ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗಳನ್ನು ವಿಧಾನಸೌಧದ ಮುಂಭಾಗದಲ್ಲಿ ಅನಾವರಣ ಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಇಲ್ಲಿ ಇಂದು ಪ್ರಕಟಿಸಿದರು.
ನಮ್ಮ ಬೆಂಗಳೂರು ಹಬ್ಬಕ್ಕೆ ಸಂಬಂಧಿಸಿದಂತೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಆ ದಿನ ಆಯೋಜಿಸಿರುವ ಅದ್ದೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪುತ್ಥಳಿಗಳ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: Budget 2023: ಬಜೆಟ್ ಅಧಿವೇಶನ ಉದ್ದೇಶಿಸಿ ಮುರ್ಮು ಭಾಷಣ, ಬಸವಣ್ಣನ ‘ಕಾಯಕವೇ ಕೈಲಾಸ’ ಸ್ಮರಿಸಿದ ರಾಷ್ಟ್ರಪತಿ
ವಿಧಾನಸೌದದ ಎದುರು ಇಬ್ಬರು ಮಹನೀಯರ ಪ್ರತಿಮೆ ಸ್ಥಾಪನೆಗೆ ಜನವರಿ 13ರಂದು ಗುದ್ದಲಿ ಪೂಜೆ ನೆರವೇರಿಸಲಾಗಿತ್ತು. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿಯನ್ನು ನಪೂರ್ಣಗೊಳಿಸಲಾಗುತ್ತಿದೆ.