ಬೆಂಗಳೂರು: ನಗರಾಭಿವೃದ್ಧಿ, ಸಾಮಾಜಿಕ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ (ಎಲ್ಲರನ್ನೂ ಒಳಗೊಳ್ಳುವ) ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದಲ್ಲಿ ಕರ್ನಾಟಕ ಸರ್ಕಾರ ಸರ್ಕಾರ ಸಾಗುತ್ತದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೊಟ್ ಹೇಳಿದ್ದಾರೆ. ಶುಕ್ರವಾರದಿಂದ ಆರಂಭವಾದ ವಿಧಾನ ಮಂಡಲ ಅಧಿವೇಶನದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.
ನನ್ನ ಸರ್ಕಾರವು ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಜತೆಗೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು ನನ್ನ ಸರ್ಕಾರ ಅನುಸರಿಸುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ ಎಂದು ಭಾಷಣವನ್ನು ಆರಂಭಿಸಿದರು. ರಾಜ್ಯಪಾಲರ ಭಾಷಣದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.
ಭಾಷಣದ ಪ್ರಮುಖ ಅಂಶಗಳು
- ನನ್ನ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011ರ ಕಲಂ 2(ಡಿ) “ಭೂಮಿ” ಎಂಬ ಪರಿಭಾಷೆಗೆ ತಿದ್ದುಪಡಿ ತಂದು ಬಿ.ಬಿ.ಎಂ.ಪಿ. ವ್ಯಾಪ್ತಿಯ 18 ಕಿಲೋ ಮೀಟರ್, ಮಹಾ ನಗರ ಪಾಲಿಕೆ ವ್ಯಾಪ್ತಿಯ 10 ಕಿಲೋ ಮೀಟರ್, ನಗರಪಾಲಿಕೆ ವ್ಯಾಪ್ತಿಯ 5 ಕಿಲೋ ಮೀಟರ್, ಪುರಸಭೆ ವ್ಯಾಪ್ತಿಯ 3 ಕಿಲೋಮೀಟರ್ಗೆ ಸೀಮಿತಗೊಳಿಸಿ, ಇತರೆ ಪ್ರದೇಶಗಳನ್ನು ಹೊರತುಪಡಿಸಲಾಗಿದೆ.
- ಅಂತಿಮವಾಗಿ, ಕರ್ನಾಟಕವು ತನ್ನ ಪ್ರಗತಿಪರ, ಪುಜಾಸ್ನೇಹಿ ಯೋಜನೆಗಳ ಮುಖೇನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯವು ಹಲವು ರಂಗದಲ್ಲಿ ಕೈಗೊಳ್ಳುವ ಹೊಸ ಯೋಜನೆ, ಕಾರ್ಯಕ್ರಮಗಳು ಇತರ ರಾಜ್ಯಗಳಿಗೆ ಮಾದರಿಯಾಗಿರುತ್ತವೆ.
- ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ, 400 ಕೋಟಿ ರೂಪಾಯಿಗಳನ್ನು ಒದಗಿಸಿದ್ದು, 386.98 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಿಂದ 53.22 ಲಕ್ಷ ರೈತರುಗಳಿಳಿಗೆ ಅನುಕೂಲವಾಗಿದೆ.
- ನನ್ನ ಸರ್ಕಾರವು ಅಮೃತ ಮಹೋತ್ಸವದ ಅಂಗವಾಗಿ 750 ಅಮೃತ ರೈತ / ಮೀನುಗಾರರ / ನೇಕಾರರ ಉತ್ಪಾದಕರ ಸಂಸ್ಥೆಗಳನ್ನು ರಚಿಸಿರುವುದಾಗಿ ಘೋಷಿಸಿದ್ದು, ಇಲ್ಲಿಯವರೆಗೆ 364 ಸಂಸ್ಥೆಗಳನ್ನು ನೊಂದಾಯಿಸಲಾಗಿದೆ.
- ಪುಸಕ್ತ ಸಾಲಿನಲ್ಲಿ 50,335 ರೈತರ ತಾಕುಗಳಲ್ಲಿ ಸುಮಾರು 27,910 ಹೆಕ್ಟೇರ್ ಪ್ರದೇಶದಲ್ಲಿ ಇಲಾಖೆಯ ವತಿಯಿಂದ ತೋಟಗಾರಿಕ – ಬೆಳಗಳನ್ನು ವಿಸ್ತರಿಸಲಾಗಿದೆ.
- ಕರ್ನಾಟಕ ರಾಜ್ಯವು ರೇಷ್ಮೆ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿದೆ. 1.15 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಹಿಪ್ಪು ನೇರಳ ಬೇಸಾಯವಿದ್ದು, 1.38 ಲಕ್ಷ ರೈತ ಕುಟುಂಬಗಳು ರೇಷ್ಮ ಕೃಷಿಯಲ್ಲಿ ತೊಡಗಿದ್ದು, ವಾರ್ಷಿಕವಾಗಿ 11,191 ಮೆಟ್ರಿಕ್ನಷ್ಟು ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲಾಗಿದೆ. ಅಂದಾಜು 14.91 ಲಕ್ಷ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ.
- ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಅಶಕ್ತ, ಅನಾರೋಗ್ಯ ಪೀಡಿತ ನಿರ್ಗತಿಕ, ರೈತರು ಸಾಕಲಾಗದ ಜಾನುವಾರುಗಳನ್ನು ಸಂರಕ್ಷಣೆ ಮಾಡಲು ರಾಜ್ಯ ಸರ್ಕಾರದಿಂದ 100 ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಗೋ ಶಾಲೆಗಳಲ್ಲಿರುವ ಜಾನುವಾರುಗಳನ್ನು ಸಂರಕ್ಷಿಸಲು ಸಾರ್ವಜನಿಕ ಸಹಭಾಗಿತ್ವವನ್ನು ಪ್ರೋತ್ಸಾಹಿಸುವ ಪುಣ್ಯಕೋಟಿ ದೇಶದಲ್ಲಿಯೇ ಪ್ರಥಮವಾಗಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಕೋಟಿ ರೂಪಾಯಿಗಳನ್ನು ತಮ್ಮ ವೇತನದಿಂದ 26.97 ಸ್ವ-ಪ್ರೇರಣೆಯಿಂದ ವಂತಿಗೆಯಾಗಿ ನೀಡಿರುವುದನ್ನು ನನ್ನ ಸರ್ಕಾರವು ಪಶಂಸಿಸುತ್ತದೆ.
- ನನ್ನ ಸರ್ಕಾರವು ಉನ್ನತ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಅದರನ್ವಯ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತಂದಿದೆ. ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನದಲ್ಲಿ 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದು, 7 ಇಂಜಿನಿಯರಿಂಗ್ ರ್ಕಾಲೇಜುಗಳನ್ನು ಐ.ಐ.ಟಿ. ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
- ನನ್ನ ಸರ್ಕಾರವು ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ಸಮುದಾಯವನ್ನು ಮೇಲೆತ್ತಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರನ್ವಯ, ಶಿಕ್ಷಣ ಮತ್ತು ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇಕಡ 15 ರಿಂದ 17ಕ್ಕೆ ಪರಿಶಿಷ್ಟ ಪಂಗಡದವರಿಗೆ ಶೇಕಡ 3 ರಿಂದ 7ಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಿ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಪಿ / ಟಿ.ಎಸ್.ಪಿ ಅಡಿ 29 ಸಾವಿರ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.
- ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗಳಷ್ಟು ಉಚಿತ ವಿದ್ಯುತ್ ನೀಡಲಾಗುತ್ತಿದೆ. ವಸತಿ ಜಾತಿ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸಹಾಯಧನವನ್ನು 1.75 ಲಕ್ಷ ರೂಪಾಯಿಗಳಿಂದ 2 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
- ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಸಹಯೋಗದೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಸ್ಮಾಪಿಸಲಾಗಿದೆ.
- ಮೈಸೂರು, ಬೆಂಗಳೂರು ಚನ್ನೈ ಸೆಮಿ-ಹೈಸ್ಪೀಡ್ ರೈಲು ಸೇವೆ ವಂದೇ ಭಾರತ್ ಏಕ್ಸ್ಪ್ರೆಸ್ ಪ್ರಾರಂಭಿಸಲಾಗಿದೆ.
- ಬೆಂಗಳೂರು ನಗರವನ್ನು ವಿಶ್ವಮಟ್ಟದಲ್ಲಿ ಗುರುತಿಸಲಾಗಿದೆ. ಅದಕ್ಕಾಗಿ, ಬೆಂಗಳೂರು ನಗರದ ಮೂಲಸೌಲಭ್ಯ ಮತ್ತು ಅಭಿವೃದ್ಧಿಗೆ ಒತ್ತುಕೊಟ್ಟು ಹಲವು ಕ್ರಮಗಳನ್ನು ನನ್ನ ಸರ್ಕಾರವು ನಿರಂತರವಾಗಿ ಕೈಗೊಳ್ಳುತ್ತಿದೆ. ಸರ್ಕಾರವು 8000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೆಂಗಳೂರು ನಗರದಾದ್ಯಂತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಳಾದ ರಸ್ತೆಗಳು, ಮಳೆ ನೀರು ಚರಂಡಿಗಳು, ಮೇಲೆತುವೆಗಳು, ಕೆಳ ಸೇತುವೆಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತ ಯೋಜನೆಗಳನ್ನು ಈ ಅನುದಾನದಲ್ಲಿ ಉಪಯೋಗಿಸಲಾಗುತ್ತಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರತ್ಯೇಕ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿ, ಕಂಪನಿಯನ್ನು ಸ್ಥಾಪಿಸಲಾಗಿದೆ.
- ಬೆಂಗಳೂರು ಮೆಟ್ರೋ ರೈಲು ಯೋಜನೆಯು ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ 7.53 ಕಿ.ಮೀ.ಗಳ ಮತ್ತು ಯಲಚೇನಹಳ್ಳಿಯಿಂದ ಸಿಲ್, ಇನ್ಸ್ಸ್ಟಿಟ್ಯೂಟ್ವರೆಗೆ 6.12 ಕಿ.ಮೀ. ಸೇರಿ ಒಟ್ಟು 13.65 ಕಿ.ಮೀ. ಕಾಮಗಾರಿ ಪೂರ್ಣಗೊಂಡು ಕಾರ್ಯಾರಂಭಗೊಂಡಿದೆ. ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ವರೆಗಿನ 15.81 ಕಿ.ಮೀ. ಉದ್ದದ ಕಾಮಗಾರಿಗಳು ಮಾರ್ಚ್ 2023 ರ ವೇಳೆಗೆ ಕಾರ್ಯಾರಂಭ ಮಾಡಲಾಗುವುದು, ಹೊರ ವರ್ತುಲ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.
- ನನ್ನ ಸರ್ಕಾರವು ನೀರಾವರಿ ಕ್ಷೇತ್ರದಲ್ಲಿ ಯೋಜನೆಗಳನ್ನು ಕೈಗೊಂಡಿದೆ. ಇದರ ಭಾಗವಾಗಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯ 2.25 ಲಕ್ಷ ಹೆಕ್ಟೇರ್ ವುದೇಶಕ್ಕೆ ಸೂಕ್ಷ್ಮ ನೀರಾವರಿ ಒದಗಿಸುವುದು ಮತ್ತು 367 ಕೆರೆ ತುಂಬಿಸುವ ಭದ್ರಾ ಮೇಲ್ದಂಡ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾನ್ಯತೆ ನೀಡಿ ಕೇಂದ್ರ ಸರ್ಕಾರವು 5,300 ಕೋಟಿ ರೂಪಾಯಿಗಳನ್ನು ಒದಗಿಸಿದೆ.
- ಕೃಷ್ಣಾ ಮೇಲ್ಕಂಡ ಯೋಜನೆ ಹಂತ-3 ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ 527 ಕೆರೆಗಳಿಗೆ ನೀರು ತುಂಬಿಸಲಾಗುವುದು. ಕಳಸಾ ಬಂಡೂರಾ ನಾಲಾ ತಿರುವು ಯೋಜನೆಗಳ (Lift Scheme) ವಿಸ್ತ್ರತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗವು ಸಮ್ಮತಿಸಿದೆ.
- ನನ್ನ ಸರ್ಕಾರವು ರಾಜ್ಯದಲ್ಲಿ ಮೊಟ್ಟ ಮೊದಲನೆಯ ಬಾರಿಗೆ ಅಭಿವೃದ್ಧಿ ಚಟುವಟಿಕೆಗಳಿಂದ ಆಗಿರುವ ಹಾನಿಯನ್ನು ಸರಿದೂಗಿಸಲು ಹಸಿರು ಆಯವ್ಯಯವನ್ನು ತಯಾರಿಸಿದ್ದು, ಇದರಡಿ ಅನೇಕ ಕಾರ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಗ್ಗಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಮಾನವ ಪ್ರಾಣಹಾನಿ, ಅಂಗವಿಕಲತೆ, ಆಸ್ತಿ ನಷ್ಟಗಳಿಗೆ ನೀಡುತ್ತಿದ್ದ ಪರಿಹಾರ ಧನವನ್ನು ಪರಿಷ್ಕರಿಸಿ ಹೆಚ್ಚಿಸಲಾಗಿದೆ. ಮಾನವ ಪ್ರಾಣಹಾನಿಗೆ ನೀಡುತ್ತಿದ್ದ. ಪರಿಹಾರವನ್ನು 15 ಲಕ್ಷಕ್ಕೆ ಹೆಚ್ಚಿಸಲಾಗಿದೆ.
- ಸರ್ಕಾರವು ತಸ್ತಿಕ್ ಭತ್ಯೆಯನ್ನು 48 ಸಾವಿರದಿಂದ 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದ. ಆತ್ಮನ್ ಮುಖಾಂತರ ಭಕ್ತಾಧಿಗಳಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಐ.ಟಿ.ಎಂ.ಎಸ್ (Intigrated Temple Management System) ತಂತ್ರಾಂಶವನ್ನು ರೂಪಿಸಿದ. ಕರ್ನಾಟಕ ರಾಜ್ಯದಿಂದ ಕಾಶಿಯಾತ್ರೆ ಕೈಗೊಳ್ಳಲು 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5,000 ರೂಪಾಯಿಗಳ ಸಹಾಯಧನ ನೀಡಲಾಗುತ್ತಿದೆ. ಪುಣ್ಯ ಕ್ಷೇತ್ರ ಪವಾಸ ಕೈಗೊಳ್ಳಲು ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ಭಾರತ್ ಗೌರವ ಯೋಜನೆಯನ್ನು ಕೈಗೊಂಡಿದೆ.
- ನನ್ನ ಸರ್ಕಾರವು ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ ಪಠ್ಯಕ್ರಮದೊಂದಿಗೆ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಿದೆ.
- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಗಳಿಗೆ ನೀಡಲಾಗುತ್ತಿರುವ ಗೌರವಧನವನ್ನು ಅವರುಗಳು ಸಲ್ಲಿಸಿರುವ ಸೇವಾ ಅವಧಿಯ ಆಧಾರದ ಮೇರೆಗೆ ಕನಿಷ್ಠ ರೂ.1000 ರಿಂದ ರೂ.1500 ರವರೆಗೆ ಹೆಚ್ಚಿಸಲಾಗಿದೆ.
- ರಾಜ್ಯದ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, 271 ನಮ್ಮ ಕ್ಲಿನಿಕ್ ಗಳು ಕಾರ್ಯಾರಂಭ ಮಾಡಿವೆ. ಅನುಮೋದನೆಯಾಗಿರುವ 128 ಮಹಿಳಾ ಸ್ವಾಸ್ಥ್ಯ ಕೇಂದ್ರಗಳಲ್ಲಿ 53 ಮಹಿಳಾ ಸ್ವಾಸ್ಥ್ಯ ಕೇಂದ್ರಗಳು ಸಾರ್ವಜನಿಕ ಸೇವೆಗೆ ಸಿದ್ಧವಿದ್ದು, ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿವೆ.
- ನನ್ನ ಸರ್ಕಾರವು 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು ಚಾಮರಾಜನಗರದಲ್ಲಿ ಕಾರ್ಯಾರಂಭ ಮಾಡಿದ್ದು, ಕೊಡಗು ಮತ್ತು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಥಾಪಿಸಲು ಕ್ರಮ ಕೈಗೊಂಡಿದ್ದು, ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಪ್ರಸಕ್ತ ವರ್ಷದಲ್ಲಿ ಕೇಂದ್ರ ಸಹಭಾಗಿತ್ವದೊಂದಿಗೆ ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ 150 ಸೀಟುಗಳ ಸಾಮರ್ಥ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ Fetal Medicine & Neonatology ವಿಭಾಗಗಳನ್ನು ಮತ್ತು ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾಕೇರ್ ಕೇಂದ್ರವನ್ನು ಆರಂಭಿಸಲು ಕ್ರಮಕೈಗೊಳ್ಳಲಾಗಿದೆ.
- ರಾಜ್ಯದ ಪ್ರಜೆಗಳಿಗೆ ರಕ್ಷಣೆ ನೀಡುವುದು ಯಾವುದೇ ಸರ್ಕಾರದ ಪರಮ ಗುರಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನನ್ನ ಸರ್ಕಾರವು ಪೊಲೀಸ್ ಇಲಾಖೆಯನ್ನು ಬಲಪಡಿಸಲು ಕಳೆದ 3 ವರ್ಷಗಳಲ್ಲಿ 16,811 ಹುದ್ದೆಗಳನ್ನು ಭರ್ತಿ ಮಾಡಿದ. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರ ವಸತಿ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಅನುದಾನ ಒದಗಿಸಲಾಗಿದೆ. ಅಪರಾಧ ಪ್ರಕರಣಗಳಲ್ಲಿ ತನಿಖೆಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತಗೊಳಿಸಲು ಅನುಕೂಲವಾಗುವಂತೆ 8 ವಿಧಿ ವಿಜ್ಞಾನ ಪುಯೋಗಾಲಯಗಳನ್ನು ಸ್ಥಾಪಿಸಲಾಗಿದೆ.
- ನನ್ನ ಸರ್ಕಾರವು ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆ ಮತ್ತು ಬೆಳವಣಿಗೆಗೆ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. 67ನೇ ಕನ್ನಡ ರಾಜ್ಯೋತ್ಸವ ಪುಯುಕ್ತ ‘ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಜಗತ್ತಿನ 51 ರಾಷ್ಟ್ರಗಳು, ದೇಶದ 28 ರಾಜ್ಯಗಳು, 21 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ 1.37 ಕೋಟಿ ಕಂಠಗಳಲ್ಲಿ 6 ಗೀತೆಗಳನ್ನು ಹಾಡಲಾಯಿತು. ರಾಜ್ಯದ ಪ್ರಶಸ್ತಿಯಾದ ನಾಗರಿಕ ಪ್ರಶಸ್ತಿಯನ್ನು ದಿವಂಗತ ಪುನೀತ್ ರಾಜ್ ಕುಮಾರ್ ರವರಿಗೆ ಮಾಡಲಾಯಿತು. ಪುದಾನ ಮರಣೋತ್ತರವಾಗಿ ಹೋಗುತ್ತಿರುವ ಸಮುದಾಯಗಳಲ್ಲಿರುವ ಕಲೆಗಳನ್ನು ಉಳಿಸಿ ಮುನ್ನೆಲೆಗೆ ತರಲು “ಮೂಲ ಸಂಸ್ಕೃತಿ – ಕನ್ನಡ ಸಂಸ್ಕೃತಿ’ ಹೆಸರಿನಲ್ಲಿ ರಾಜ್ಯ ಮಟ್ಟದ ಬೃಹತ್ ಕರ್ನಾಟಕ ಲಂಬಾಣಿ ಉತ್ಸವವನ್ನು ಆಯೋಜಿಸಲಾಗಿದೆ.
- ನನ್ನ ಸರ್ಕಾರವು ಕನ್ನಡ ಮತ್ತು ಕರ್ನಾಟಕದ ಇತರೆ ಪ್ರಾದೇಶಿಕ ಭಾಷೆಯ ಚಲನ ಚಿತ್ರಗಳಿಗೆ ನೀಡುತ್ತಿರುವ ಸಹಾಯಧನವನ್ನು 125 ರಿಂದ 200 ಚಲನಚಿತ್ರಗಳಿಗೆ ಹೆಚ್ಚಿಸಲಾಗಿದೆ. ನಾದದ ನವನೀತ ಡಾ: ಪಂಡಿತ್ ವೆಂಕಟೇಶ್ ಕುಮಾರರವರ ಕುರಿತು ಇಲಾಖೆಯು ನಿರ್ಮಿಸಿರುವ ಸಾಕ್ಷ್ಯ ಚಿತ್ರವು “ರಜತ ಕಮಲ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗಳಿಸಿದೆ.
- ರಾಜ್ಯದ ರಾಜಸ್ವ ಸಂಗ್ರಹಣೆಯು ಜನವರಿ 2023 ಕ್ಕೆ ಶೇಕಡಾ 91 ರಷ್ಟು ಸಾಧಿಸಲಾಗಿದೆ. ರಾಜ್ಯದ ಸ್ವಂತ ತೆರಿಗೆ ರಾಜಸ್ವವು ಕಳೆದ ಸಾಲಿಗೆ ಹೋಲಿಸಿದರೆ ಜನವರಿ 2023ಕ್ಕೆ ಶೇಕಡಾ 21ರಷ್ಟು ಹೆಚ್ಚಳವಾಗಿದೆ. ಜನವರಿ 2023ಕ್ಕೆ ಬಂಡವಾಳ ವೆಚ್ಚವು 33,991 ಕೋಟಿ ರೂಪಾಯಿಗಳಾಗಿದೆ. ಕಳೆದ ಸಾಲಿನಲ್ಲಿ ಇದು 26,915 ಕೋಟಿ ರೂಪಾಯಿಗಳಾಗಿತ್ತು. ಜನವರಿ 2023ರ ಹೊತ್ತಿಗೆ ಆಯವ್ಯಯ ಅಂದಾಜಿನ ಶೇಕಡಾ 75 ರಷ್ಟನ್ನು ನನ್ನ ಸರ್ಕಾರವು ವೆಚ್ಚ ಮಾಡಿದೆ. ಇದು ಕಳೆದ ಕೆಲ ವರ್ಷಗಳಿಗೆ ಹೋಲಿಸಿದ್ದಲ್ಲಿ, ಹೆಚ್ಚಾಗಿರುವುದು ಕಂಡು ಬರುತ್ತದೆ.
- 1475 ತಾಂಡಾ, ಗೊಲ್ಲರಹಟ್ಟಿ, ಕುರುಬರಹಟ್ಟಿ ಮತ್ತು ಇತರ ದಾಖಲೆ ರಹಿತ ಜನ ವಸತಿ ಪುದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿದ್ದು, ಇತ್ತೀಚಿಗೆ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಮ್ಮುಖದಲ್ಲಿ 52,000 ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ.