Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್ - Vistara News

ಬೆಂಗಳೂರು

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Honor 200 Series: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪೋರ್ಟ್ ಫೋಲಿಯೊವನ್ನು ವಿಸ್ತರಿಸುತ್ತಿರುವ ಹಾನರ್ ಇಂದು ತನ್ನ ಹಾನರ್ 200 ಸರಣಿಯನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಒಳಗೊಂಡಿರುವ ಈ ಹೊಸ ಸರಣಿಯು ಶಕ್ತಿ ಮತ್ತು ಸೃಜನಶೀಲತೆಯ ಗಡಿಗಳನ್ನು ದಾಟುತ್ತದೆ, ಅದ್ಭುತ ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇಗಳು, ದೃಢವಾದ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಅರ್ಥಗರ್ಭಿತ ಬಳಕೆದಾರ-ಕೇಂದ್ರಿತ ಎಐ ಅನುಭವಗಳೊಂದಿಗೆ ಗ್ರಾಹಕರಿಗೆ ಉನ್ನತ ದರ್ಜೆಯ ಅನುಭವವನ್ನು ನೀಡುತ್ತದೆ.

VISTARANEWS.COM


on

Honor Released Honor 200 Pro 5G and Honor 200 5G Smartphones
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮಾರುಕಟ್ಟೆ ವಿಸ್ತರಣೆ ಮಾಡುತ್ತಿರುವ ಪ್ರಮುಖ ಮೊಬೈಲ್ ತಯಾರಿಕ ಕಂಪನಿ ಹಾನರ್ (Honor 200 Series), ಶುಕ್ರವಾರ (ಜುಲೈ 19ರಂದು) ತನ್ನ ಹಾನರ್ 200 ಸರಣಿ (Honor 200 Series) ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಬಿಡುಗಡೆಗೊಂಡಿರುವ ಮೊಬೈಲ್​ಗಳು. ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇ, ದೃಢ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಬಳಕೆದಾರ-ಕೇಂದ್ರಿತ ಎಐ ಅನುಭವವನ್ನು ಈ ಸ್ಮಾರ್ಟ್​​ಫೋನ್ ನೀಡುತ್ತದೆ.

ಹಾನರ್ 200 ಪ್ರೊ 5ಜಿ

ಹಾನರ್ 200 ಪ್ರೊ 5ಜಿ ಓಷಿಯನ್ ಸಿಯಾನ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದ್ದು, ಇದರ ಬೆಲೆ 57,999 ರೂಪಾಯಿ. ಜುಲೈ 20 ರ ಮಧ್ಯರಾತ್ರಿ 12 ಗಂಟೆಯಿಂದ Amazon.in, ಬ್ರಾಂಡ್ ವೆಬ್ಸೈಟ್ – explorehonor.com ಮತ್ತು ಮೇನ್‌ಲೈನ್ ಮಳಿಗೆಗಳಲ್ಲಿ ಮಾರಾಟ ಪ್ರಾರಂಭವಾಗಿದೆ. ಜುಲೈ 20ರಿಂದ 23 ರ ವರೆಗೆ ಸ್ಮಾರ್ಟ್‌ ಫೋನ್ ಅನ್ನು ಎಲ್ಲಾ ಗ್ರಾಹಕರಿಗೆ 8000 ರೂ.ಗಳ ರಿಯಾಯಿತಿಯೊಂದಿಗೆ ನೀಡಲಾಗಿದೆ. ಇದಲ್ಲದೆ, ಐಸಿಐಸಿಐ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರು 3000 ರೂ.ಗಳ ರಿಯಾಯಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಗ್ರಾಹಕರು ಕೆಲವು ಆಯ್ದ ಮುಖ್ಯ ಲೈನ್ ಅಂಗಡಿಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಉಡುಗೊರೆಗಳನ್ನು ಪಡೆಯಬಹುದು. ಅಥವಾ 2000 ರೂಪಾಯಿ ಕೂಪನ್ ರಿಯಾಯಿತಿ ಪಡೆಯಬಹುದು.

ಇದನ್ನೂ ಓದಿ: Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಹಾನರ್ 200 5ಜಿ

ಹಾನರ್ 200 5ಜಿ ಮೂನ್‌ಲೈಟ್ ವೈಟ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. 12 ಜಿಬಿ ರ್ಯಾಮ್​ ಮತ್ತು 512 ಜಿಬಿ ಸ್ಟೋರೇಜ್​ನೊಂದಿಗೆ ಇದು ಲಭ್ಯವಿದೆ. ಇದರ 39,999 ರೂಪಾಯಿ. ಆದರೆ, 8 ಜಿಬಿ ಮತ್ತು 256 ಸ್ಟೋರೇಜ್ ಹೊಂದಿರುವ ಮೊಬೈಲ್ 34,999 ರೂಪಾಯಿ. ಜುಲೈ 20 ರಿಂದ 23 ರವರೆಗೆ ಸ್ಮಾರ್ಟ್‌ ಫೋನ್‌ ಅನ್ನು 1000 ರೂ.ಗಳ ರಿಯಾಯಿತಿ ಮತ್ತು 2000 ರೂ.ಗಳ ಬ್ಯಾಂಕ್ ಡಿಸ್ಕೌಂಟ್​ನೊಂದಿಗೆ ಖರೀದಿ ಮಾಡಬಹುದು. ಗ್ರಾಹಕರು ಮೇನ್ ಲೈನ್ ಸ್ಟೋರ್ ಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಗಿಫ್ಟ್​ಗಳನ್ನು ಪಡೆಯಬಹುದು. ಎಲ್ಲ ಸೇರಿದರೆ ಜುಲೈ 20 ರಿಂದ 23 ರಂದು 29,999* ರೂಪಾಯಿಗಳಿಗೆ ಮೊಬೈಲ್ ಲಭ್ಯವಾಗುತ್ತದೆ.

ವಿಶೇಷತೆ ಏನು?

ಹಾನರ್ 200 ಸರಣಿಯು ಟ್ರಿಪಲ್-ಕ್ಯಾಮೆರಾ ಹೊಂದಿದೆ. 50 ಎಂಪಿ ಪೋರ್ಟ್ರೇಟ್ ಮೇನ್​ ಕ್ಯಾಮೆರಾ, 50 ಎಂಪಿ ಪೋರ್ಟ್ರೇಟ್ ಟೆಲಿಫೋಟೋ ಕ್ಯಾಮೆರಾ, 12 ಎಂಪಿ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 50 ಎಂಪಿ ಪೋರ್ಟ್ರೇಟ್ ಸೆಲ್ಫಿ ಕ್ಯಾಮೆರಾ ಇದರಲ್ಲಿದೆ.

ಇದನ್ನೂ ಓದಿ: Uttara Kannada News: ಭೂಕುಸಿತದಿಂದ ಕೊಚ್ಚಿ ಹೋದ ಟ್ಯಾಂಕರ್‌; ಗ್ರಾಮಸ್ಥರೀಗ ಗ್ಯಾಸ್ ಸ್ಫೋಟ ಅಪಾಯದಿಂದ ಪಾರು

ಎರಡೂ ಮೊಬೈಲ್​ಗಳು ಎಐ-ಚಾಲಿತ ಕಣ್ಣಿನ ಕಂಫರ್ಟ್ ಮತ್ತು ಅಮೋಲೆಡ್ ಕ್ವಾಡ್ ಕರ್ವ್ಡ್ ಡಿಸ್‌ಪ್ಲೇಗಳನ್ನು ಹೊಂದಿವೆ. ದಿ ಹಾನರ್‌ನ ಮ್ಯಾಜಿಕ್ ಎಲ್ಎಂ ಎಐನೊಂದಿಗೆ ಮ್ಯಾಜಿಕ್ಒಎಸ್ 8.0 (ಆಂಡ್ರಾಯ್ಡ್ 14) ನಲ್ಲಿ ಕಾರ್ಯನಿರ್ವಹಿಸುತ್ತವೆ. ಹಾನರ್ 200 ಪ್ರೊನಲ್ಲಿ ಸ್ನ್ಯಾಪ್‌ ಡ್ರ್ಯಾಗನ್‌ 8 ಎಸ್ ಜೆನ್​ 3 ಮತ್ತು ಹಾನರ್ 200 ನಲ್ಲಿ ಸ್ನ್ಯಾಪ್ ಡ್ರ್ಯಾಗನ್ 7 ಜೆನ್​​ 3 ಚಿಪ್​ಸೆಟ್​ ಇದೆ.

ಹಾನರ್ 200 ಸರಣಿಯು ಮಿಂಚಿನ ವೇಗದ 100W ವೈರ್ಡ್ ಹಾನರ್ ಸೂಪರ್ ಚಾರ್ಜಿಂಗ್​ ವ್ಯವಸ್ಥೆ ಹೊಂದಿದೆ. ಕೇವಲ 41 ನಿಮಿಷಗಳಲ್ಲಿ ಹಾನರ್ 200 ಪ್ರೊ ಅನ್ನು ಚಾರ್ಜ್ ಮಾಡಬಹುದು. ಪ್ರೊ ರೂಪಾಂತರವು 66W ವೈರ್‌ಲೆಸ್ ಹಾನರ್ ಸೂಪರ್ ಚಾರ್ಜ್ ಕೆಪಾಸಿಟಿ ಹೊಂದಿದೆ.

ಬಿಡುಗಡೆ ಕುರಿತು ಎಚ್‌ಟೆಕ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸಿಪಿ ಖಂಡೇಲ್ವಾಲ್ ಮಾತನಾಡಿ, ಹಾನರ್ 200 ಸರಣಿಯ ಬಿಡುಗಡೆಯು ಭಾರತದಲ್ಲಿ ಸ್ಮಾರ್ಟ್ ಫೋನ್ ಅನುಭವವನ್ನು ಮರುವ್ಯಾಖ್ಯಾನಿಸುವ ಕುರಿತ ಮಹತ್ವದ ಮೈಲಿಗಲ್ಲಾಗಿದೆ. .

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಮ್ಮ ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವುದು ಮಾತ್ರವಲ್ಲದೆ ಮೀರುವ ನವೀನ ಉತ್ಪನ್ನಗಳನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ ಮತ್ತು ಹಾನರ್ 200 ಸರಣಿಯು ಈ ಬದ್ಧತೆಗೆ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Paris Olympics 2024 : ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​​ ನಲ್ಲಿ 2024ರಲ್ಲಿ (Paris Olympics 2024) ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್​ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಘು , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಇದನ್ನೂ ಓದಿ: Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ.

ಟೋಕಿಯೊ ಒಲಿಂಪಿಕ್​ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದು ಈ ಬಾರಿಯೂ ಅವರು ಚಿನ್ನದ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಈ ಬಾರಿ ಚಿನ್ನ ಗೆದ್ದ ಅಥ್ಲೀಟ್​ಗಳಿಗೆ ಮಾತ್ರ ನಗುದು ಬಹುಮಾನ ದೊರಕಲಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿವಿಶ್ವ ಅಥ್ಲೆಟಿಕ್ ಸಂಸ್ಥೆ ಘೋಷಿಸಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ನೀಡಲಾಗುತ್ತಿತ್ತು. ಆದರೆ ಒಲಿಂಪಿಕ್ಸ್​ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬಂದಿರುವುದು ಸಂತಸ ತಂದಿದೆ ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.

Continue Reading

ಕರ್ನಾಟಕ

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಿದ್ದು, ಹಂತಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು. ಇದೇ ಜುಲೈ 22 ರಿಂದ 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

250 Anganwadis selected to start pre primary school says Minister Lakshmi Hebbalkar
Koo

ಬೆಂಗಳೂರು: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಿದ್ದು, ಹಂತಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೊರೆತ ತಾತ್ವಿಕ ಒಪ್ಪಿಗೆ ಮೇರೆಗೆ ಹಂತ-ಹಂತವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ (LKG & UKG) ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಅದರಂತೆ, ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG & UKG) ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ 62, ಪೂರ್ವ ಜಿಲ್ಲೆಯ 20, ಕೇಂದ್ರ ಜಿಲ್ಲೆಯ 50, ಬೆಂಗಳೂರು ರಾಜ್ಯ (ಪ್ರೊಜೆಕ್ಟ್) 50, ಬೆಂಗಳೂರು ದಕ್ಷಿಣ 48, ಆನೆಕಲ್ 20 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 1,238 ಗಂಡು ಹಾಗೂ 1,203 ಹೆಣ್ಣು ಮಕ್ಕಳು ಸೇರಿ ಒಟ್ಟು 2,441 ಮಕ್ಕಳು ಇದರಲ್ಲಿ ಒಳಗೊಳ್ಳಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

04 ರಿಂದ 06 ವರ್ಷದ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಪಠ್ಯ, ಪುಸ್ತಕ (ಆಂಗ್ಲ ಹಾಗೂ ಕನ್ನಡ ಮಾಧ್ಯಮ) ನೀಡಲು, 1 ಜತೆ ಸಮವಸ್ತ್ರ ನೀಡಲು, 1 ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ ಸಿಎಸ್ಆರ್ ಫಂಡ್ ಪಡೆಯಲು ಉದ್ದೇಶಿಸಲಾಗಿದೆ. LKG & UKG -ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಪೂರ್ವ ಪ್ರಾಥಮಿಕ ಕೇಂದ್ರಗಳಲ್ಲಿ ಹಾಲಿ PUC ಮತ್ತು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ. ಆಂಗ್ಲ ಹಾಗೂ ಕನ್ನಡ ಮಾಧ್ಯಮಗಳಲ್ಲಿ ಬೋಧನೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Chenab Bridge: ಐಫೆಲ್ ಟವರ್‌ಗಿಂತ ಎತ್ತರದ ಚೆನಾಬ್ ಸೇತುವೆ ಆಗಸ್ಟ್ 15ರಂದು ಉದ್ಘಾಟನೆಗೆ ಸಜ್ಜು!

ಇದೇ ಸೋಮವಾರ, ಜುಲೈ 22ರಿಂದ 250 ಅಂಗನವಾಡಿ ಕೇಂದ್ರಗಳಲ್ಲಿ LKG & UKG ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Cauvery Dispute: 2-3 ದಿನದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿ; ಕೆರೆಗಳನ್ನು ತುಂಬಿಸಲು ಕ್ರಮ ಎಂದ ಡಿಕೆಶಿ

Cauvery Dispute: ಇನ್ನೆರಡು ಮೂರು ದಿನಗಳಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ರಾಜ್ಯದ ರೈತರ ಹಿತ
ಕಾಪಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Cauvery Dispute
Koo

ಬೆಂಗಳೂರು: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ (Cauvery Dispute) ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಮಾತನಾಡಿದ ಅವರು, “ಇನ್ನೆರಡು ಮೂರು ದಿನಗಳಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ನಾವು ಮುಂಜಾಗ್ರತೆಯಿಂದ ರಂಗನತಿಟ್ಟು ಸೇರಿ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ | DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ

ಮಳೆ ಹಾನಿಯಾಗಿರುವ ಅಂಕೋಲಾ ಸೇರಿ ಇತರ ಕಡೆಗಳಿಗೆ ಕುಮಾರಸ್ವಾಮಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, “ಅವರು ಯಾವ ಫೀಲ್ಡಿಗೆ ಇಳಿದಿದ್ದಾರೆ? ಸಿಆರ್‌ಪಿಎಫ್ ಪಡೆ ಕರೆಸಿ, ತೆರವು ಕಾರ್ಯಕ್ಕೆ ನೆರವಾಗಿದ್ದರೆ, ಫೀಲ್ಡಿಗೆ ಇಳಿದಿದ್ದಾರೆ ಎಂದು ಹೇಳಬಹುದಿತ್ತು. ಅನಾಹುತ ನಡೆದ ಒಂದೇ ತಾಸಿನಲ್ಲಿ ನಮ್ಮ ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಮ್ಮ ಸಚಿವರಾದ ಮಂಕಾಳ ವೈದ್ಯ, ಕೃಷ್ಣ ಭೈರೇಗೌಡರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಈ ವಿಚಾರದಲ್ಲಿ ಈಗ ರಾಜಕಾರಣ ಮಾಡುವುದು ಬೇಡ. ಮೊದಲು ಜನರ ರಕ್ಷಣೆ ಮಾಡೋಣ” ಎಂದರು.

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ

ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ಸರ್ಕಾರ ಎಲ್ಲಾ ನಿಗಮಗಳ ಹಣ ಹಿಂಪಡೆಯುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಖದೀಮರು (ಅಧಿಕಾರಿಗಳು) ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗುವುದು. ಹೀಗಾಗಿ ಆರ್ಥಿಕ ಇಲಾಖೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ” ಎಂದರು.

ಇದನ್ನೂ ಓದಿ | CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

ಜಿಲ್ಲಾ, ಬ್ಲಾಕ್ ಅಧ್ಯಕ್ಷರ ಜತೆ ಚರ್ಚೆ

ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಕೇಳಿದಾಗ, “ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಅವುಗಳಿಗೆ ತಯಾರಿ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ಮಾರ್ಗದರ್ಶನ ನೀಡಲು ಇಂದು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ” ಎಂದು ತಿಳಿಸಿದರು.

ನಿಷ್ಕ್ರಿಯರಾಗಿರುವವರ ಬದಲಾವಣೆ ಖಚಿತ

ಕಾರ್ಯೋನ್ಮುಖರಾಗದವರ ಬದಲಾವಣೆ ಮಾಡುವ ಬಗ್ಗೆ ಕೇಳಿದಾಗ, “ಯಾರು ಕಾರ್ಯೋನ್ಮುಖರಾಗಿಲ್ಲ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಸಿಎಲ್ ಪಿ ಸಭೆಯಲ್ಲೂ ನಾನು ಈ ವಿಚಾರ ಹೇಳಿದ್ದೇನೆ. ಕಾಂಗ್ರೆಸ್ ಕಚೇರಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ. ಆದರೆ ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಇನ್ನು ಅಧಿವೇಶನದ ಬಳಿಕ ಇಬ್ಬರು ಮಂತ್ರಿಗಳು ಬಂದು ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ” ಎಂದರು.

ಸಮಿತಿಗಳ ನಾಮನಿರ್ದೇಶನದಲ್ಲಿ ಕಾರ್ಯಕರ್ತರಿಗೆ ಆದ್ಯತೆ

ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್ ಅವರು, “ಎಲ್ಲಾ ಕಡೆಗಳಲ್ಲಿ ಸಮಿತಿಗಳ ರಚನೆಗೆ ಸೂಚನೆ ನೀಡಲಾಗಿದೆ. ವಿವಿಧ ಸರ್ಕಾರಿ ಸಮಿತಿಗಳಲ್ಲಿ ನಾಮನಿರ್ದೇಶನ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಹಾಗೂ ಸಾಮಾಜಿಕ ನ್ಯಾಯದ ಮಾನದಂಡ ಆಧಾರದ ಮೇಲೆ ಮಾಡಲಾಗುವುದು” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಸಂಬಂಧ ಪರಮೇಶ್ವರ್ ಅವರ ನೇತೃತ್ವದ ಸಮಿತಿ ಬಗ್ಗೆ ಕೇಳಿದಾಗ, “ನಿಗಮ ಮಂಡಳಿ ನೇಮಕ ವಿಚಾರವಾಗಿ ಪರಮೇಶ್ವರ್ ಅವರ ನೇತೃತ್ವದಲ್ಲಿ ದೊಡ್ಡ ಸಮಿತಿ ರಚಿಸಲಾಗಿದೆ. ನಮ್ಮ ಬಳಿ 7-8 ಸಾವಿರ ಅರ್ಜಿಗಳು ಬಂದಿವೆ. ಅರ್ಜಿಗಳು ಬಾರದಿದ್ದರೂ ಹಳ್ಳಿಗಳಲ್ಲಿ ಬಲಿಷ್ಠವಾಗಿರುವ ಕಾರ್ಯಕರ್ತರನ್ನು ಗಮನಿಸಬೇಕು ಎಂದು ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ | CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

ಶಿರೂರಿಗೆ ಭೇಟಿ ನೀಡಲು ಸರ್ಕಾರ ಅಡ್ಡಿಪಡಿಸಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಅವರು ಪ್ರಚಾರ ಪಡೆಯಲು ಏನು ಬೇಕೋ ಅದನ್ನು ಮಾಡುತ್ತಾರೆ” ಎಂದರು.

Continue Reading

ಕರ್ನಾಟಕ

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಈ ಹಿಂದೆ ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ, ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

VISTARANEWS.COM


on

CM Siddaramaiah
Koo

ಚಿತ್ರದುರ್ಗ: ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ. ಆದರೆ, ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಕಾಲದ ಅಕ್ರಮಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ, ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು? ಇದನ್ನೆಲ್ಲಾ ಹೇಳಬಾರದೆ? ಎಂದರು. ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ | LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ

ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ ಎಂದರು.

ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ? ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್‌ಸಿ/ಎಸ್‌ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ ಶೇ.24 ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಇದನ್ನೂ ಓದಿ | CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಇನ್ನು ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

Continue Reading
Advertisement
Samsung Launches Galaxy Watch 7 Galaxy Watch Ultra Buds 3 Series
ವಾಣಿಜ್ಯ23 mins ago

Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

Smriti Mandhana
ಕ್ರೀಡೆ40 mins ago

Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

One Day Information Programme on Banking Examination at Shivamogga
ಶಿವಮೊಗ್ಗ46 mins ago

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Paris Olympics 2024
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Union Minister Pralhad Joshi slams the state Congress government
ಕರ್ನಾಟಕ1 hour ago

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Talent is not the property of any caste community says CM Siddaramaiah
ಕರ್ನಾಟಕ1 hour ago

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

250 Anganwadis selected to start pre primary school says Minister Lakshmi Hebbalkar
ಕರ್ನಾಟಕ1 hour ago

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

NEET UG 2024
ದೇಶ1 hour ago

NEET UG 2024: ನೀಟ್‌ ಪ್ರಶ್ನೆಪತ್ರಿಕೆ ಟ್ರಂಕ್‌ ಕದ್ದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರನ್ನು ಬಂಧಿಸಿದ ಸಿಬಿಐ!

Cauvery Dispute
ಕರ್ನಾಟಕ2 hours ago

Cauvery Dispute: 2-3 ದಿನದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿ; ಕೆರೆಗಳನ್ನು ತುಂಬಿಸಲು ಕ್ರಮ ಎಂದ ಡಿಕೆಶಿ

Royal Enfield Guerrilla 450
ಆಟೋಮೊಬೈಲ್2 hours ago

Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ10 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌