ಬೆಂಗಳೂರು: ತೆಲಂಗಾಣದ ಹೈದರಾಬಾದ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಕನ್ನಡಿಗರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘವು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನಿಸಿದೆ.
ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾದ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮೇಂದ್ರ ಪೂಜಾರಿ ಬಗ್ದೂರಿ ಹಾಗೂ ಮಹೇಶ ಮುಂಗಡೆ, ಕನ್ನಡಿಗರ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ಪತ್ರಿಕೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಲಿದ್ದಾರೆ ಎಂದು ಸಂಘ ಹೇಳಿಕೊಂಡಿದೆ. ಈ ಸಂದರ್ಭದಲ್ಲಿ ಸಚಿನ್ ನುಚ್ಚಾ, ಶ್ರೀಕಾಂತ ಹೊನ್ನಾಳೆ, ಪ್ರಕಾಶ್ ಬಿರಾದಾರ, ರಾಹುಲ್ ಹಾಗೂ ಹಂಗರಗೇ ಉಪಸ್ಥಿತರಿದ್ದರು.
ಇದನ್ನೂ ಓದಿ | ಸಪ್ತಕ ಸಂಸ್ಥೆಯಿಂದ ಅ.29ರಂದು ʼಲಲಿತಾ ನಮನʼ ವಿಶೇಷ ಸಂಗೀತ ಕಾರ್ಯಕ್ರಮ