Site icon Vistara News

Hostel Admission | 2ನೇ ಪದವಿಯ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಸಿಗಲ್ಲ ಹಾಸ್ಟೆಲ್‌; ಬೆಂಗಳೂರು ವಿವಿ ಸುತ್ತೋಲೆ

Hostel Admission ಬೆಂಗಳೂರು ವಿಶ್ವವಿದ್ಯಾಲಯ

ಬೆಂಗಳೂರು: 2022-23ನೇ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 2ನೇ ಸ್ನಾತಕೋತ್ತರ ಪದವಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅವಕಾಶ ಸಿಗುವುದಿಲ್ಲ ಎಂದು ಬೆಂಗಳೂರು ವಿವಿ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರದ ಆದೇಶದನ್ವಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವಾಗ ಒಂದು ಬಾರಿ ಸರ್ಕಾರಿ ಅಥವಾ ವಿಶ್ವವಿದ್ಯಾಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ. ಇದನ್ನು ಅತಿ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು ಎಂದು ಹಾಸ್ಟೆಲ್‌ಗಳ ಪ್ರಧಾನ ಕ್ಷೇಮಪಾಲಕರಿಗೆ ಸೂಚನೆ ನೀಡಿದ್ದಾರೆ.

ವಾರ್ಡನ್‌ಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆಯಬೇಕು. ಹಾಗೆಯೇ ಮೊದಲ ಸ್ನಾತಕೋತ್ತರ ಪದವಿ ಅಥವಾ ಎರಡನೇ ಸ್ನಾತಕೋತ್ತರ ಪದವಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೆಲವರು ವರ್ಷಾನುಗಟ್ಟಲೇ ಅನಧಿಕೃತವಾಗಿ ಹಾಸ್ಟೆಲ್‌ನಲ್ಲಿ ಸೌಲಭ್ಯ ಪಡೆಯುತ್ತಿರುತ್ತಾರೆ. ಮತ್ತೆ ಕೆಲವರು ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮಾಡಿದ ಬಳಿಕ ಮತ್ತೊಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮಾಡಲು ಪ್ರವೇಶ ಪಡೆದಿರುತ್ತಾರೆ. ಇದರಿಂದ ಹೊಸ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ವಿವಿ ಆಡಳಿತ ಮಂಡಳಿ ಇಂತಹ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ | Criminal Politics | ಸೋಲಿನ ಭೀತಿಗೆ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆಗೆ ಹೊರಟ ಬಿಜೆಪಿ: ಸಿದ್ದರಾಮಯ್ಯ

Exit mobile version