ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದೀಗ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದಲ್ಲಿ ಒಬ್ಬಂಟಿಯಾಗಿ ಓಡಾಡುವುದು ಅಪಾಯಕಾರಿ ಎಂಬಂತಾಗಿದೆ. ರಾತ್ರಿ ಅಲ್ಲ, ಹಗಲಿನಲ್ಲೇ ಜನಸಾಮಾನ್ಯರು ಓಡಾಡುವುದು ಕಷ್ಟಕರವಾಗಿದೆ.
ಪುಡಿ ರೌಡಿಗಳು ಸಿನಿಮಾ ಸ್ಟೈಲ್‌ನಲ್ಲಿ ದರೋಡೆ ಮಾಡುತ್ತಿದ್ದಾರೆ. ಶುಕ್ರವಾರ (ಜೂನ್ 10) ಮಧ್ಯಾಹ್ನ 12 ಗಂಟೆಗೆ ಇಬ್ಬರು ದುಷ್ಕರ್ಮಿಗಳು ಬಂದು ಯುವಕನೊಬ್ಬನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿರುವ ವಿಡಿಯೊ ಲಭ್ಯವಾಗಿದೆ. ಯುವಕನ್ನು ಮನಸೋಇಚ್ಛೆ ಥಳಿಸಿ ದರೋಡೆ ಮಾಡಲಾಗಿತ್ತು. ಇದೀಗ ಇಬ್ಬರು ಪಾತಕಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | 50 ಸಿಸಿಟಿವಿ, ಮೊಬೈಲ್ ನೆಟ್‌ವರ್ಕ್ ಸಹಾಯದಿಂದ ಸಿಕ್ಕಿಬಿದ್ದ ಲಾರಿ ಕಳ್ಳ !
ಈ ಕೃತ್ಯ ಎಸಗಿದವರು ವಿದ್ಯಾರ್ಥಿನಿಯರ ಸರ ಕಳ್ಳತನ ಮಾಡಿ ಸಿಕ್ಕಿ ಬಿದ್ದಿದ್ದ ದರ್ಶನ್ ಹಾಗೂ ಮನೋಜ್ ಎನ್ನುವುದು ಬೆಳಕಿಗೆ ಬಂದಿದೆ. ಇವರಿಬ್ಬರು ಬೈಕ್‌ನಲ್ಲಿ ಬಂದಿದ್ದರು. ಅವರಲ್ಲಿ ಒಬ್ಬಾತ ಯುವಕನ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಮತ್ತು ಎಟಿಎಂ ಕಾರ್ಡ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ಯುವಕ ಪೊಲೀಸರಿಗೆ ದೂರು ನೀಡಿದ್ದ. ದೂರಿನ ಅನ್ವಯ ಘಟನಾ ಸ್ಥಳದ ಸಿಸಿಟಿವಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು. ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | ಬಾರ್‌ನಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ