ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬೆಂಗಳೂರಿನ 100ಕ್ಕೂ ಅಧಿಕ ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರಿಂದ ರೌಡಿಶೀಟರ್‌ಗಳ ಮನೆಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರು ಪೂರ್ವ ವಿಭಾಗದ ಹಲಸೂರು, ಬಾಣಸವಾಡಿ, ಇಂದಿರಾನಗರ, ಬೈಯಪ್ಪನಹಳ್ಳಿ ರಾಮಮೂರ್ತಿನಗರ ಠಾಣಾ ವ್ಯಾಪ್ತಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಶುಕ್ರವಾರ ಸಂಜೆ 5 ಗಂಟೆಯಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: Goolihatti Shekhar: ಚುನಾವಣೆಯಿಂದ ಹಿಂದೆ ಸರಿಯಲ್ಲ; ಗೊಂದಲದ ಬಳಿಕ ಗೂಳಿಹಟ್ಟಿ ಶೇಖರ್ ಸ್ಪಷ್ಟನೆ
ಚುನಾವಣೆ ಸಂದರ್ಭದಲ್ಲಿ ಅಶಾಂತಿ ಉಂಟು ಮಾಡುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ರೌಡಿ ಶೀಟರ್‌ಗಳ ಚಟುವಟಿಕೆ ಮೇಲೆ ನಿಗಾ ಕೂಡ ಇರಿಸಲಾಗಿದೆ. ಹಾಗೆಯೇ, ನಗರದಲ್ಲಿ ಯಾವುದೇ ರೀತಿಯ ಹಿಂಸೆ, ಗಲಾಟೆಯಂತಹ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಖಡಕ್ ಸೂಚನೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ.