ಬೆಂಗಳೂರು: ಮಳೆ ಬಂದಾಗ ನಗರದ ಕೆಳಸೇತುವೆ(ಅಂಡರ್‌ಪಾಸ್)ಗಳಲ್ಲಿ ವಾಹನ ನಿಲ್ಲಿಸಿದರೆ ವಾಹನ ಸವಾರರಿಗೆ ಇನ್ನು ಮುಂದೆ ದಂಡ ಬೀಳಲಿದೆ. ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸುವುರಿಂದ ಉಂಟಾಗುವ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸ್ (Police Alert) ಕಠಿಣ ಕ್ರಮ ಕೈಗೊಂಡಿದೆ.
ಅಂಡರ್‌ಪಾಸ್‌ಗಳಲ್ಲಿ ಅಪಘಾತಗಳಾಗುವುದನ್ನು ತಪ್ಪಿಸಲು ನಗರದ ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ನಾಯಂಡಹಳ್ಳಿ ಬ್ರಿಡ್ಜ್ ಅಂಡರ್ ಪಾಸ್ ಸೇರಿ ನಗರದ ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸಿದರೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಮಳೆ ಬರುವಾಗ ಯಾವುದೇ ಕಾರಣಕ್ಕೂ ಅಂಡರ್ ಪಾಸ್‌ಗಳಲ್ಲಿ ವಾಹನ ನಿಲ್ಲಿಸಬಾರದು. ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸುವುದರಿಂದ ಹಿಂಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ನಗರದಲ್ಲಿ ಒಟ್ಟು 3 ಕಡೆ ಇತ್ತೀಚೆಗೆ ಈ ಕಾರಣಕ್ಕಾಗಿ ಅಪಘಾತ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಇಂತಹ ಪ್ರಕರಣಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ | Suicide Case | ಸಾಲಗಾರರ ಹಿಂಸೆ ತಾಳಲಾರದೆ ಬೆಂಗಳೂರಲ್ಲಿ ಜಿಮ್ ಮಾಲೀಕ ಆತ್ಮಹತ್ಯೆ