ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರಲ್ಲಿ ಕೆಲವೊಮ್ಮೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನದ ಮುನ್ಸೂಚನೆ
ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಜತೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗಿರುವ ಸಾಧ್ಯತೆ ಇದೆ.
ಇದನ್ನೂ ಓದಿ: Bagalkot News : ಕೂಲಿ ಕುಟುಂಬದಿಂದ ಬಂದ ಯುವತಿ ಈಗ ಸಿವಿಲ್ ನ್ಯಾಯಾಧೀಶೆ!
ತಾಪಮಾನದಲ್ಲಿ ಏರಿಳಿತ
ರಾಜ್ಯದಲ್ಲಿ ಸೋಮವಾರದಂದು ಶುಷ್ಕ ವಾತಾವರಣವಿತ್ತು. ಕನಿಷ್ಠ ಉಷ್ಣಾಂಶ 17.4 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.2 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ. ಹಾವೇರಿ, ಕೊಪ್ಪಳ, ದಾವಣಗೆರೆ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ನಿಂದ 40 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ