Site icon Vistara News

Karnataka Bandh : ಕನ್ನಡ ಹೋರಾಟಗಾರರ ಬಂಧನಕ್ಕೆ ಎಚ್‌ಡಿಕೆ ಆಕ್ಷೇಪ, ತಕ್ಷಣ ಬಿಡುಗಡೆಗೆ ಆಗ್ರಹ

HD Kumaraswamy

ಬೆಂಗಳೂರು: ಸೆಪ್ಟೆಂಬರ್‌ 29ರ ಕರ್ನಾಟಕ ಬಂದ್‌ (Karnataka Bandh) ಸಂದರ್ಭದಲ್ಲಿ ಮತ್ತು ಬಂದ್‌ಗೆ ಪೂರ್ವಭಾವಿಯಾಗಿಯೇ ಹಲವಾರು ನಾಯಕರನ್ನು, ಕನ್ನಡ ಸಂಘಟನೆ ಕಾರ್ಯಕರ್ತರನ್ನು (Kannada Activists) ಪೊಲೀಸರು ಬಂಧಿಸಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.‌ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.

ಬಲ ಪ್ರಯೋಗದ ಮೂಲಕ ಹೋರಾಟವನ್ನು, ಬಂದ್‌ ಅನ್ನು ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದ್ದು, ಅದನ್ನು ವಿರೋಧಿಸುವುದಾಗಿ ಅವರು ಹೇಳಿದ್ದಾರೆ.

ʻʻಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್ ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆ ಆಗಬೇಕು. @INCKarnataka ಸರಕಾರವೂ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕುʼʼ ಎಂದು ಕಾವೇರಿ_ನಮ್ಮದು/ಕರ್ನಾಟಕ_ಬಂದ್ ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ತಿಳಿಸಿದ್ದಾರೆ.

ಕನ್ನಡ ಹೋರಾಟಗಾರರಿಗೆ ಪೊಲೀಸರು ನೀಡಿದ ಎಚ್ಚರಿಕೆ ಏನು?

  1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
  2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. 3, ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
  3. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
  4. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದನ್ನು ನಿಷೇಧಿಸಲಾಗಿದೆ.
  5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರ ಯಾವುದೇ ವಸ್ತುಗಳನ್ನುಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
  6. ಶವಯಾತ್ರೆಗೆ ತೆರಳುವವರಿಗೆ ಮೇಲ್ಕಂಡ ನಿಷೇಧಾಜ್ಞೆಯಿಂದ ವಿನಾಯತಿ ನೀಡಲಾಗಿರುತ್ತದೆ.

ಇದನ್ನೂ ಓದಿ : Karnataka Bandh : ಯಾರ‍್ರೀ ಈ ವಾಟಾಳ್‌ ನಾಗರಾಜ್?‌ ಅವರು ಹೇಳಿದ್ರೂಂತ ನಾವ್ಯಾಕೆ ಬಂದ್‌ ಮಾಡ್ಬೇಕು?

Exit mobile version