Kidnap case : ಹಾಡಹಗಲೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯ ಅಪಹರಣ - Vistara News

ಬೆಂಗಳೂರು

Kidnap case : ಹಾಡಹಗಲೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯ ಅಪಹರಣ

Kidnap case : ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವತಿಯರಿಬ್ಬರು ಕಿಡ್ನ್ಯಾಪ್‌ ಮಾಡಿದ್ದಾರೆ. ಬೆಂಗಳೂರಿನಿಂದ ಕಿಡ್ನ್ಯಾಪ್‌ ಆಗಿದ್ದ ವಿದ್ಯಾರ್ಥಿನಿ ಅಪಹರಣಕೋರರಿಂದ ಮೈಸೂರಿನಲ್ಲಿ ತಪ್ಪಿಸಿಕೊಂಡಿದ್ದಾಳೆ.

VISTARANEWS.COM


on

kidnap Case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

ತುಮಕೂರಿನ ಕಾಲೇಜಿ ವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಯಲಹಂಕದ ಮಾವನ ಮನೆಗೆ ಬಂದಿದ್ದಳು. ನಂತರ ಬೆಳಗ್ಗೆ ಕಾಲೇಜಿಗೆ ಹೋಗಲು ತನ್ನ ಮಾವನಿಂದ ಬಸ್ ಸ್ಟಾಪ್‌ವರೆಗೂ ಡ್ರಾಪ್ ಪಡೆದಿದ್ದಾಳೆ. ಜಾಲಹಳ್ಳಿ ಬಳಿ ತುಮಕೂರು ಬಸ್‌ಗಾಗಿ ಕಾಯುತ್ತಿದ್ದಾಗ, ವಿದ್ಯಾರ್ಥಿನಿ ಬಳಿ ಇಬ್ಬರು ಯುವತಿಯರು ಬಂದಿದ್ದಾರೆ.

ತಕ್ಷಣ ಯುವತಿಯ ಕೈ ಹಿಡಿದು ನಂತರ ಮುಖಕ್ಕೆ ಮಾಸ್ಕ್ ಹಿಡಿದಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬೆಳಗ್ಗೆ ಕಿಡ್ನ್ಯಾಪ್ ಆಗಿದ್ದ ವಿದ್ಯಾರ್ಥಿನಿಗೆ ಮಧ್ಯಾಹ್ನ 1 ಗಂಟೆಗೆ ಎಚ್ಚರವಾಗಿದೆ. ಈ ವೇಳೆ ಕಾರಿನಲ್ಲಿ ಇಬ್ಬರು ಯುವತಿಯರು ಸೇರಿ ನಾಲ್ವರು ಹುಡುಗರು ಇದ್ದರು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ವಿದ್ಯಾರ್ಥಿನಿಗೆ ಎಚ್ಚರವಾದಾಗ ಆರೋಪಿಗಳು ಗಾಡಿ ನಿಲ್ಲಿಸಿ ಟೀ ಕುಡಿಯುತ್ತಿದ್ದರು. ತಕ್ಷಣ ಕಾರಿನ ಡೋರ್ ಓಪನ್ ಮಾಡಿ ವಿದ್ಯಾರ್ಥಿನಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾಳೆ. ಈ ವೇಳೆ ಆರೋಪಿಗಳು ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಬಳಿಕ ಸ್ಥಳೀಯರ ಬಳಿ ಇದು ಯಾವ ಊರು ಎಂದು ಕೇಳಿದಾಗ ಅವರು, ಇದು ಮೈಸೂರು ಎಂದು ತಿಳಿಸಿದ್ದಾರೆ. ಬಳಿಕ ಅವರಿವರ ಸಹಾಯದಿಂದ ಮೈಸೂರು ಬಸ್ ಸ್ಟಾಪ್‌ಗೆ ಬಂದಿದ್ದಾಳೆ. ನಂತರ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು ಮನೆಗೆ ಕರೆ ಮಾಡಿದ್ದಾಳೆ. ಕೂಡಲೇ ಕುಟುಂಬಸ್ಥರ ಸಹಾಯದಿಂದ ಮೈಸೂರು ಠಾಣೆಗೆ ದೂರು ದಾಖಲಾಗಿದೆ.

ದೂರಿನನ್ವಯ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದ್ದು, ವಿದ್ಯಾರ್ಥಿನಿ ಜಾಲಹಳ್ಳಿ ಕ್ರಾಸ್‌ನಿಂದ ಕಿಡ್ನಾಪ್ ಆದ ಕಾರಣಕ್ಕೆ ಪೀಣ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅಪಹರಣಕೋರರಿಂದ ವಿದ್ಯಾರ್ಥಿನಿ ತಪ್ಪಿಸಿಕೊಂಡು ಬಚಾವ್‌ ಆಗಿದ್ದಾಳೆ. ಸದ್ಯ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

V Sumangala: ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

V Sumangala
Koo

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಭಾರಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆಯಲ್ಲೂ ಅಕ್ರಮ ನಡೆದಿರುವುದು ಬಯಲಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಅಧೀನದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ (DSERT) ಇ-ತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಸುಮಾರು 1.62 ಕೋಟಿ ರೂ. ಅಕ್ರಮ ನಡೆದಿರುವುದು ಸಾಬೀತಾದ ಕಾರಣ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ (V Sumangala) ಅವರನ್ನು ರಾಜ್ಯ ಸರ್ಕಾರ (Karnataka Government) ಅಮಾನತುಗೊಳಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ವಿ. ಸುಮಂಗಲಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಡಿಎಸ್‌ಇಆರ್‌ಟಿ ಸೇರಿ ಹಲವು ಕಚೇರಿಗಳಲ್ಲಿ ನಿರುಪಯುಕ್ತವಾಗಿರುವ, ಹಾಳಾದ, ವಿದ್ಯುನ್ಮಾನ ಉಪಕರಣಗಳ (ಇ-ವೇಸ್ಟ್‌ ಅಥವಾ ಇ-ತ್ಯಾಜ್ಯ) ವಿಲೇವಾರಿ ಮಾಡಲು ಟೆಂಡರ್‌ ಕರೆಯಲಾಗಿತ್ತು. ಟೆಂಡರ್‌ ಕರೆದು, ಕಾರ್ಯಾದೇಶ ನೀಡಲಾಗಿರುವ ಇ-ಪ್ರಗತಿ ರಿಸೈಕ್ಲಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಗೆ ಬಿಡ್‌ನಲ್ಲಿ ಅರ್ಹತೆ ಇರಲಿಲ್ಲ. ಟೆಂಡರ್‌ ನೀಡುವ ವೇಳೆ ಕಂಪನಿಯು ಹಲವು ವಾಸ್ತವಿಕ ಸಂಗತಿಗಳನ್ನು ಮುಚ್ಚಿಟ್ಟಿದೆ. ಇಷ್ಟಾದರೂ ಅದೇ ಕಂಪನಿಗೆ ಟೆಂಡರ್‌ ನೀಡಲಾಗಿದೆ ಎಂಬುದು ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಗೆ ಬಿಡ್‌ನಲ್ಲಿ ಎಲ್‌ 1 ಎಂದು ಘೋಷಿಸಿ, ಟೆಂಡರ್‌ ನೀಡುವ ಬದಲು ಕಂಪನಿ ಒದಗಿಸುವ ದಾಖಲೆಗಳನ್ನು ಪರಿಶೀಲನೆ ನಡೆಸಬೇಕಿತ್ತು. ಲೋಪಗಳು ಇದ್ದರೆ ಟೆಂಡರ್‌ ನೀಡಬಾರದಿತ್ತು. ಆದರೆ, ಕಂಪನಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದಲೇ ಟೆಂಡರ್‌ ಮಂಜೂರು ಮಾಡಲಾಗಿದೆ ಎಂಬುದು ಬಹಿರಂಗವಾಗಿದೆ. ಇದರಿಂದಾಗಿ, ವಿ. ಸುಮಂಗಲಾ ಅವರನ್ನು ಅಮಾನತುಗೊಳಿಸುವ ಜತೆಗೆ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ತೊರೆಯುವಂತಿಲ್ಲ ಎಂದು ಕೂಡ ಆದೇಶಿಸಲಾಗಿದೆ.

ಇದನ್ನೂ ಓದಿ: Karnataka Assembly Session: ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಚರ್ಚೆಗೆ ಪ್ರತಿಪಕ್ಷಗಳ ಬಿಗಿ ಪಟ್ಟು

Continue Reading

ಕರ್ನಾಟಕ

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Dengue Fever: ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

VISTARANEWS.COM


on

Health Minister Dinesh Gundurao instructs to send a team of deputy directors to dengue hot spots
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌

ಅಲ್ಲದೇ ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್, ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು. ಹೀಗಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ಡೆತ್ ಆಡಿಟ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿರುವ ಆರೋಗ್ಯ ಸಚಿವರು, ಯಾವುದನ್ನು ಮುಚ್ಚಿಡುವುದು ಬೇಡ. ಡೆಂಗ್ಯೂ ಡೆತ್‌ಗಳಾಗಿದ್ದರೆ ಅದನ್ನು ಡೆಂಗ್ಯೂ ಡೆತ್ ಎಂದೇ ವರದಿ ಸಲ್ಲಿಸುವಂತೆ ಸಚಿವ ದಿನೇಶ್ ಗುಂಡೂರಾವ್‌ ಸೂಚಿಸಿದರು.

Continue Reading

ಬೆಂಗಳೂರು

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

Media Connect: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

Media Connect Founder and ceo Dr Divya Rangenahalli honored at Chess Festival in bengaluru
Koo

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ (Media Connect) ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಅಂತಾರಾಷ್ಟ್ರೀಯ ಚೆಸ್‌ ದಿನಾಚರಣೆ ಹಾಗೂ ಫಿಡೆ ಶತಮಾನೋತ್ಸವದ ಅಂಗವಾಗಿ ನಗರದ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಹಾಗೂ ಅಧಿಕಾರಿ/ಸಿಬ್ಬಂದಿಗಳಿಗಾಗಿ ವಿಧಾನಸೌಧ ಚೆಸ್‌ ಹಬ್ಬವನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಚೆಸ್‌ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಅರವಿಂದ್‌ ಶಾಸ್ತ್ರಿ, ಜೇವರ್ಗಿ ಶಾಸಕ ಅಜಯ್‌ ಸಿಂಗ್‌ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

Pralhad Joshi: ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ ಎಂದು ದೂರಿದ್ದಾರೆ.

VISTARANEWS.COM


on

1200 farmers suicides in last 15 months in Karnataka says Minister Pralhad Joshi Minister Pralhad Joshi alleges
Koo

ನವದೆಹಲಿ: ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಇದನ್ನೂ ಓದಿ: Pralhad joshi: ಎಸ್ಸಿ, ಎಸ್ಟಿ ಹಣ ದುರುಪಯೋಗ; ಸಿಎಂ ರಾಜೀನಾಮೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ಕಾಂಗ್ರೆಸ್ ಸರ್ಕಾರ ರೈತರಿಗಿತ್ತ ವರದಾನವೇ? ಎಂದು ಜೋಶಿ ಕಿಡಿ ಕಾರಿದ್ದಾರೆ.

ರೈತರ ಮನವಿ ಪತ್ರ ಕಸದ ಬುಟ್ಟಿಗೆ

ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿಸಿತು. ಇಂಥ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ ಜೋಶಿ “X” ಖಾತೆಯಲ್ಲಿ ಆತಂಕ ಹೊರ ಹಾಕಿದ್ದಾರೆ.

ನುಡಿದಂತೆ ನಡೆಯದ ಕಾಂಗ್ರೆಸ್

ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ ಎಂದು ಸಚಿವರು ಟೀಕಿಸಿದ್ದಾರೆ.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜಿನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Continue Reading
Advertisement
NEET UG 2024
ದೇಶ2 hours ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ3 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ5 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ13 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ14 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌