Site icon Vistara News

Karnataka Election : ಈ ಬಾರಿ ಕನಕಪುರದಲ್ಲೂ ಕಮಲ ಅರಳುತ್ತದೆ; ಸಿಎಂ ಬೊಮ್ಮಾಯಿ ವಿಶ್ವಾಸ

CM Bommai Road Show at kanakapura

#image_title

ರಾಮನಗರ (ಕನಕಪುರ): ʻʻನಿಮ್ಮ ಉತ್ಸಾಹ ನೋಡಿದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆʼʼ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (CM Basavaraja Bommai). ಭಾನುವಾರ ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ (R Ashok) ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು.

ʻಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೋಕ್‌ ಅವರೇ ಬರಬೇಕು ಅಂತ ತೀರ್ಮಾನ ಮಾಡಿದ್ದೇವೆʼʼ ಎಂದರು.

ʻʻಡಬಲ್ ಎಂಜಿನ್ ಸರ್ಕಾರ ಮತ್ತು ಮೋದಿಯವರು ವ್ಯಾಕ್ಸಿನೇಷನ್‌ ಕೊಟ್ಟಿದ್ದರಿಂದ ನಾವೆಲ್ಲ ಕೋವಿಡ್ ಮುಕ್ತರಾಗಿದ್ದೇವೆ. ಕಾಂಗ್ರೆಸ್ ನವರು ಲಸಿಕೆ ವಿರುದ್ಧ ಅಪ ಪ್ರಚಾರ ಮಾಡಿದ್ದರು. ಪ್ರವಾಹ ಬಂದಾಗ ಬೆಳೆ ಪರಿಹಾರ ಡಬಲ್ ಪರಿಹಾರ ಕೊಟ್ಟಿದ್ದೇವೆʼʼ ಎಂದರು.

ʻʻಅಶೋಕ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದೇವೆ. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮಗಳಲ್ಲಿನ ಜನರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಇಂತಹ ವ್ಯಕ್ತಿ ಇಲ್ಲಿ ಶಾಸಕರಾಗಬೇಕೊ? ಬೇಡ್ವೊ. ನಾನು ಸಿಎಂ ಆದ ತಕ್ಷಣ ವಿದ್ಯಾನಿಧಿ ಯೋಜನೆ ಕೊಟ್ಟಿದ್ದೇನೆ. ಇದರಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆʼʼ ಎಂದರು.

ʻʻಕಾಂಗ್ರೆಸ್‌ನವರು ಗ್ಯಾರಂಟಿ ಅಂತ ಬರುತ್ತಿದ್ದಾರೆ. ಯಾವುದು ಮಾರಾಟವಾಗುವುದಿಲ್ಲವೋ, ಅದಕ್ಕೆ ಗ್ಯಾರಂಟಿ ಕೊಡುತ್ತಾರೆ. ಕಾಂಗ್ರೆಸ್‌ಗೆ ಈಗ ಗ್ಯಾರೆಂಟಿ ಇಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ನಾವು 2013 ರಲ್ಲಿಯೇ ಕೊಡುತ್ತಿದ್ದೇವೆ. ಅದನ್ನು ಕಡಿಮೆ ಮಾಡಿದವರು ಇವರೇʼʼ ಎಂದರು.

ʻʻಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ. ಅವರು ಭ್ರಷ್ಟಾಚಾರ ಮಾಡಿ ನಮ್ಮ ಕಡೆ ಬೆರಳು ತೋರುತ್ತಿದ್ದಾರೆ. ಆದರೆ ಮೂರು ಬೆರಳು ಅವರ ಕಡೆ ತೋರಿಸುತ್ತವೆ. ಕಾಂಗ್ರೆಸ್ ಸಮಾಜ ಒಡೆಯುವ ಪಕ್ಷ. ಸಮುದಾಯಗಳನ್ನು ಒಡೆದು ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸಮಾಜ ಒಡೆಯುವವರು ಬೇಕೋ, ಸಮಾಜ ಒಗ್ಗೂಡಿಸುವ ಬಿಜೆಪಿ ಬೇಕೋʼʼ ಎಂದರು.

ಸಮಾಜವನ್ನೂ ಒಗ್ಗೂಡಿಸುವುದು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಕನಕಪುರದಲ್ಲಿ ಅಶೋಕ ಅವರ ಕೈ ಬಲ ಪಡಿಸಿ, ಅಶೋಕ ಅವರನ್ನು ಗೆಲ್ಲಿಸಿಕೊಂಡು ಬನ್ನಿ, ಕನಕಪುರ ಕ್ಷೇತ್ರಕ್ಕೆ ಎಷ್ಟು ಅನುದಾನ‌ ಬೇಕೋ, ಅಷ್ಟು ನಾನು ಕೊಡುತ್ತೇನೆ ಎಂದರು. ಬೊಮ್ಮಾಯಿ ಅವರ ಜತೆ ಬಿಜೆಪಿ ಅಭ್ಯರ್ಥಿ ಆರ್‌. ಅಶೋಕ್‌ ಮತ್ತು ಚಿತ್ರ ನಟಿ ಶ್ರುತಿ ಕೂಡಾ ಭಾಗವಹಿಸಿದ್ದರು.

ಇದನ್ನೂ ಓದಿ : Karnataka Election : ಕನಕಪುರ ಕೈಬಿಡ್ತಾ ಬಿಜೆಪಿ? ಡಿಕೆಶಿ ಬದಲು ವರುಣದಲ್ಲಿ ಸಿದ್ದುವೇ ಮೇನ್‌ ಟಾರ್ಗೆಟ್‌

Exit mobile version