ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಾಗುವ ಮೊದಲೇ ಕಿಚ್ಚ ಸುದೀಪ್ (Kiccha Sudeep) ಈ ಬಾರಿ ನಿರೂಪಣೆ ಮಾಡುವುದಿಲ್ಲ ಎನ್ನಲಾಗಿತ್ತು. ಆದರೆ ವಾಪಸ್ ಅವರ ಸಾರಥ್ಯದಲ್ಲೇ ಬಿಗ್ ಬಾಸ್ ಸೀಸನ್ 11 ಅದ್ಧೂರಿಯಾಗಿ ಆರಂಭಗೊಂಡಿತ್ತು. ಆದರೆ ಇದೇ ಬಿಗ್‌ಬಾಗ್ ವೀಕ್ಷಕರಿಗೆ ಹಾಗೂ ಅಭಿಮಾನಿಗಳಿಗೆ ಸುದೀಪ್ ಶಾಕ್ ಕೊಟ್ಟಿದ್ದಾರೆ. ಬಿಗ್‌ಬಾಸ್‌ಗೆ ಬಾದ್ ಶಾ ಕಿಚ್ಚ ಸುದೀಪ್ ವಿದಾಯ ಹೇಳುತ್ತಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಕನ್ನಡ ಕಿರುತೆರೆಯ ಬಿಗೆಸ್ಟ್ ರಿಯಾಲಿಟಿ ಶೋ ಬಿಗ್‌ಬಾಸ್ 11ನೇ ಸೀಸನ್‌ಗೆ (Bigg Boss Kannada) ಕಿಕ್ ಸ್ಟಾರ್ಟ್ ಸಿಕ್ಕಿದೆ. ಕನ್ನಡ ಟೆಲಿವಿಷನ್ ಲೋಕದಲ್ಲಿ ದೊಡ್ಮನೆಯ ಕಲರವ ಶುರುವಾಗಿದೆ. ಭಿನ್ನ -ವಿಭಿನ್ನ ಹದಿನೇಳು ಸ್ಪರ್ಧಿಗಳು ಈ ಬಾರಿಯ ಕನ್ನಡ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟು ಗೇಮ್ ಆಡ್ತಿದ್ದಾರೆ. ಇಷ್ಟು ದಿನದಿಂದ ಒಂದು ಲೆಕ್ಕ ಈಗಿನಿಂದ ಇನ್ನೊಂದು ಲೆಕ್ಕವನ್ನು ಬಿಗ್ ಬಾಸ್ ಶುರುಮಾಡಿದ್ದು, ಸ್ವರ್ಗ- ನರಕದ ಆಟವಾಡುತ್ತಿರುವಾಗಲೇ ಕಿಚ್ಚ ಸುದೀಪ್ ಶಾಕ್ ಸ್ಟೇಟ್‌ಮೆಂಟ್ ಕೊಟ್ಟಿದ್ದಾರೆ. ಬಿಗ್ ಬಾಸ್ 11 ನನ್ನ ಕೊನೆಯ ಸೀಸನ್ ಎಂದು ಹೇಳಿದ್ದಾರೆ.
ಬಿಗ್‌ಬಾಸ್ ಸೀಸನ್ 11ಕ್ಕೂ ಉತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು, ಈ ಕಾರ್ಯಕ್ರಮಕ್ಕೆ ಹಾಗೂ ನನಗೆ ತೋರಿದ ಪ್ರೀತಿಗೆ ಇದು ಸಾಕ್ಷಿಯಾಗಿದೆ. ಒಟ್ಟಿಗೆ 10 + 1 ಸೀಸನ್ ಸೇರಿ 11 ವರ್ಷಗಳ ಉತ್ತಮ ಪ್ರಯಾಣವಾಗಿದೆ. ಬಿಗ್‌ಬಾಸ್‌ನ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ಈ ನಿರ್ಧಾರವನ್ನು ಕಲರ್ಸ್ ಸಂಸ್ಥೆ ಮತ್ತು ಇಷ್ಟು ವರ್ಷಗಳು ಬಿಗ್‌ಬಾಸ್‌ನನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಸಹ ನಿಮ್ಮೆಲ್ಲರನ್ನೂ ಅತ್ಯುತ್ತಮವಾಗಿ ರಂಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Thank you all for the great response shown towards #BBK11.
— Kichcha Sudeepa (@KicchaSudeep) October 13, 2024
The TVR (number) speaks in volumes about the love you all have shown towards the show and me.
It's been a great 10+1 years of travel together, and it's time for me to move on with what I need to do. This will be my last… pic.twitter.com/uCV6qch6eS
ಇನ್ನು ಸುದೀಪ್ ಬಿಗ್ ಬಾಸ್ ತೊರೆಯುತ್ತಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸುದೀಪ್ ಟ್ವೀಟ್ ಮಾಡಿರುವುದು ಎಲ್ಲೆಡೆ ವೈರಲ್ ಆಗಿದೆ. ಹಿಂದೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್ ಬಿಗ್‌ಬಾಗ್ ಕಾರ್ಯಕ್ರಮದಿಂದ ಹೊರ ಬರುತ್ತಾರೆ ಎನ್ನಲಾಗಿತ್ತು. ಅವರ ಜಾಗಕ್ಕೆ ನಟ ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್ ಮಾಡಲಿದ್ದಾರೆ ಎನ್ನಲಾಗಿತ್ತು. ರಮೇಶ್ ಅರವಿಂದ ವೀಕೆಂಡ್ ವಿತ್ ರಮೇಶ್ ಮತ್ತು ಕೋಟ್ಯಾಧಿಪತಿ, ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದ್ದರು.