ಬಂಕ್ ಬಳಿ ಜಿಂಕೆ ಚರ್ಮವನ್ನು ಗೋಣಿಚೀಲದಲ್ಲಿ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿದ ದಾಳಿ ನಡೆಸಿದ ಪೊಲೀಸರು ಆರೋಪಿ ಪುನೀತ್‌ನನ್ನು ವಶಕ್ಕೆ ಪಡೆದು, ಆತನ ವಿರುದ್ಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ ಐ ಅಜಯ್ ಕುಮಾರ್, ಸಿಬ್ಬಂದಿಯಾದ ಮುದ್ದುರಾಜು, ಮಹದೇವಪ್ಪ, ಸುರೇಶ್, ಚೇತನ್, ಮಹೇಶ್‌ರಿಂದ ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Hyena Movie: “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ. ವೆಂಕಟ್ ಭರದ್ವಾಜ್ ನಿರ್ದೇಶನದ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Hyena Movie
Koo

ಬೆಂಗಳೂರು: ಚಲನಚಿತ್ರದ ಫಸ್ಟ್ ಲುಕ್ ಸಾಮಾನ್ಯವಾಗಿ ತಾರೆಗಳು ಬಿಡುಗಡೆ ಮಾಡುತ್ತಾರೆ, ಆದರೆ “ಹೈನಾ” ಚಿತ್ರದ (Hyena Movie) ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ, 1990 ರಿಂದ 2000 ರವರೆಗೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತಕ್ಕೆ ಜಯವನ್ನು ತಂದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ವೆಂಕಟ್ ಭರದ್ವಾಜ್ ನಿರ್ದೇಶಿಸಿರುವ ಆ್ಯಕ್ಷನ್ ಪ್ಯಾಕ್ಡ್‌ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ.

ಚಿತ್ರದ ಕಥೆಯನ್ನು ಲಕ್ಷ್ಮಣ್ ಶಿವಶಂಕರ್ ಬರೆದಿದ್ದಾರೆ, ಛಾಯಾಗ್ರಹಣವನ್ನು ನಿಶಾಂತ್ ನಾನಿ ಮಾಡಿದ್ದಾರೆ ಮತ್ತು ಲವ್ವ್ ಪ್ರಣ್ ಮೆಹ್ತಾ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಅಮೃತಾ ಫಿಲ್ಮ್ ಸೆಂಟರ್ ಮತ್ತು ಕೆಕೆ ಕಾಂಬೈನ್ಸ್ ನಿರ್ಮಿಸಿರುವ ಈ ಚಲನಚಿತ್ರವು 2024ರ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗುತ್ತಿದೆ.

Continue Reading

ಬೆಂಗಳೂರು

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಇಂದು ಬೆಂಗಳೂರು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

VISTARANEWS.COM


on

Sangolli Rayanna Jayanthi
Koo

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Physical Abuse : ಬೆಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಚಳಿ ಶುರುವಾಗಿದೆ. ಸದ್ಯ ಭೀಮಾ ಸಿನಿಮಾ ನೋಡಲು ಹೋದ ಅಭಿಮಾನಿಗೂ ಇಂತಹದ್ದೇ ಅನುಭವ ಕಸಿವಿಸಿ ಮಾಡಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆಯಷ್ಟೇ ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿತ್ತು. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿತ್ತು. ಕೆಫೆಯ ಸಿಬ್ಬಂದಿಯೇ ಮೊಬೈಲ್‌ ಇಟ್ಟು ಮಹಿಳೆಯರ ವಿಡಿಯೊ ಸೆರೆಹಿಡಿದಿದ್ದ. ಈ ಘಟನೆ ಮಾಸುವ ಮುನ್ನವೇ ಇದೀಗ ಭೀಮಾ ಸಿನಿಮಾ ನೋಡಲು ಬಂದ ವ್ಯಕ್ತಿಯೊಬ್ಬ ಲೇಡಿಸ್‌ ವಾಶ್‌ರೂಮ್‌ನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ (Physical Abuse) ಮಾಡಿದ್ದಾನೆ.

ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಮಹಿಳಾ ಅಭಿಮಾನಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 23 ವರ್ಷದ ಯುವತಿಯೊಬ್ಬಳು ಕಳೆದ ಆಗಸ್ಟ್‌ 10 ರಂದು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ.

ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ ಹೊರಗೆ ಓಡಿ ಬಂದಿದ್ದಾಳೆ. ಸದ್ಯ ಯುವತಿ ಕೊಟ್ಟ ದೂರಿನನ್ವಯ ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Independence Day 2024: ನಾಡಿನೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ; ಸಂಭ್ರಮದ ಕ್ಷಣಗಳು ಇಲ್ಲಿವೆ

Independence Day 2024: ದೇಶದಾದ್ಯಂತ ಗುರುವಾರ 78ನೇ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗಿದೆ. ಅದೇ ರೀತಿ ಕರ್ನಾಟಕದ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಹಬ್ಬ ಆಚರಿಸಲಾಗಿದೆ.

VISTARANEWS.COM


on

Independence Day 2024
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಧ್ವಜಾರೋಹಣ ನೆರವೇರಿಸಿದರು.
Koo

ಬೆಂಗಳೂರು: ರಾಜ್ಯಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day 2024) ಗುರುವಾರ ಸಂಭ್ರಮದಿಂದ ಆಚರಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಹಬ್ಬ ಆಚರಿಸಲಾಗಿದೆ. ಅಲ್ಲದೇ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ ಮಹಾನ್‌ ನಾಯಕರನ್ನು ಸ್ಮರಿಸುವ ಮೂಲಕ ಗೌರವ ಅರ್ಪಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯ ಯೋಧರ ಕೊಡುಗೆಗಳನ್ನು ಸ್ಮರಿಸಿದರು. ಇನ್ನು ವಿದ್ಯಾರ್ಥಿಗಳು ಮಹಾತ್ಮ ಗಾಂಧಿ, ಸುಭಾಷ್‌ ಚಂದ್ರಬೋಸ್‌, ಭಗತ್‌ ಸಿಂಗ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಜವಾಹರ್‌ಲಾಲ್‌ ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿ ಗಮನ ಸೆಳೆದರು. ಮೆರವಣಿಗೆ ನಡೆಸಿ, ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಇನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿದ್ದಾರೆ.

ದುಬೈನಲ್ಲೂ ಸ್ವಾತಂತ್ರ್ಯ ಹಬ್ಬದ ಸಂಭ್ರಮ

ದುಬೈನಲ್ಲೂ ಭಾರತೀಯರಿಂದ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಫರ್ವೆಜ್ ಹಾಗೂ ಕುಟುಂಬದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.

ಧಾರವಾಡದ ಆರ್.ಎನ್. ಶೆಟ್ಟಿ ಮೈದಾನದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ | ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

ಚಿತ್ರದುರ್ಗದ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಡಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳ 30 ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವ ಮಂಕಾಳು ವೈದ್ಯ ಅವರು ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.
ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಶರಣ ಬಸಪ್ಪಗೌಡ ದರ್ಶನಾಪುರ ಧ್ವಜಾರೋಹಣ ನೆರವೇರಿಸಿದರು.
ಕೋಲಾರ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಾ.ಸುಧಾಕರ್‌, ಸಚಿವ ಕೆ.ಎಚ್‌.ಮುನಿಯಪ್ಪ ಭಾಗಿಯಾಗಿದ್ದರು.

ಇದನ್ನೂ ಓದಿ | Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಶಿವಾನಂದ ಪಾಟೀಲ್‌ ಧ್ವಜಾರೋಹಣ ನೆರವೇರಿಸಿದರು.
Continue Reading
Advertisement
Benefits Of Onion Hair Oil
ಆರೋಗ್ಯ5 mins ago

Benefits Of Onion Hair Oil: ಕೂದಲು ಬಿಳಿಯಾಗುತ್ತಿದೆಯೆ? ಈರುಳ್ಳಿ ತೈಲವನ್ನು ಈ ರೀತಿ ಬಳಸಿ

Aman Sehrawat
ಕ್ರೀಡೆ33 mins ago

Aman Sehrawat : ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​ಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಬಡ್ತಿ

Job Alert
ಉದ್ಯೋಗ57 mins ago

Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Vicky Kaushal Chhava teaser released
ಟಾಲಿವುಡ್58 mins ago

Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

Hyena Movie
ಬೆಂಗಳೂರು60 mins ago

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Happy Independence Day
ಪ್ರಮುಖ ಸುದ್ದಿ1 hour ago

Happy Independence Day : ನೀರಜ್​ನಿಂದ ಹಿಡಿದು ರೋಹಿತ್​ ಶರ್ಮಾ ; ಭಾರತೀಯ ಅಥ್ಲೀಟ್​​ಗಳ ಸ್ವಾತಂತ್ರ್ಯೋತ್ಸವ ಆಚರಣೆಯ ಪೋಸ್ಟ್​ಗಳು ಇಲ್ಲಿವೆ…

ದೇಶ1 hour ago

Indian Flag: ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಧ್ವಜಾರೋಹಣಗಳ ಪ್ರಕ್ರಿಯೆ ಬೇರೆ ಬೇರೆ ಅನ್ನೋದು ಗೊತ್ತಾ?

Independence Day 2024
ಕರ್ನಾಟಕ1 hour ago

Independence Day 2024: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

Bomb threat
ದೇಶ1 hour ago

Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

Sangolli Rayanna Jayanthi
ಬೆಂಗಳೂರು1 hour ago

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌