ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಕೂಡಾ ಕೈಕೊಟ್ಟಂತಿದೆ. ಯಾಕೆಂದರೆ ರಾಜ್ಯದ ಬಹುಭಾಗದಲ್ಲಿ ಒಣಹವೆಯೇ (Dry weather) ಜೋರಾಗಿದೆ. ಮತ್ತು ಹಲವು ಭಾಗಗಳಲ್ಲಿ ಮಂಜು ಮುಸುಕುವ ಸಾಧ್ಯತೆ ಕಂಡುಬಂದಿದೆ. ಮುಂದಿನ 24 ಗಂಟೆಯಿಂದ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು (Rain News) ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.
ಮುಂದಿನ 24 ಘಂಟೆಗಳಲ್ಲಿ ಏನಾಗಲಿದೆ?
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಇದನ್ನೂ ಓದಿ : Karnataka Weather : ದಕ್ಷಿಣ ಒಳನಾಡಲ್ಲಿ ಇಂದು ಗುಡುಗುವ ವರುಣ; ಬೆಂಗಳೂರಿನಲ್ಲಿ ಚಳಿ ಚಳಿ, ಅಲ್ಪ ಮಳೆ
ಬೆಳಗಿನ ಜಾವ ಚಳಿ ಶುರುವಾಗಿದೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳಗ್ಗೆ ಚಳಿಯ ವಾತಾವರಣ ಕಂಡುಬಂದಿದೆ. ಹಗಲಿಡೀ ಉರಿಬಿಸಿಲು ಇದ್ದರೆ ಬೆಳಗ್ಗಿನ ಜಾವ ಮಂಜು ಬೀಳುತ್ತಿದೆ. ಇದರಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಶೀತ ಮತ್ತು ಜ್ವರದ ಸಮಸ್ಯೆ ಕಾಡುತ್ತಿದೆ.