ಬೆಂಗಳೂರು: ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ, 100 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
ತೆಲಂಗಾಣ ಮೂಲದ 45 ವರ್ಷದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಅದಿಲಾಬಾದ್‌ನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಈ ಮಾದಕವಸ್ತುಗಳನ್ನು ಆತ ತಂದಿದ್ದ. ಬೆಂಗಳೂರು ಏರ್‌ಪೋರ್ಟ್‌ನಿಂದ ದೆಹಲಿಗೆ ಸಾಗಿಸಲು ಆರೋಪಿ ಯತ್ನಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ | Murder Case | ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಬರ್ಬರ ಕೊಲೆ!