Site icon Vistara News

JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ

JDS Pancharatna

ಬೆಂಗಳೂರು: ತುಮಕೂರು ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನರಾರಂಭ ಆಗಬೇಕಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು (JDS Pancharatna) ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿ ರಾಜ್ಯದ ಒಳನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡುವ ಮೂಲಕ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Elections | ಬಿಜೆಪಿಯಿಂದ ಮತ್ತೊಂದು ಮೆಗಾ ಸಮಾವೇಶ: ಡಿ. 18ರಂದು ನಾನಾ ಪ್ರಕೋಷ್ಠಗಳ ಶಕ್ತಿ ಸಂಗಮ

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ಮರು ಆರಂಭವಾಗಲಿದ್ದು, ಡಿ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ | Kalyana Kranti Samavesha | ನಾವು ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಖಾಲಿ ಹುದ್ದೆ ಭರ್ತಿ: ಖರ್ಗೆ

Exit mobile version