Site icon Vistara News

International Film Festival : ಬೆಂಗಳೂರು ಅಂತಾರಾಷ್ಟ್ರಿಯ ಚಲನಚಿತ್ರೋತ್ಸವಕ್ಕೆ ಸಕಲ ಸಿದ್ಧತೆ, ಮಾ.23ಕ್ಕೆ ಚಾಲನೆ

#image_title

ಬೆಂಗಳೂರು: ಸುಪ್ರಸಿದ್ಧ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (International Film Festival) ಇದೇ ತಿಂಗಳ 23ರಂದು ಆರಂಭವಾಗಲಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಒರಾಯನ್‌ ಮಾಲ್‌ನಲ್ಲಿ ಈ ಉತ್ಸವ ನಡೆಯಲಿದ್ದು, ಅದಕ್ಕೆಂದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Viral News : ಶ್ರೀ ಕೃಷ್ಣನನ್ನೇ ಮದುವೆಯಾದ ಯುವತಿ! ಅದ್ಧೂರಿಯಾಗಿ ನಡೆಯಿತು ವಿವಾಹ
ಮಾರ್ಚ್‌ 23ರಿಂದ 30ರವರೆಗೆ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. 23ರಂದು ಸಂಜೆ ವಿಧಾನ ಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾಗಿರುವ ಥಾವರ್ ಚಂದ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಮಾಹಿತಿ ಕೊಟ್ಟಿದ್ದಾರೆ.

ಈ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಒಟ್ಟು 11 ತೆರೆಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್‌ 24ರಿಂದ 30ರವರೆಗೆ ಸಾರ್ವಜನಿಕ ಪ್ರದರ್ಶನ ನಡೆಯಲಿದೆ. ಒರಾಯನ್ ಮಾಲ್ ಜತೆಗೆ ಕಲಾವಿದರ ಸಂಘ ಮತ್ತು ಸುಚಿತ್ರಾ ಫಿಲಂ ಸೊಸೈಟಿಯಲ್ಲೂ ಪ್ರದರ್ಶನ ಏರ್ಪಡಿಸಲಾಗಿದೆ. ಒಟ್ಟಾರೆಯಾಗಿ 50 ದೇಶಗಳ 200 ಅತ್ಯುತ್ತಮ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಅಮೆರಿಕ, ಬ್ರಿಟನ್, ಫ್ರಾನ್ಸ್, ಹಾಂಕಾಂಗ್, ಡೆನ್ಮಾರ್ಕ್‌, ಸ್ಪೇನ್, ಇಟಲಿ, ರೊಮಾನಿಯಾ, ಕೆನಡಾ ಸೇರಿದಂತೆ ಹಲವು ದೇಶಗಳ ಅತ್ಯುತ್ತಮ ಸಿನಿಮಾಗಳನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕಶ್ಯಪ್‌ ಅವರು ಮಾಹಿತಿ ಕೊಟ್ಟಿದ್ದಾರೆ.

ಇದನ್ನೂ ಓದಿ: IPL 2023 : ಜಿಯೊ ಸಿನಿಮಾಗೆ ಸೂರ್ಯಕುಮಾರ್ ಯಾದವ್​ ಬ್ರ್ಯಾಂಡ್ ಅಂಬಾಸಿಡರ್

Exit mobile version