ಬೆಂಗಳೂರು: ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ, “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಧ್ವನಿಯಾಗಿದ್ದಾರೆ. (Kannada New Movie) ಸುಮಾರು 130 ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿರುವ ರವೀಂದ್ರ ಸೊರಗಾವಿ ಅವರಿಗೆ ಇತ್ತೀಚೆಗೆ ಚಂದನವನ ಕ್ರಿಟಿಕ್ಸ್ ಅಕಾಡೆಮಿಯ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಪಡೆದಿದ್ದಾರೆ.
ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ವಿಶೇಷವಾಗಿ ಗುರುಪರಂಪರೆ ಹೇಳುವ ಹಾಡು ನಿರ್ದೇಶಕ ರಾಜಾ ರವಿಶಂಕರ್ ರಚಿಸಿದ್ದಾರೆ ಸಂಗೀತವನ್ನು ನಿರ್ದೇಶಕ ಎ.ಟಿ. ರವೀಶ್ ಸಂಯೋಜಿಸಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ದಿವ್ಯ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಅಡಿಯಲ್ಲಿ ನಿರ್ಮಾಪಕ ಮಾಧವಾನಂದ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರುತ್ತಿದೆ.
ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೇ ಆದ ಮಹತ್ವವಿದೆ. ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು. ಕಲಿಯುಗದ ಕಲ್ಪತರುವೆಂದೇ ಖ್ಯಾತರಾಗಿರುವ ಶ್ರೀ ಸಂಗಮೇಶ್ವರರ ಚಿತ್ರದ ಹಾಡುಗಳು ಹಾಗು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀ ಪ್ರಭುಜೀ ಮಹಾರಾಜರು ಆಶೀರ್ವದಿಸಿದರು.
ನೂತನ ಪ್ರತಿಭೆ ರವಿ ನಾರಾಯಣ್ ಶ್ರೀ ಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ ಹಾಗೂ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ
ರಾಜಾ ರವಿಶಂಕರ್ ನಿರ್ದೇಶನ, ಸಿ. ನಾರಾಯಣ್ ಛಾಯಾಗ್ರಾಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.