Vertical Transportation: ಭಾರತದ ಮೊಟ್ಟ ಮೊದಲ ವರ್ಟಿಕಲ್​ ಟ್ರಾನ್ಸ್​ಪೋರ್ಟೇಷನ್​ ತರಬೇತಿ ಕೇಂದ್ರ ಬೆಂಗಳೂರಿನಲ್ಲಿ ಆರಂಭ - Vistara News

ಬೆಂಗಳೂರು

Vertical Transportation: ಭಾರತದ ಮೊಟ್ಟ ಮೊದಲ ವರ್ಟಿಕಲ್​ ಟ್ರಾನ್ಸ್​ಪೋರ್ಟೇಷನ್​ ತರಬೇತಿ ಕೇಂದ್ರ ಬೆಂಗಳೂರಿನಲ್ಲಿ ಆರಂಭ

vertical transportation : ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್, ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ, ಖಾತರಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹ್ರೋಜ್ ಖಾನ್ ಉಪಸ್ಥಿತರಿದ್ದರು.

VISTARANEWS.COM


on

vertical transportation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಗನಚುಂಬಿ ಕಟ್ಟಡಗಳ (high rise building) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಲಿಫ್ಟ್​ ಮತ್ತು ಎಲಿವೇಟರ್​ಗಳಿಗೆ (ವರ್ಟಿಕಲ್ ಟ್ರಾನ್ಸ್​ಪೋರ್ಟೇಷನ್​) ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಈ ಕ್ಷೇತ್ರದಲ್ಲಿನ ಪರಿಣತರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತರಬೇತಿ ಪಡೆದ ವೃತ್ತಿಪರರನ್ನು ಸೃಷ್ಟಿಮಾಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ದೇಶದ ಮೊಟ್ಟ ಮೊದಲ ವರ್ಟಿಕಲ್ ಟ್ರಾನ್ಸ್​ಪೋರ್ಟೇಷನ್ (Vertical Transportation) ತರಬೇತಿ ಕೇಂದ್ರ ಶುಭಾರಂಭಗೊಂಡಿದೆ. ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್​ಪೋರ್ಟೇಷನ್​’ (BSVT) ಈ ಕೇಂದ್ರ ನೀಡುವ ವಿವಿಧ ಕೊರ್ಸ್​ಗಳಿಗೆ ಬೆಂಗಳೂರಿನಲ್ಲಿ ಬುಧವಾರ (ಜುಲೈ 10ರಂದು) ಚಾಲನೆ ಸಿಕ್ಕಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ವರ್ಟಿಕಲ್ ಟ್ರಾನ್ಸ್‌ಪೋರ್ಟೇಷನ್‌ನಲ್ಲಿ ಡಿಪ್ಲೋಮಾ ಕೋರ್ಸ್ ಒದಗಿಸುತ್ತಿರುವುದು ದೇಶದಲ್ಲಿ ಇದೇ ಮೊದಲು. ಈ ನಿಟ್ಟಿನಲ್ಲಿ ಬಿಎಸ್‌ವಿಟಿ ಪ್ರಮುಖ ಹೆಜ್ಜೆಯಿಟ್ಟಿರುವುದು ಸಂತೋಷದ ಸಂಗತಿ. ಈ ಉದ್ಯಮದೊಳಗಿನ ಕೌಶಲ್ಯದ ಕೊರತೆಯನ್ನು ನೀಗಿಸುವ ಕೆಲಸ ಆಗಬೇಕು. ರಾಜ್ಯದಲ್ಲಿ ಪ್ರತಿ ವರ್ಷ 10 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಮುಗಿಸಿ ಹೊರಬರುತ್ತಾರೆ. ಈ ಪೈಕಿ 5 ಲಕ್ಷ ಮಂದಿ ಪಿಯುಸಿಗೆ ಹೋಗುತ್ತಾರೆ. ಅದರಲ್ಲಿ 3 ಲಕ್ಷ ಮಂದಿ ಮಾತ್ರ ಪದವಿ, ಸ್ನಾತಕೋತ್ತರದಂಥ ಉನ್ನತ ಶಿಕ್ಷಣದತ್ತ ಮುಖ ಮಾಡುತ್ತಾರೆ. ಎಸ್ಸೆಸ್ಸೆಲ್ಸಿ ಮುಗಿಸಿದ ಉಳಿದ 7 ಲಕ್ಷ ಮಂದಿಗೆ ಅತ್ಯುತ್ತಮ ತರಬೇತಿ ನೀಡಿ, ಅವರನ್ನು ಕೌಶಲ್ಯಯುತರನ್ನಾಗಿಸುವತ್ತ ಗಮನ ಹರಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಮುಂದುವರಿದ ಅವರು ಬಿಎಸ್‌ವಿಟಿಯಂಥ ಸಂಸ್ಥೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಇಂಥ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಅಲ್ಲದೆ, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೂ ಈ ಸಂಸ್ಥೆಯಲ್ಲಿ ಕೌಶಲ್ಯ ತರಬೇತಿ ನೀಡಿದರೆ, ಅಂಥ ವಿದ್ಯಾರ್ಥಿಗಳನ್ನು ಸರ್ಕಾರದ “ಆಶಾದೀಪ ಯೋಜನೆ”(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆ)ಯ ವ್ಯಾಪ್ತಿಗೆ ತಂದು, ಅವರಿಗೆ ಸರ್ಕಾರದ ವತಿಯಿಂದಲೇ ಸ್ಟೈಪಂಡ್ ಒದಗಿಸುತ್ತೇವೆ ಎಂಬ ಭರವಸೆಯನ್ನೂ ಅವರು ನೀಡಿದರು.

ಬಿಎಸ್​ವಿಟಿಯ ಸಿಒಒ ಸಂತೋಷ್ ಕುಮಾರ್ ಮಾತನಾಡಿ “ವರ್ಷಕ್ಕೆ ಕನಿಷ್ಠ ಒಂದು ಲಕ್ಷ ಮಂದಿಗೆ ತರಬೇತಿ ನೀಡಿ, ಅವರಿಗೆ ಉದ್ಯೋಗಾವಕಾಶ ಕಲ್ಪಿಸಿ ವಿದೇಶಕ್ಕೆ ಕಳುಹಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಶಿಕ್ಷಣ ಮತ್ತು ತರಬೇತಿಯ ಮೂಲಕ ವರ್ಟಿಕಲ್​ ಟ್ರಾನ್ಸ್​ಪೋರ್ಟೇಷನ್​ ಉದ್ಯಮದಲ್ಲಿ ಕ್ರಾಂತಿಯನ್ನುಂಟು ಮಾಡುವುದು ಬಿಎಸ್​ವಿಟಿ ಸ್ಥಾಪನೆಯ ಮೂಲ ಉದ್ದೇಶ. ನಮ್ಮ ವಿದ್ಯಾರ್ಥಿಗಳಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣ ಮತ್ತು ಸಾಧ್ಯವಾದಷ್ಟು ಉತ್ತಮ ವೃತ್ತಿ ಅವಕಾಶಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ನಮ್ಮ ವಿಶಿಷ್ಟ ಪಠ್ಯಕ್ರಮ ಮತ್ತು ಬಲವಾದ ಉದ್ಯಮ ಸಂಬಂಧಗಳೊಂದಿಗೆ, ವರ್ಟಿಕಲ್​ ಟ್ರಾನ್​​ಪೋರ್ಟೇಷನ್​ನಲ್ಲಿ ಮುಂದಿನ ಪೀಳಿಗೆಯ ನಾಯಕರು ಮತ್ತು ಪರಿಣತರನ್ನು ಸೃಷ್ಟಿಸುವುದು ನಮ್ಮ ಧ್ಯೇಯ ಎಂದು ಹೇಳಿದರು.

ವರ್ಟಿಕಲ್​ ಟ್ರಾನ್ಸ್​ಪೋರ್ಟೇಷನ್​ (ಎಲಿವೇಟರ್​ಗಳು) ಉದ್ಯಮದಲ್ಲಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವಿಶೇಷ ಕೋರ್ಸ್​ಗಳನ್ನು ಈ ಕೇಂದ್ರದಲ್ಲಿ ನೀಡಲಾಗುತ್ತದೆ. ಇದರೊಂದಿಗೆ ಬಿಎಸ್ ವಿಟಿ ಈ ಕ್ಷೇತ್ರದಲ್ಲಿ ಹೊಸ ಮಾನದಂಡ ಸ್ಥಾಪಿಸುವ ಗುರಿ ಹೊಂದಿದೆ ಎಂದು ಅವರು ನುಡಿದರು.

ಇದನ್ನೂ ಓದಿ: Bengaluru News: ಎಐ ತಂತ್ರಜ್ಞಾನ ಬಳಕೆಯಿಂದ ಸಮಾಜದ ಸಮಸ್ಯೆಗಳಿಗೆ ಪರಿಹಾರ: ಅಶೋಕ್ ಚತುರ್ವೇದುಲಾ

ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್, ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ, ಖಾತರಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹ್ರೋಜ್ ಖಾನ್ ಉಪಸ್ಥಿತರಿದ್ದರು. ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್​ಪೋರ್ಟೇಷನ್​ ಟ್ರೈನಿಂಗ್ ಪ್ರೈವೇಟ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕ ಮುಷ್ತಾಕ್ ಅತಿಥಿಗಳನ್ನು ಸ್ವಾಗತಿಸಿದರು.

ಬಿಎಸ್​ವಿಟಿ ನೀಡುವ ಕೋರ್ಸ್‌ಗಳು ಇವು

ಬಿಎಸ್​ವಿಟಿ ವರ್ಟಿಕಲ್​ ಟ್ರಾನ್ಸ್​ಪೋರ್ಟ್​ ಉದ್ಯಮಕ್ಕೆ ಅನುಗುಣವಾಗಿ ಹಲವು ಬಗೆಯ ಕೋರ್ಸ್​ಗಳನ್ನು ನೀಡುತ್ತಿದೆ. ಅವುಗಳೆಂದರೆ, ಡಿಪ್ಲೊಮಾ ಇನ್ ವರ್ಟಿಕಲ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ, ಅಪ್​ಸ್ಕಿಲಿಂಗ್ ಪ್ರೋಗ್ರಾಂ ಇನ್​ ವರ್ಟಿಕಲ್​ ಟ್ರಾನ್ಸ್​​ಪೋರ್ಟೇಷನ್​ – ಮೆಂಟೇನೆನ್ಸ್​, ಅಪ್​ಸ್ಕಿಲಿಂಗ್ ಪ್ರೋಗ್ರಾಂ ಇನ್​ ವರ್ಟಿಕಲ್​ ಟ್ರಾನ್ಸ್‌​ಪೋರ್ಟೇಷನ್- ಟೆಸ್ಟಿಂಗ್ ಕಮಿಷನಿಂಗ್​, ಅಡ್ವಾನ್ಸ್​ಡ್​ ಕೋರ್ಸ್​ ಇನ್​ ಲಿಫ್ಟ್ ಇನ್​​ಸ್ಟಾಲೇಷನ್​, ವರ್ಟಿಕಲ್ ಟ್ರಾನ್ಸ್​ಪೋರ್ಟೇಷನ್​- ಮಾಡರ್ನನೈಸೇಷನ್​ ಪ್ರೋಗ್ರಾಂ, ಸೇಫ್ಟಿ ಕಾಂಪ್ಲೈಯನ್ಸ್​​ ಇನ್​ ವರ್ಟಿಕಲ್​ ಟ್ರಾನ್ಸ್​ಪೋರ್ಟೇಷನ್​, ರೆಸ್ಕ್ಯೂ ಆಪರೇಷನ್ ಟ್ರೈನಿಂಗ್ ಪ್ರೋಗ್ರಾಂ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Bengaluru News : ಓದು-ಬರಹ ಅಂತ ಇರಬೇಕಾದ ಬಾಲಕಿ ಪ್ರೀತಿಗೆ (Love) ಬಿದ್ದಿದ್ದಳು. ಪ್ರೀತಿ ಎಂಬ ಮಾಯೆಗೆ ಸಿಲುಕಿ ಪೋಷಕರ ವಿರೋಧದ ನಡುವೆಯು ಮದುವೆಯಾಗಿದ್ದಳು. ಆದರೆ ಕೇವಲ ಒಂದೆರಡು ವರ್ಷಗಳ ಅಂತರದಲ್ಲೇ ಪತಿ ಕಿರುಕುಳಕ್ಕೆ (Husband harassment) ಬೇಸತ್ತು ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾಳೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಯಸ್ಸಲ್ಲದ ವಯಸ್ಸಲ್ಲಿ ಲವ್ ಮಾಡಿ ಮದುವೆಯಾದ (Love marriage) ಬಾಲಕಿಯೊಬ್ಬಳು ಇದೀಗ ಸಾವಿನ ಕಾದ ತಟ್ಟಿದ್ದಾಳೆ. ಬಾಲಕಿ ಜೀವನದಲ್ಲಿ ಪ್ರೀತಿ ಎಂಬ ಎರಡಕ್ಷರ ಬಿರುಗಾಳಿಯಂತೆ ಅಪ್ಪಳಿಸಿತ್ತು. 15ನೇ ವರ್ಷಕ್ಕೆ ಮದುವೆಯಾದವಳು, 17ನೇ ವರ್ಷಕ್ಕೆ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ.

ಪತಿ ಕಿರುಕುಳಕ್ಕೆ ಬೇಸತ್ತು (Husband harassment) ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ಯುವಕನನ್ನು ಪ್ರೀತಿಸಿದ್ದ 17 ವರ್ಷದ ಬಾಲಕಿ, ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದಳು.

ವಿವಾಹ ಬಳಿಕ ದಂಪತಿಗೆ ಒಂದು ಮಗು ಜನನವಾಗಿತ್ತು. ಆದರೆ ಇತ್ತೀಚೆಗೆ ಪತಿ- ಪತ್ನಿಗೆ ಕಿರುಕುಳ ನೀಡುವುದು ಹೆಚ್ಚಾಗಿತ್ತು. ಇದೇ ವಿಚಾರಕ್ಕೆ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ಮೇಲೆ ನಡೆಯುತ್ತಾ ಭಾರೀ ಏರ್‌ಸ್ಟ್ರೈಕ್‌? ಹನಿಯೆಹ್‌ ಹತ್ಯೆ ಪ್ರತೀಕಾರಕ್ಕೆ ಇರಾನ್‌ ಸಜ್ಜು

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗದ ಜೆಎಂಐಟಿ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮನೋಜ್ (22) ಮೃತ ದುರ್ದೈವಿ.

ಚೆನ್ನರಾಯಪಟ್ಟಣ ಮೂಲದ ಮನೋಜ್ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ. ಎಂಬಿಬಿಎಸ್‌ ಓದಲು ಆಗುತ್ತಿಲ್ಲ, ಒತ್ತಡ ಆಗುತ್ತಿದೆ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೋಜ್ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಜತೆಗೆ ಪೋಷಕರಿಗೆ ಕ್ಷಮೆ ಕೇಳಿದ್ದಾನೆ. ಡೆತ್ ನೋಟ್ ಬರೆದಿಟ್ಟು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ಕುಮಾರಸ್ವಾಮಿ ಹಾಗೂ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Shiradi Landslide: ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

VISTARANEWS.COM


on

shiradi landslide
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ಪ್ರಮುಖ ರಸ್ತೆ ಹಾದುಹೋಗುವ ಶಿರಾಡಿ ಘಾಟಿಯಲ್ಲಿ (Shiradi Ghat) ನಿನ್ನೆ ರಾತ್ರಿ ಮತ್ತೆ ಭೂಕುಸಿತದಿಂದ (Shiradi Landslide) ಮುಚ್ಚಿಹೋಗಿದ್ದ ಜಾಗವನ್ನು ವಾಹನಗಳು ಸಂಚರಿಸುವಷ್ಟು ತೆರವು ಮಾಡಲಾಗಿದೆ. ಆದರೆ ಭೂಕುಸಿತದ ಆತಂಕ ಇನ್ನೂ ಇದ್ದು, ವಾಹನ ಸವಾರರು ಜೀವಭಯದಿಂದಲೇ ಸಂಚರಿಸಬೇಕಿದೆ.

ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎನ್‌ಹೆಚ್‌ಎಐನ ಅಧಿಕಾರಿಗಳು ಸ್ಥಳದಲ್ಲಿದ್ದು ರಸ್ತೆ ಮೇಲೆ ಕುಸಿತವಾಗಿರುವ ಮಣ್ಣನ್ನು ಮಾತ್ರ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಒಂದು ವಾರದ ಹಿಂದೆ ದೊಡ್ಡತಪ್ಲು ಬಳಿ ರಸ್ತೆಗೆ ಗುಡ್ಡದಿಂದ ಮಣ್ಣು ಕುಸಿಯಲು ಆರಂಭಿಸಿದೆ. ಆಗಲೇ ಸ್ಥಳೀಯರು ಎಚ್ಚರಿಸಿದ್ದರು. ಎರಡು ದಿನ ಹಿಂದೆ ಇಲ್ಲಿ ರಸ್ತೆಗೆ ಗುಡ್ಡ ದೊಡ್ಡ ಪ್ರಮಾಣದಲ್ಲಿ ಕುಸಿದಿತ್ತು. ಎರಡು ಕಾರುಗಳು, ಲಾರಿ ಹಾಗೂ ಟ್ಯಾಂಕರ್‌ ಸಿಲುಕಿಕೊಂಡಿದ್ದವು. ಪ್ರಯಾಣಿಕರನ್ನು ಪಾರು ಮಾಡಿ ವಾಹನಗಳನ್ನು ಈಚೆಗೆ ತೆಗೆಯಲಾಗಿತ್ತು. ನಿನ್ನೆ ಬೆಳಗ್ಗೆಯುಷ್ಟೇ ರಸ್ತೆ ಸಂಚಾರ ಮುಕ್ತಗೊಂಡಿತ್ತು. ನಿನ್ನೆ ಮಧ್ಯಾಹ್ನ ಕಂದಾಯ ಸಚಿವ ಕೃಷ್ಣಭೈರೇಗೌಡರು ಇಲ್ಲಿಗೆ ಭೇಟಿ ನೀಡಿ ಅವಲೋಕಿಸಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ನಂತರ ನಿನ್ನೆ ರಾತ್ರಿ ಇದೇ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡವು. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಒಂದು ಪಲ್ಟಿಯಾಗಿದೆ. ನಂತರ ಇಲ್ಲಿ ಪೂರ್ತಿಯಾಗಿ ರಸ್ತೆ ಸಂಚಾರ ಬಂದ್‌ ಮಾಡಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಆದೇಶ ನೀಡಿದ್ದರು. ನಿರಂತರ ಗುಡ್ಡ ಕುಸಿಯುತ್ತಿರುವುದರಿಂದ ಜಿಲ್ಲಾಡಳಿತ ಈ ಆದೇಶ ನೀಡಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಆದೇಶಿಸಿತ್ತು.

ಕಂದಾಯ ಸಚಿವರ ಕ್ಲಾಸ್‌

ನಿನ್ನೆ ಗುಡ್ಡ ಕುಸಿತ ಸ್ಥಳಕ್ಕೆ ಸಚಿವರ ಭೇಟಿ ನೀಡಿದ್ದ ಸಚಿವ ಕೃಷ್ಣೆಬೈರೇಗೌಡ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ʼಇಷ್ಟೆಲ್ಲಾ ಸಮಸ್ಯೆ ಆಗಿದೆ, ನಮ್ಮ ಇಡೀ ಅಧಿಕಾರಿ ವರ್ಗ ಇಲ್ಲಿ ಸಮಸ್ಯೆ ಆಗಬಾರದು ಎಂದು ಎಚ್ಚರಿಕೆ ವಹಿಸಿದೆ. ನೀವು ಜನರಿಗೆ ಸಮಸ್ಯೆ ಆಗದಂತೆ ಏನು ಎಚ್ಚರಿಕೆ ವಹಿಸಿದ್ದೀರಿ? ಬೇಕಾಬಿಟ್ಟಿಯಾಗಿ ರಸ್ತೆಯ ಬದಿಗಳನ್ನು ಕಡಿದು ತೆಗೆದಿದ್ದೀರಾʼ ಎಂದು ಕಿಡಿ ಕಾರಿದರು. ʼಇದು ರಾಜ್ಯದ ಪ್ರಮುಖ ರಸ್ತೆ. ಬಂದ್ ಮಾಡಲು ಆಗುವುದಿಲ್ಲ. ಮೊದಲೇ ಜಾಗೃತೆ ವಹಿಸಬೇಕಿತ್ತಲ್ಲವೇʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ʼನಮ್ಮ ಅದೃಷ್ಟ ಯಾರಿಗೆ ಏನೂ ತೊಂದರೆ ಆಗಿಲ್ಲ. ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿದ್ದ ವಾಹನಗಳನ್ನ ನಮ್ಮ ಸಿಬ್ಬಂದಿ ಹೊರ ತೆಗೆದಿದ್ದಾರೆ. ಶಿರಾಡಿ ಘಾಟ್ ಸಮಸ್ಯೆ ಇಂದು ನೆನ್ನೆಯದಲ್ಲ. ಇದು ಹಲವು ವರ್ಷಗಳಿಂದ ಸಮಸ್ಯೆ ಇದೆ. ಗುಡ್ಡಗಳನ್ನು ನೆರವಾಗಿ ಕಡಿದಿದ್ದರಿಂದ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ನಾವು ಸಿಎಂ ಅವರಿಂದಲೂ ಕೂಡ ಪತ್ರ ಬರೆಸುತ್ತೇವೆ ಎಂದಿದ್ದರು ಸಚಿವರು.

ʼಸೂಕ್ತ ಬಂದೋಬಸ್ತ್ ಮಾಡದೆ ರಸ್ತೆ ಮಾಡಿ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಜಿಯೊಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ವರದಿ ಪಡೆಯುತ್ತೇವೆ. ಈಗ ಏನಾಗಿದೆ, ಯಾವ ರೀತಿ ಆಗಬೇಕು ಎಂದು ವರದಿ ಪಡೆಯುತ್ತೇವೆ. ಸಿಎಂ ಮೂಲಕ ಎನ್ಎಚ್ಎಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ. ನಮ್ಮ ರಾಜ್ಯದ ಹಲವು ಕಡೆ ಗುಡ್ಡ ಕುಸಿತ ಆಗಿದೆ. ಒಟ್ಟು 300 ಕೋಟಿ ವೆಚ್ಚದಲ್ಲಿ ಭೂ ಕುಸಿತ ಆಗೋ ಸಾಧ್ಯತೆ ಕಡೆಗಳಲ್ಲಿ ಕಾಮಗಾರಿ ಮಾಡುತ್ತೇವೆ. ಈ ಬಗ್ಗೆ ಶೀಘ್ರವಾಗಿ ಡಿಸಿಗಳಿಂದ ಪ್ರಸ್ತಾವನೆ ಪಡೆದು ತಡೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಚಿವರು ನುಡಿದರು.

ಇದನ್ನೂ ಓದಿ: Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Continue Reading

ಮಂಡ್ಯ

Soldier Death: ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಯೋಧ ಮೃತ್ಯು

Soldier Death: ಸಿ.ಕೆ. ಸಂದೀಪ್ ಕುಮಾರ್ (38) ಮೃತ ಯೋಧ. ಸಂದೀಪ್‌ ಹರಿಯಾಣದಲ್ಲಿ ಮಿಲಿಟರಿ ಸೇವೆಯಲ್ಲಿದ್ದರು. ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್, ರಾತ್ರಿ ಮನೆ ಹತ್ತಿರ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

VISTARANEWS.COM


on

soldier death mandya
Koo

ಮಂಡ್ಯ: ರಜೆಯಲ್ಲಿ ಬಂದಿದ್ದ ಯೋಧರೊಬ್ಬರು ಸ್ವಗ್ರಾಮದಲ್ಲಿ ಮೆಟ್ಟಿಲಿನಿಂದ ಬಿದ್ದು (Soldier Death) ಸಾವಿಗೀಡಾಗಿದ್ದಾರೆ. ಮಂಡ್ಯ (Mandya news) ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ಘಟನೆ ನಡೆದಿದೆ.

ಸಿ.ಕೆ. ಸಂದೀಪ್ ಕುಮಾರ್ (38) ಮೃತ ಯೋಧ. ಸಂದೀಪ್‌ ಹರಿಯಾಣದಲ್ಲಿ ಮಿಲಿಟರಿ ಸೇವೆಯಲ್ಲಿದ್ದರು. ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್, ರಾತ್ರಿ ಮನೆ ಹತ್ತಿರ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

CM Siddaramaiah: ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ ಹಗರಣದ (MUDA Scam) ವಿಚಾರದಲ್ಲಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಕ್ಕೆ ರಾಜ್ಯಪಾಲರು (Governor) ನೋಟೀಸ್‌ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್‌ (Notice) ನೀಡಲಾಗಿದೆ.

ಮುಡಾ ಪ್ರಕರಣದ ಮಾಹಿತಿ ದಾಖಲೆ ಸಹಿತ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ಕಳಿಸಿದ್ದಾರೆ. ಟಿ.ಜೆ ಅಬ್ರಹಾಂ ಎಂಬ ಸಾಮಾಜಿಕ ಕಾರ್ಯಕರ್ತರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಕೇಳಲಾಗಿತ್ತು. ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಬಳಿಕ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಕಳುಹಿಸಲಾಗಿದೆ. ಅಬ್ರಹಾಂ ದೂರಿಗೆ ಸಂಬಂಧಿಸಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕೊಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟೀಸ್‌ ಕಳುಹಿಸಬಹುದು ಎಂಬ ವದಂತಿಯ ಆಧಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಿಡಿದೆದ್ದಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಭೈರೇಗೌಡರು, ʼರಾಜ್ಯಪಾಲರ ಮೂಲಕ ಸರಕಾರ ಅಸ್ಥಿರಗೊಳಿಸುವ ದಾರಿ ಹಿಡಿದರೆ ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆʼ ಎಂದು ಎಚ್ಚರಿಸಿದ್ದರು.

ಇಡಿ ಜೊತೆಗೆ ರಾಜಭವನದ ದುರುಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದರು. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಅನುಮತಿ ಕೇಳಿಲ್ಲ.

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರಕಾರವನ್ನು ಪ್ರಶ್ನಿಸಿ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ ಅವರು.

ಇದನ್ನೂ ಓದಿ: Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Continue Reading
Advertisement
Road Accident
ಚಿಕ್ಕಬಳ್ಳಾಪುರ59 seconds ago

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

IND vs SL 1st ODI
ಕ್ರೀಡೆ21 mins ago

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

Heavy Rain
ದೇಶ27 mins ago

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

India Couture Week 2024 Vicky Kaushal Rashmika Mandanna turn showstoppers
ಬಾಲಿವುಡ್27 mins ago

India Couture Week 2024: ಕೌಚರ್ ವೀಕ್ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಂಚಿದ ರಶ್ಮಿಕಾ- ವಿಕ್ಕಿ ಕೌಶಲ್!

Self Harming
ಬೆಂಗಳೂರು34 mins ago

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Urfi Javed Octopus Dress Is The Most EPIC Thing Of The Day
ವೈರಲ್ ನ್ಯೂಸ್46 mins ago

Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

Hindu Girl Murder
ಕ್ರೈಂ47 mins ago

Yashashree Shinde Murder: ಮುಂಬಯಿಯ ಯಶಶ್ರೀ ಶಿಂಧೆಯನ್ನು ಕರ್ನಾಟಕದ ದಾವೂದ್ ಶೇಖ್ ಕೊಂದಿದ್ದು ಹೇಗೆ? ಆಘಾತಕಾರಿ ಮಾಹಿತಿ

Terror Attack
ದೇಶ54 mins ago

Terror Attack: ಒಂದು ತಿಂಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ಉಗ್ರರ ದಾಳಿ; 14 ಯೋಧರು ಹುತಾತ್ಮ

ಕ್ರೀಡೆ56 mins ago

Paris Olympics: ನೇರಳೆ ಟ್ರ್ಯಾಕ್​ನಲ್ಲಿ ಕಮಾಲ್​ ಮಾಡಲು ಸಜ್ಜಾದ ಅಥ್ಲೀಟ್​ಗಳು

Parliament Session
ರಾಜಕೀಯ1 hour ago

Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌