Site icon Vistara News

Karnataka Live News: ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; 32 ಶಾಸಕರಿಗೆ ಅಧಿಕಾರ

Nigama Mandali AppointMent NA Haris Shivalinge gowda

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೊನೆಗೂ ನಿಗಮ-ಮಂಡಳಿಗಳ ನೇಮಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಾಂತಿನಗರ ಶಾಸಕ ಎನ್‌.ಎ ಹ್ಯಾರಿಸ್‌ಗೆ ಬಿಡಿಎ ಅಧ್ಯಕ್ಷತೆ ನೀಡಲಾಗಿದೆ. ಇದರೊಂದಿಗೆ ರಾಜ್ಯದ ಇಂದಿನ ಮಹತ್ವದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಸುದ್ದಿ ಬೆಳವಣಿಗೆಗಳನ್ನು (Karnataka Live News) ಇಲ್ಲಿ ಗಮನಿಸಿ.

Prabhakar R

ಜ. 27ರಂದು 800 ಏಕ ಬಳಕೆಯ ಡಯಾಲೈಸರ್‌ಗಳಿಗೆ ಸಿಎಂ ಚಾಲನೆ

ಬೆಂಗಳೂರು: ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ಜನರಿಗೆ ಸಂತಸದ ಸುದ್ದಿ ಸಿಕ್ಕಿದೆ. ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಡಯಾಲಿಸಿಸ್ (Dialysis Service) ಮಾಡಿಸಿಕೊಳ್ಳುವವರಿಗೆ ಇನ್ಮುಂದೆ ಏಕ ಬಳಕೆಯ ಡಯಾಲೈಸರ್ ಆರೈಕೆ ಲಭ್ಯವಾಗಲಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 800 ಏಕಬಳಕೆಯ ಡಯಾಲೈಸರ್ ಯಂತ್ರಗಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಜ.27ರಂದು ಚಾಲನೆ ನೀಡಲಿದ್ದಾರೆ.

Dialysis Service: ಜ. 27ರಂದು 800 ಏಕ ಬಳಕೆಯ ಡಯಾಲೈಸರ್‌ಗಳಿಗೆ ಸಿಎಂ ಚಾಲನೆ

Harish Kera

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ ಎಂದಿದ್ದಾರೆ.

Harish Kera

ಗಣರಾಜ್ಯೋತ್ಸವ ವೇದಿಕೆಯಲ್ಲಿ ಅಧಿಕಾರಿಗಳ ಕಿತ್ತಾಟ

ಬೆಳಗಾವಿ: ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ಇಬ್ಬರು ಅಧಿಕಾರಿಗಳು ವೇದಿಕೆಯಲ್ಲೇ ಅವಾಚ್ಯವಾಗಿ ಬೈಯ್ದಾಡಿಕೊಂಡರು. ಮುಂದೆ ಸಚಿವರು ಭಾಷಣ ಮಾಡುವಾಗಲೇ ಹಿಂದೆ ವೇದಿಕೆಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ರಾಯಗೋಳ ಮತ್ತು ಪರಶುರಾಮ ದುಡಗುಂಟಿ ನಡುವೆ ವಾಗ್ವಾದ ಶುರುವಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಒಬ್ಬರಿಗೊಬ್ಬರು ನಿಂದಿಸಿಕೊಂಡರು. ಪೊಲೀಸರ ಮುಂದೆಯೇ ಕೆಟ್ಟ ಪದ ಬಳಸಿ ಬೈಯ್ದ ಬಸವರಾಜ ರಾಯಗೋಳನನ್ನು ಪೊಲೀಸರು ಹೊರಹಾಕಿದರು.

Harish Kera

ಈ ವಾರದಲ್ಲಿ ಬೆಳೆ ಪರಿಹಾರ ಬಿಡುಗಡೆ

ಈ ವಾರದಲ್ಲಿ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ ಮಾಡುತ್ತೇವೆ ಎಂದು ಗಣರಾಜ್ಯೋತ್ಸವದ ಸಂದೇಶದಲ್ಲಿ ಸಿಎಂ ಘೋಷಿಸಿದ್ದಾರೆ. ಈಗಾಗಲೇ ಬೆಳೆ ಪರಿಹಾರ 2,000 ರೂ. ಘೋಷಿಸಲಾಗಿದ್ದು, ಈವರೆಗೆ 550 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಈ ವಾರದಲ್ಲಿ ಮೊದಲ ಕಂತಿನ ಪರಿಹಾರ ತಲುಪಲಿದೆ ಎಂದು ಗಣರಾಜ್ಯೋತ್ಸವದ ಸಂದೇಶದಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.

Harish Kera

ಇಂದಿನಿಂದ ಮೂರು ದಿನ ಪೀಣ್ಯ- ನಾಗಸಂದ್ರ ಮೆಟ್ರೋ ಇಲ್ಲ

ಬೆಂಗಳೂರು: ಪೀಣ್ಯ- ನಾಗಸಂದ್ರದ ನಡುವೆ ಮೆಟ್ರೋ ಸಂಚಾರವನ್ನು ಇಂದಿನಿಂದ ಮೂರು ದಿನ ಸ್ಥಗಿತಗೊಳಿಸಲಾಗಿದೆ. ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿಗಾಗಿ ಜನವರಿ 26ರಿಂದ ಜನವರಿ 28ರ ತನಕ ಸಂಚಾರ ತಾತ್ಕಾಲಿಕ ಸ್ಥಗಿತ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ.

Exit mobile version