IT Raid: ಹಲವೆಡೆ ಆದಾಯ ತೆರಿಗೆ ದಾಳಿ, ಹಬ್ಬಕ್ಕೆ ದೊಡ್ಡ ಮೊತ್ತ ಕೈ ಬದಲಿಸಿದ ಶಂಕೆ Vistara News

ಕ್ರೈಂ

IT Raid: ಹಲವೆಡೆ ಆದಾಯ ತೆರಿಗೆ ದಾಳಿ, ಹಬ್ಬಕ್ಕೆ ದೊಡ್ಡ ಮೊತ್ತ ಕೈ ಬದಲಿಸಿದ ಶಂಕೆ

ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ಮಾಡಿದ್ದಾರೆ.

VISTARANEWS.COM


on

IT Raid across karnataka, Andhra, Telangana and Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿನ್ನೆಯ ಲೋಕಾಯುಕ್ತ ದಾಳಿಯ (Lokayukta Raid) ಬೆನ್ನಲ್ಲೇ ಇಂದು ಮುಂಜಾನೆ ನಗರದ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT Raid) ದಾಳಿ ನಡೆಸಿದ್ದಾರೆ.

ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರುಗಳಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ETA ಗಾರ್ಡನ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಒಟ್ಟು 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಅಲ್ಲದೇ ಮೊನ್ನೆ ಬೆಂಗಳೂರಿನ ವಿವಿದೆಡೆ ಡ್ರೈಫ್ರೂಟ್ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಒಟ್ಟು 11 ಕಚೇರಿಗಳ ಮೇಲೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಸರ್ವೆಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿನ ಅಕ್ರಮ, ಹಣಕ್ಕೆ ಬೇಡಿಕೆ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಭೂದಾಖಲೆ ನಿರ್ದೇಶಕರ ಕಚೇರಿ (ಡಿಡಿಎಲ್‌ಆರ್‌) ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ಎಡಿಎಲ್‌ಆರ್‌)ಗಳಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿತ್ತು.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಡಿಜಿಟಲ್‌ ಪಾವತಿಯೇತರ ದೊಡ್ಡ ಪ್ರಮಾಣದ ಹಣ ಕೈ ಬದಲಿಸಿರುವುದರ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳಿಂದ ಈ ದಾಳಿಗಳು ನಡೆದಿವೆ ಎನ್ನಲಾಗಿದೆ. ಅಧಿಕಾರಿಗಳಿಗೆ ಗುತ್ತಿಗೆದಾರರು ಸಾಕಷ್ಟು ಅಕ್ರಮ ಹಣ ನೀಡಿರುವುದು ಪತ್ತೆಯಾಗಿದೆ. ಆಭರಣ ಹಾಗೂ ಡ್ರೈಫ್ರೂಟ್ಸ್‌ ವ್ಯಾಪಾರಿಗಳಲ್ಲಿ ಅನೇಕ ಮಂದಿ ತೆರಿಗೆರಹಿತ ಹಣದ ವಹಿವಾಟು ನಡೆಸುತ್ತಿರುವುದೂ ಕಂಡುಬಂದಿದೆ.

ಇದನ್ನೂ ಓದಿ: Lokayukta Raid: ಬೆಂಗಳೂರಿನ 11 ಕಡೆ ಲೋಕಾಯುಕ್ತ ದಾಳಿ; ಭೂ ಮಾಪನ ಇಲಾಖೆ ಕಚೇರಿಗಳಲ್ಲಿ ಶೋಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Beaten to death: ಮದುವೆಯಲ್ಲಿ ಅತಿಥಿಗಳಿಗೆ ಪ್ಲೇಟ್ ತಾಗಿತ್ತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ವೇಟರ್ ಒಬ್ಬರನ್ನು ಹೊಡೆದು ಕೊಲ್ಲಲಾಗಿದೆ.

VISTARANEWS.COM


on

waiter beaten to death, tray of used plates touched guests in marriage
Koo

ನವದೆಹಲಿ: ಮದುವೆಯಲ್ಲಿ ಯಾವೆಲ್ಲ ಕಾರಣಕ್ಕೆ ಗಲಾಟೆಗಳಾಗುತ್ತವೆ ಮತ್ತು ಅವು ಹೇಗೆ ಕೊಲೆಯಲ್ಲಿ ಅಂತ್ಯವಾಗುತ್ತವೆ ಎಂಬುದು ಗೊತ್ತಾಗುವುದಿಲ್ಲ. ಮದುವೆ (Marriage Party) ವೇಳೆ, ಬಳಕೆಯಾದ ಪ್ಲೇಟ್‌ಗಳಿದ್ದ ಟ್ರೆಯೊಂದು ಅತಿಥಿಗಳಿಗೆ ತಗುಲಿತು (tray of used plates) ಎಂಬ ಕಾರಣಕ್ಕೆ ಜಗಳ ಉಂಟಾಗಿ, ಕೊನೆಗೆ 26 ವರ್ಷದ ವೇಟರ್ ಕೊಲೆಯಲ್ಲಿ ಅಂತ್ಯವಾಗಿದೆ(Beaten to death). ನವೆಂಬರ್ 17ರ ಸಂಜೆ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪುಸ್ತಾ ರಸ್ತೆಯಲ್ಲಿರುವ ಸಿಜಿಎಸ್ ವಾಟಿಕಾ ಅತಿಥಿ ಗೃಹದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ(UP Police).

ಮಾಣಿ ಒಯ್ಯುತ್ತಿದ್ದ ಪ್ಲೇಟ್‌ಗಳ ತಟ್ಟೆಯು ಸ್ಥಳದಲ್ಲಿ ಅತಿಥಿಗಳನ್ನು ತಗುಲಿದಾಗ ಹೊಡೆದಾಟ ಶುರುವಾಯಿತು. ಜಗಳದ ಸಮಯದಲ್ಲಿ ವೇಟರ್ ಪಂಕಜನನ್ನು ಕೆಲವು ಅಮಾನುಷವಾಗಿ ಥಳಿಸಿದ್ದಾರೆ. ಆಗ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳವನ್ನು ಶವವನ್ನು ಹತ್ತಿರದ ಕಾಡಿನಲ್ಲಿ ಎಸೆದಿದ್ದಾರೆ.

ಮಾರನೇ ದಿನ ಶವ ಪತ್ತೆಯಾಗುತ್ತಿದ್ದಂತೆ ಪೊಲೀಸರು ತೀವ್ರವಾಗಿ ತನಿಖೆಯನ್ನು ಕೈಗೊಂಡಿದ್ದಾರೆ. ಪಂಕಜ್‌ನ ತಲೆಯಲ್ಲಿ ಆಳವಾದ ಗಾಯ ಕಂಡು ಬಂದಿದೆ. ಕೂಡಲೇ ಶವವನ್ನು ಪೋಸ್ಟ್‌ಮಾರ್ಟ್‌ಗೆ ಕಳುಹಿಸಿದ್ದಾರೆ. ಮೃತ ಪಂಕಜ್ ಮದುವೆಯ ಕೆಲಸಕ್ಕಾಗಿ ಹೋಗಿದ್ದ. ಆದರೆ, ವಾಪಸ್ ಬಂದಿರಲಿಲ್ಲ ಎಂದು ಆತನ ತಾಯಿ ಪೊಲೀಸರಿಗೆ ತಿಳಿಸಿದ್ದಾಳೆ.

ಮದುವೆ ನಡೆದ ಗೆಸ್ಟ್‌ಹೌಸ್‌ನಲ್ಲಿ ಪಂಕಜ್ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ. ಮದುವೆ ನಡೆದ ಸ್ಥಳದ ವ್ಯವಹಾರದಲ್ಲಿ ಪಾಟ್ನರ್ನರ್ ಆಗಿರುವ ಗುತ್ತಿಗೆದಾರ ಮನೋಜ್ ಗುಪ್ತಾ ಮೂಲಕ ಆತ ಕೆಲಸಕ್ಕೆ ಸೇರಿಕೊಂಡಿದ್ದ. ವಿಶೇಷ ಎಂದರೆ, ಕೆಲಸ ನೀಡಿದ ಮನೋಜ್ ಕೂಡ ಪಂಕಜ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ. ಮನೋಜ್ ಗುಪ್ತಾ ಮತ್ತು ಅಮಿತ್ ಕುಮಾರ್ ಸೇರಿ ಹಲವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: ಶಾಲೆಯಲ್ಲಿ ಕುಸಿದು ಬಿದ್ದು 4ನೇ ತರಗತಿ ಬಾಲಕಿ ಸಾವು, ಶಿಕ್ಷಕರು ಹೊಡೆದು ಕೊಂದರು ಎಂದು ಅರೋಪಿಸಿದ ಪೋಷಕರು

Continue Reading

ಕರ್ನಾಟಕ

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

Self Harming : ಮಾನಸಿಕ ಖಿನ್ನತೆಯಿಂದಾಗಿ ನೊಂದ ವಿದ್ಯಾರ್ಥಿಯೊಬ್ಬ ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಂದು ಕಡೆ ಎಸಿಸಿ ಸಿಮೆಂಟ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್‌ ನೇಣು ಬಿಗಿದುಕೊಂಡಿದ್ದಾಳೆ.

VISTARANEWS.COM


on

By

self harming by wadi Acc cement Depute Director
Koo

ಕಲಬುರಗಿ/ಮೈಸೂರು: ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆಗಿದ್ದಾರೆ. ಎಸಿಸಿ ಕಾಲೋನಿಯ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಈ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯರಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮೈಸೂರಿನ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಷಜ್ (18) ಮೃತ ದುರ್ದೈವಿ.

ಹೈದರಾಬಾದ್ ಮೂಲದ ಅಕ್ಷಜ್‌ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಯಾರು ಇಲ್ಲದ ವೇಳೆ ಪ್ಲಾಸ್ಟಿಕ್‌ ಕವರ್‌ನಿಂದ ಮುಖವನ್ನು ಪೂರ್ತಿ ಮುಚ್ಚಿಕೊಂಡು ಉಸಿರುಗಟ್ಟಿಸಿಕೊಂಡು ಮೃತಪಟ್ಟಿದ್ದಾನೆ.

ಸಹಪಾಠಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ (Love failure) ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.

ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

BMTC Accident : ಕೆಲವೊಮ್ಮೆ ಚಾಲಕರ ನಿರ್ಲಕ್ಷ್ಯದಿಂದಲೋ ಸವಾರರ ಅಜಾಗರೂಕತೆಯಿಂದಲೂ ಬಿಎಂಟಿಸಿ ಬಸ್‌ಗೆ ಜನರು ಬಲಿಯಾಗುತ್ತಿದ್ದಾರೆ. ಸದ್ಯ ವರ್ಷಕ್ಕೆ ಹತ್ತಾರು ಮಂದಿ ಬಸ್ಸಿಗೆ ಸಿಲುಕಿ ಮೃತಪಡುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಡ್ರೈವರ್‌ಗಳಿಗೆ ಟ್ರಾಫಿಕ್ ಪೊಲೀಸ್‌ರಿಂದ ಟ್ರೈನಿಂಗ್ ನೀಡಲಾಗುತ್ತಿದೆ.

VISTARANEWS.COM


on

By

BMTC Bus hits bike
ಉತ್ತರಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ ಬಿಎಂಟಿಸಿ
Koo

ಬೆಂಗಳೂರು: ಬಿಎಂಟಿಸಿ ಬೆಂಗಳೂರಿಗರ ಪ್ರಮುಖ ಸಾರ್ವಜನಿಕ ಸಾರಿಗೆ. ಬಿಎಂಟಿಸಿಗೆ ಎಷ್ಟು ಖ್ಯಾತಿ ಇದ್ದಯೋ ಅಷ್ಟೇ ಅಪಖ್ಯಾತಿಯು ಸೇರಿಕೊಂಡಿದೆ. ಚಾಲಕರ ಅತಿವೇಗ ಚಾಲನೆ, ನಿರ್ಲಕ್ಷ್ಯದಿಂದ ಅದೆಷ್ಟೋ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಲ್ಲರ್‌ ಎಂದೇ ಹೆಸರು ಪಡೆದಿರುವ ಬಿಎಂಟಿಸಿಗೆ ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ (BMTC Accident) ಕಳೆದುಕೊಂಡಿದ್ದಾರೆ.

ತಿಂಗಳಿಗೆ ಒಬ್ಬರಾದರೂ ಬಿಎಂಟಿಸಿಗೆ ಬಲಿಯಾದರು ಎಂಬ ಸುದ್ದಿ ಕೇಳುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಿಂದ ಅಪಘಾತಗಳು ಹೆಚ್ಚಾಗುತ್ತಲೆ ಇವೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ, ಸಾವಿನ‌ ಸಂಖ್ಯೆಗಿಂತ ಗಾಯಾಳುಗಳ ಸಂಖ್ಯೆಯೇ ಹೆಚ್ಚಿದೆ. ಈ ವರ್ಷದಲ್ಲಿ ಬಿಎಂಟಿಸಿಯಿಂದ ಸತ್ತವರ ಸಂಖ್ಯೆ 34 ಇದ್ದರೆ, 97 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಎಂಟಿಸಿ ಮಾತ್ರವಲ್ಲ ಕೆಎಸ್‌ಆರ್‌ಟಿಸಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ವರ್ಷ ಹತ್ತು ಮಂದಿ ಮೃತಪಟ್ಟಿದ್ದರೆ, 28 ಅಪಘಾತಗಳಾಗಿರುವ ವರದಿಯಾಗಿದೆ. ಈ ಮಧ್ಯೆ ಸಂಚಾರಿ ನಿಯಮಗಳನ್ನು ಉಲಂಘಿಸುತ್ತಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಚಾಲಕರಿಗೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ಪೊಲೀಸರ ತನಿಖೆಯಲ್ಲಿ ಕೆಲ ಚಾಲಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

bmtc accident case

ನಿಯಮ ಉಲ್ಲಂಘಿಸಿ 1 ಕೋಟಿ ದಂಡ ಕಟ್ಟಿದ ಬಿಎಂಟಿಸಿ

ಬಿಎಂಟಿಸಿಯಲ್ಲಿ ಬರೋಬ್ಬರಿ 13, 917 ಸಂಚಾರಿ ನಿಯಮ ಉಲ್ಲಂಘಿಸಿದರೆ, ಕೆಎಸ್‌ಆರ್‌ಟಿಸಿ ಚಾಲಕರು ಮೂರು ಸಾವಿರಕ್ಕೂ ಹೆಚ್ಚು ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ ಚಾಲಕರಿಂದಲೇ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ ಆಗಿದೆ. ಹೀಗಾಗಿ 1,04,10,000 ರೂ. ದಂಡವನ್ನು ಬಿಎಂಟಿಸಿ ಇಲಾಖೆ ಕಟ್ಟಿದೆ. 14 ಲಕ್ಷ ರೂ. ದಂಡವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ಕಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ‌ ನಡೆದಿರುವ ಅಪಘಾತಗಳ‌ ಅಂಕಿ‌ ಅಂಶ ನೋಡುವುದಾದರೆ,..

ಬಿಎಂಟಿಸಿಗೆ ಬಲಿಯಾದವರು- ಗಂಭೀರ ಗಾಯಗೊಂಡವರು

2020ರಲ್ಲಿ 22 ಮಂದಿ ಸಾವು- 49 ಮಂದಿ ಗಾಯಾಳುಗಳು
2021ರಲ್ಲಿ 27 ಮಂದಿ ಸಾವು- 58 ಮಂದಿ ಗಾಯಾಳುಗಳು
2022ರಲ್ಲಿ 37 ಮಂದಿ ಸಾವು- 85 ಮಂದಿ ಗಾಯಾಳುಗಳು
2023ರಲ್ಲಿ 34 ಮಂದಿ ಸಾವು -97 ಮಂದಿ ಗಾಯಾಳುಗಳು

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಪಘಾತಗಳನ್ನು ಹೆಚ್ಚು ಮಾಡುವರ ವಿರುದ್ಧ ಕ್ರಮಕ್ಕೆ ಇಲಾಖೆ ಸೂಚನೆ ನೀಡಿದೆ. ಮುಂದಿನ ದಿನದಲ್ಲಿ ಚಾಲಕರಿಗೆ ತರಬೇತಿ ಕೊಡಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ್ರೈಂ

ವರದಕ್ಷಿಣೆಯಾಗಿ 150 ಗ್ರಾಂ ಚಿನ್ನ, 15 ಎಕರೆ ಭೂಮಿ, ಬಿಎಂಡಬ್ಲ್ಯು ಕಾರಿಗೆ ಬೇಡಿಕೆ; ವೈದ್ಯೆ ಆತ್ಮಹತ್ಯೆ

Crime News: ವರದಕ್ಷಿಣೆಗೆ ಕೇರಳದಲ್ಲಿ ಇನ್ನೊಂದು ಜೀವದ ಬಲಿ ನಡೆದಿದೆ. ಯುವ ವೈದ್ಯೆ ಡಾ. ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವರನ ಕಡೆಯವರ ವರ ದಕ್ಷಿಣೆ ಬೇಡಿಕೆಯೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

VISTARANEWS.COM


on

shahana
Koo

ತಿರುವನಂತಪುರಂ: ವರದಕ್ಷಿಣೆ (Dowry demands) ವಿಚಾರಕ್ಕೆ ಮತ್ತೊಂದು ಸಾವು ಸಂಭವಿಸಿದೆ. ದುಬಾರಿ ಮೊತ್ತದ ವರದಕ್ಷಿಣೆಗೆ ಬೇಡಿಕೆ ಇಟ್ಟು ಪ್ರಿಯತಮ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದು ವೈದ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ಸಂಭವಿಸಿದೆ. ತಿರುವನಂತಪುರಂನ 26 ವರ್ಷದ ಡಾ. ಶಹನಾ ಆತ್ಮಹತ್ಯೆ ಮಾಡಿಕೊಂಡವರು (Crime News).

ಡಾ. ಶಹನಾ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದರು. ವರನ ಮನೆಯವರು ವರದಕ್ಷಿಣೆಯಾಗಿ 150 ಗ್ರಾಂ ಚಿನ್ನ, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು. ಅಷ್ಟು ಕೊಡಲು ಸಾಧ್ಯವಿಲ್ಲ ಎಂದಾಗ ವರನ ಕಡೆಯವರು ಸಿಟ್ಟಿನಿಂದ ಮದುವೆ ರದ್ದು ಮಾಡಿದ್ದಾರೆ. ಇದರಿಂದ ಶಹನಾ ದಿಢೀರ್ ಖಿನ್ನತೆಗೆ ಒಳಗಾಗಿದ್ದರು. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತನಿಖೆಗೆ ಆದೇಶ

ಘಟನೆ ಕುರಿತು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಘಾತ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಕ್ಷಿಣೆ ಬೇಡಿಕೆ, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಹಲವು ಪ್ರಕರಣ ದಾಖಲಿಸಲಾಗಿದೆ.

ಘಟನೆಯ ವಿವರ

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಡಾ. ಶಹನಾ ತನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರೊಂದಿಗೆ ವಾಸಿಸುತ್ತಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನ ಹೊಂದಿದ್ದರು. ಡಾ. ಶಹನಾ ಮತ್ತು ಡಾ. ಇ.ಎ. ರುವೈಸ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ನಿರ್ಧರಿಸಿದ್ದರು. ಈ ಮಧ್ಯೆ ಡಾ. ರುವೈಸ್ ಕುಟುಂಬವು ವರದಕ್ಷಿಣೆಯಾಗಿ 150 ಗ್ರಾಂ. ಚಿನ್ನ, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿತ್ತು ಎಂದು ಶಹನಾ ಕುಟುಂಬಸ್ಥರು ಆರೋಪಿಸಿದ್ದಾರೆ. ಡಾ. ಶಹನಾ ಅವರ ಕುಟುಂಬವು ಬೇಡಿಕೆಯನ್ನು ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದಾಗ ಮದುವೆಯನ್ನು ರದ್ದುಗೊಳಿಸಲಾಗಿತ್ತು ಎಂದು ಮೂಲಗಳು ವರದಿ ಮಾಡಿವೆ. ಆಕೆಯ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ “ಎಲ್ಲರಿಗೂ ಹಣ ಮಾತ್ರ ಬೇಕು” ಎಂದು ಬರೆಯಲಾಗಿತ್ತು.

ಇದನ್ನೂ ಓದಿ: Crime News: ಖಿನ್ನತೆ, ಕೊಲೆ, ಆತ್ಮಹತ್ಯೆ; ವೈದ್ಯನ ಮನೆಯಲ್ಲಿ ನಡೆದಿದ್ದು ಬೆಚ್ಚಿ ಬೀಳಿಸುವ ಘಟನೆ!

ವರದಕ್ಷಿಣೆ ಬೇಡಿಕೆಯ ಆರೋಪದ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ. ರಾಜ್ಯ ಅಲ್ಪಸಂಖ್ಯಾತ ಆಯೋಗ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಸಮಿತಿಯ ಅಧ್ಯಕ್ಷ ಎ.ಎ.ರಶೀದ್ ಅವರು ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಡಿಸೆಂಬರ್ 14ರಂದು ಆಯೋಗದ ಮುಂದೆ ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪಿ.ಸತಿದೇವಿ ಅವರು ಡಾ. ಶಹನಾ ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿಂದೆಯೂ ಕೇರಳದಲ್ಲಿ ವರದಕ್ಷಿಣೆ ಕಿರುಕುಳ ಪ್ರಕಣಗಳು ವರದಿಯಾಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
Hair Care Tips
ಆರೋಗ್ಯ17 mins ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ47 mins ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ1 hour ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್1 hour ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ8 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್8 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್8 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ8 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check9 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ13 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ14 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ19 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌