ಬೆಂಗಳೂರು: ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಬೆಂಗಳೂರಿನ ವಸಂತಪುರದಲ್ಲಿ ನಡೆದಿದೆ. ಅರುಣ್ (38) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಕಳೆದ ಎಂಟು ವರ್ಷಗಳಿಂದ ಯುವತಿಯೊಬ್ಬಳನ್ನು ಅರುಣ್ ಪ್ರೀತಿಸುತ್ತಿದ್ದ. (Love failure) ಎರಡು ಮನೆಯವರನ್ನು ಒಪ್ಪಿಸಿ ಮದುವೆಯಾಗುವ ಯೋಚನೆಯಲ್ಲಿದ್ದ.
ಆದರೆ ಯುವತಿಯ ಪೋಷಕರಿಂದ ಬೇರೊಬ್ಬ ಯುವಕನೊಂದಿಗೆ ಮದುವೆಗೆ ಸಿದ್ದತೆ ನಡೆದಿತ್ತು.
ಮದುವೆಯ ಆಹ್ವಾನ ಪತ್ರಿಕೆಯನ್ನು ಯುವತಿಯ ಪೋಷಕರು ಹಂಚಿದ್ದರು. ಇನ್ವಿಟೇಷನ್ ಕಾರ್ಡ್ ಕಂಡ ಅರುಣ್ ಯುವತಿಯ ಸಂಪರ್ಕಕ್ಕೆ ಯತ್ನಿಸಿದ್ದಾನೆ.ಆದರೆ ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಯತ್ನಿಸಿದ್ದಾನೆ. ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.