Site icon Vistara News

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

KEA

ಬೆಂಗಳೂರು: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭಾನುವಾರ (ಆ.11) ಪರೀಕ್ಷೆ ನಡೆಸಲಿದೆ. ವೆಬ್ ಕಾಸ್ಟಿಂಗ್ ಮೂಲಕ ಕಟ್ಟುನಿಟ್ಟಿನ ನಿಗಾ‌ ಇಡಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು ಉತ್ತರ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಮೈಸೂರು ನಗರಗಳ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 14,131 ಮಂದಿ ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ವ್ಯವಸ್ಥೆ ಮೇಲೆ ನಿಗಾ ಇಡಲಾಗುತ್ತದೆ. ಯಾವುದೇ ಅಕ್ರಮಕ್ಕೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

ಬಿಎಂಟಿಸಿ, ಕೆಕೆಆರ್‌ಟಿಸಿ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಂಕಪಟ್ಟಿಯನ್ನು ಸದ್ಯದಲ್ಲೇ ಸಂಬಂಧಪಟ್ಟ ಸಂಸ್ಥೆಗಳಿಗೆ ರವಾನಿಸಲಾಗುವುದು. ನಂತರ ನಿಯಮ ಪ್ರಕಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version