Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ - Vistara News

ಬೆಂಗಳೂರು

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರ (Kannada New Movie) ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು (Kannada New Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ “ಮಾಫಿಯಾ” ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Vande Bharat Express: ತುಮಕೂರಿನಲ್ಲಿ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹೊತ್ತು 2 ನಿಮಿಷಗಳ‌ ಕಾಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ನೀಡಲಿದೆ. ಇದರಿಂದ ತುಮಕೂರಿನಿಂದ ಬೆಂಗಳೂರು ಹಾಗೂ ಧಾರವಾಡಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ.

VISTARANEWS.COM


on

Koo

ತುಮಕೂರು: ನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express) ಅಧಿಕೃತ ನಿಲುಗಡೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹಸಿರು ನಿಶಾನೆ ತೋರಿದರು. ತುಮಕೂರು ರೈಲು ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೈಲು ನಿಲುಗಡೆಗೆ ಸಚಿವರು ಗ್ರೀನ್ ಸಿಗ್ನಲ್ ನೀಡಿದರು. ಇದರಿಂದ ಇನ್ನು ಮುಂದೆ‌ ನಗರದಲ್ಲಿ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹೊತ್ತು 2 ನಿಮಿಷಗಳ‌ ಕಾಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ನೀಡಲಿದೆ.

ಧಾರವಾಡ-ಬೆಂಗಳೂರು, ಬೆಂಗಳೂರು- ಧಾರವಾಡಕ್ಕೆ ಸಂಚರಿಸುವ ವಂದೇ ಭಾರತ್ ರೈಲು, ಪ್ರತಿದಿನ ಬೆಳಗ್ಗೆ 6.32ಕ್ಕೆ ಬೆಂಗಳೂರಿನಿಂದ ತುಮಕೂರಿಗೆ ಬರಲಿದೆ. ಸಂಜೆ 6.18ಕ್ಕೆ ಧಾರವಾಡದಿಂದ ತುಮಕೂರಿಗೆ ಆಗಮಿಸಲಿದೆ. ಎರಡರಿಂದ ಮೂರು ನಿಮಿಷಗಳ ಕಾಲ‌ ನಿಲುಗಡೆ ನೀಡಿ ಮುಂದೆ ಸಾಗಲಿದೆ. ಎಸಿ ಚೇರ್ ತುಮಕೂರಿನಿಂದ ಬೆಂಗಳೂರಿಗೆ 440‌ ರೂ, ಎಕ್ಸಿಕ್ಯುಟಿವ್ ಕ್ಲಾಸ್ 825 ರೂ. ಟಿಕೆಟ್ ದರ ಇದೆ.

ಧಾರವಾಡದಿಂದ ತುಮಕೂರಿಗೆ ಬಂದ ರೈಲಿಗೆ ವಿ.ಸೋಮಣ್ಣ ಅವರು ಹಸಿರು ನಿಶಾನೆ ತೋರಿದರು. ಶಾಸಕರಾದ ಜ್ಯೋತಿಗಣೇಶ್, ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಸಂಸದ ಜಿ. ಎಸ್. ಬಸವರಾಜು ಹಾಗೂ ರೈಲ್ವೆ ಅಧಿಕಾರಿಗಳ ಉಪಸ್ಥಿತರಿದ್ದರು.

ನಗರದಲ್ಲಿ ವಂದೇ ಭಾರತ್ ರೈಲು ನಿಲುಗಡೆಯಿಂದ ತುಮಕೂರಿನಿಂದ ಬೆಂಗಳೂರು ಹಾಗೂ ಧಾರವಾಡಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಯಾತ್ರಿಕರು ಹಾಗೂ ಪ್ರವಾಸಿಗರು ಸಿದ್ಧಗಂಗಾ ಮಠ ಸೇರಿ ಇನ್ನಿತರ ಸ್ಥಳಗಳನ್ನು ತಲುಪಲು ಪ್ರಯೋಜನವಾಗಲಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Continue Reading

ಬೆಂಗಳೂರು

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ “ಪೆನ್ ಡ್ರೈವ್” ಚಿತ್ರದ (Kannada New Movie) ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಆರ್‌ ಎಚ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ “ಪೆನ್ ಡ್ರೈವ್” ಚಿತ್ರದ (Kannada New Movie) ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ.

“ಚಾಮುಂಡಿ”, “ದುರ್ಗಿ” ಮುಂತಾದ ಆಕ್ಷನ್ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಆಕ್ಷನ್ ಕ್ವೀನ್ ಎಂದು ಜನಪ್ರಿಯರಾಗಿರುವ ಮಾಲಾಶ್ರೀ ಹಾಗೂ “ಬಿಗ್ ಬಾಸ್” ನಂತರ ಬೆಂಕಿ ಅಂತಲೇ ಕರೆಯಲ್ಪಡುವ ತನಿಷಾ ಕುಪ್ಪಂಡ ಇಬ್ಬರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿ ವಲಯದಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲ ಇದೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರು. ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು. ಮಾಲಾಶ್ರೀ ಅವರು ಅಧ್ಯಕ್ಷತೆ ವಹಿಸಿದ್ದರು. ಆನಂತರ ಚಿತ್ರತಂಡದವರು ಹಾಗೂ ಗಣ್ಯರು ಸೇರಿ ಅಲ್ಲಿ ಉಪಸ್ಥಿತರಿದ್ದ ಮಹಿಳೆಯರಿಗೆ ಮಂಗಳದ್ರವ್ಯ ಸಮೇತ ಸೀರೆ ನೀಡಿದರು.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಈಗಾಗಲೇ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ಸೆಬಾಸ್ಟಿನ್ ಡೇವಿಡ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮಾಲಾಶ್ರೀ, ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ಡಾ.ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯದೊಂದಿಗೆ ಸಂಭಾಷಣೆಯನ್ನು ಬರೆಯುತ್ತಿದ್ದಾರೆ‌.

Continue Reading

ಕರ್ನಾಟಕ

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

Shreyas Patel: ಕಾಂಗ್ರೆಸ್‌ ಸಂಸದ ಶ್ರೇಯಸ್‌ ಎಂ. ಪಟೇಲ್‌ ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ಹೈಕೋರ್ಟ್‌ ಅನ್ನು ಕೋರಿದ್ದಾರೆ.

VISTARANEWS.COM


on

Shreyas Patel
Koo

ಬೆಂಗಳೂರು: ಹಾಸನ ಸಂಸದ ಶ್ರೇಯಸ್‌ ಪಟೇಲ್‌ (Shreyas Patel) ಆಯ್ಕೆ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್‌ ಅವರಿಂದ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ಶ್ರೇಯಸ್‌ ಪಟೇಲ್‌ಗೆ ನೊಟೀಸ್ ಜಾರಿ ಮಾಡಿ, ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿಕೆ ಮಾಡಿದೆ.

ಸಂಸದರಾಗಿ ಶ್ರೇಯಸ್‌ ಎಂ. ಪಟೇಲ್‌ ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಆದಾಯದ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ | Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Prajwal Revanna Case
Prajwal Revanna Case

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Student Missing: ಓದಿಲ್ಲ ಎಂದು ಬೈದದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಅದೇ ರೀತಿ ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Karnataka Weather Forecast : ಹಾವೇರಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಭಾರಿ ಮಳೆಯಿಂದಾಗಿ (Rain News) ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಜೀವ ಭಯದಲ್ಲೇ ದಾಟುತ್ತಿದ್ದಾರೆ.

VISTARANEWS.COM


on

By

karnataka weather forecast
Koo

ಹಾವೇರಿ: ಭಾರಿ ಮಳೆಗೆ (Rain News) ಕೆರೆ ಕೋಡಿ ಬಿದ್ದು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ. ಸುಮಾರು 30 ಹೆಚ್ಚು ಮನೆಗಳಿಗೆ ಕೆರೆ ನೀರು ನುಗ್ಗಿದೆ. ಹಾವೇರಿಯ ಹಿರೇಕೇರೂರು ತಾಲೂಕಿನ ಕಚವಿ ಗ್ರಾಮವು ಜಲಾವೃತಗೊಂಡಿದೆ. ಕೊಪ್ಪದ ಕೆರೆ ಕೋಡಿ ಬಿದ್ದು ಕಚವಿ ಗ್ರಾಮದತ್ತ ನೀರು (Karnataka Weather Forecast) ನುಗ್ಗಿದೆ.

karnataka Weather Forecast
karnataka weather Forecast

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೊಪ್ಪದ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮದತ್ತ ಹರಿದು ಬಂದಿದೆ. ಕಚವಿ ಗ್ರಾಮಸ್ಥರ ಬದುಕು ಬೀದಿಗೆ ಬಿದಿದ್ದು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಪೂರ್ತಿ ನೀರು ಹೊರ ಹಾಕಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ಆದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಗ್ರಾಮದ ವಯೋವೃದ್ದರು, ವಾಹನ ಸವಾರರರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ.

karnataka weather Forecast
karnataka weather Forecast

ಬಳ್ಳಾರಿಯಲ್ಲಿ ಭತ್ತದ ಬೆಳೆಗೆ ಹಾನಿ

ಮಳೆಯಿಂದ ಹಳ್ಳಗಳು ತುಂಬಿ ನೀರು ಹರಿದು ಭತ್ತದ ಬೆಳೆಗೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಜಾಲಿಹಾಳ್ ಗ್ರಾಮದ ನಾಲ್ಕು ಹಳ್ಳಗಳ ರೈತರು ಜರ್ಜರಿತರಾಗಿದ್ದಾರೆ. ಭಾರಿ ಮಳೆಗೆ ಹಳ್ಳಗಳು ಹರಿದ ಪರಿಣಾಮ 500 ಎಕರೆ ಭತ್ತ ಜಲಾವೃತಗೊಂಡಿದೆ. ಜಾಲಿಹಾಳ್ ಗ್ರಾಮದ ಸುತ್ತ ಕಟ್ರಳ್ಳ, ಕೈಮುರುಕನಹಳ್ಳ, ಗಂಗಮ್ಮನಹಳ್ಳ, ಈರ್ಲಹಳ್ಳಗಳು ಹರಿಯುತ್ತಿದೆ. ಭತ್ತ ನಾಟಿ ಮಾಡಿದ ಕೆಲ ದಿನಗಳಿಂದ ಭರ ಸಿಡಿಲಾಗಿ ಎರಗಿದ ಹಳ್ಳದ ನೀರಿನಿಂದ ಲಕ್ಷಾಂತರ ರೂ.ಗಳು ನಷ್ಟವಾಗಿದೆ.

ರಸ್ತೆಯ ಮೇಲೂ ಹಳ್ಳ ಹರಿದು ಜಾಲಿಹಾಳ್ ಮತ್ತು ಕಾರೇಕಲ್ಲು ಮಧ್ಯದ ರಸ್ತೆ ಕೊಚ್ಚಿ ಹೋಗಿದೆ. ಎಕರೆಗೆ 15 ರಿಂದ 20 ಸಾವಿರ ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದರು. ಕಳೆದ ಐದಾರು ದಿನಗಳಿಂದ ರೈತರ ಗದ್ದೆಯಲ್ಲಿ ನೀರು ಹರಿದಿದ್ದರಿಂದ ಭತ್ತದ ಸಸಿಗಳು ಕೊಳೆತು ಹೋಗಿದೆ.

ಇದನ್ನೂ ಓದಿ: Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ತುಂಬಿ ಹರಿಯುತ್ತಿರುವ ಕರಡಿ ಗ್ರಾಮದ ಹಳ್ಳ

ಬಾಗಲಕೋಟೆಯ ಇಳಕಲ್ಲ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕರಡಿ ಗ್ರಾಮದ ಹಳ್ಳ ತುಂಬಿ ಹರಿದಿದೆ. ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿರುವ ಪರಿಣಾಮ ಕರಡಿ ಗ್ರಾಮಸ್ಥರ ಸಂಚಾರಕ್ಕೆ ಅಡತಡೆಯಾಗಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದ ನೀರಲ್ಲೇ ನಡೆದು ಗ್ರಾಮಕ್ಕೆ ಹೋಗುವಂತಾಗಿದೆ. ಪುಟ್ಟ ಮಗು ಹೊತ್ತು ಹಳ್ಳ ದಾಟೋಕೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಸುರಿದಾಗ ಕರಡಿ, ದಾಸಬಾಳ , ಪಾಲತಿ , ಕೊಣ್ಣೂರ ಹುನಗುಂದ ಸಂಪರ್ಕ ಕಡಿತಗೊಂಡಿದೆ. ಶೀಘ್ರ ಮೇಲ್ಸೇತುವೆ ಕಾರ್ಯ ಮುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಳೆ ಅಬ್ಬರದ ಜತೆಗೆ ಭೂ ಕಂಪನದ ಅನುಭವ

ಶುಕ್ರವಾರ ಕೊಡಗು, ಹಾಸನ, ಮೈಸೂರು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಹೆಬ್ಬಾಲೆ ಸಮೀಪ, ಸೂಳೆಕೋಟೆ, ಅಡಗೂರು‌‌ ಹಾಗೂ ಕಣಗಾಲು ಹಾಗೂ ಕುಶಾಲನಗರ ಜ್ಞಾನಭಾರತಿ ಶಾಲೆ ಹಿಂಭಾಗ, ಭಸವತ್ತೂರು ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಶುಕ್ರವಾರ ಮುಂಜಾನೆ 6.30ರ ಸಮಯಕ್ಕೆ 2ರಿಂದ3 ಸೆಕೆಂಡ್ ಭೂಮಿ ಕಂಪಿಸಿದೆ. ಭೂಕಂಪನ ಹಿನ್ನೆಲೆಯಲ್ಲಿ ಕೆಲಕಾಲ ಜನರು ಆತಂಕಗೊಂಡರು.

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Non Vegetarian Population
ಆಹಾರ/ಅಡುಗೆ3 mins ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Cheapest Currency
ವಾಣಿಜ್ಯ18 mins ago

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ಪ್ರಮುಖ ಸುದ್ದಿ26 mins ago

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Health Tips
ಆರೋಗ್ಯ27 mins ago

Health Tips: ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ

Goodbye to black robes
ದೇಶ42 mins ago

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Kolkata Doctor Murder Case
ಕ್ರೈಂ45 mins ago

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

Kannada New Movie
ಬೆಂಗಳೂರು54 mins ago

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

Viral Video
Latest1 hour ago

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

Shreyas Patel
ಕರ್ನಾಟಕ1 hour ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ1 hour ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌