ನೆಲಮಂಗಲ: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವೆಡೆ ಐಟಿ ರೇಡ್ ನಡೆದಿದೆ. ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬಿಡದಿಯಲ್ಲಿ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಹಲವು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಬಿಲ್ಡರ್‌ಗಳು ಹಾಗೂ ಪ್ರತಿಷ್ಠಿತ ಉದ್ಯಮಿಗಳು ದಾಳಿಗೆ ಒಳಗಾದವರ ಪಟ್ಟಿಯಲ್ಲಿದ್ದಾರೆ.
ಸರ್ಕಾರಕ್ಕೆ ತೆರಿಗೆ ಹಣ ಕಟ್ಟದೆ ವಂಚಿಸಿರುವ ಆರೋಪ, ಅವ್ಯವಹಾರಗಳ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ಏಕಕಾಲಕ್ಕೆ ಹಲವೆಡೆ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ | IT Raid | ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೆಗೆ ಐಟಿ ರೈಡ್; ಕಾಂಗ್ರೆಸ್ ಪ್ರತಿಭಟನೆ, ಸಿ.ಟಿ. ರವಿ ಮೇಲೆ ಆಕ್ರೋಶ