Site icon Vistara News

Killer BMTC: ಚಾಲಕನ ನಿಯಂತ್ರಣ ತಪ್ಪಿದ ಬಸ್‌ನಿಂದ ಸರಣಿ ಅಪಘಾತ, ಬೈಕ್‌ ಸವಾರ ಸಾವು

bmtc accident

bmtc accident

ಬೆಂಗಳೂರು: ಬಿಎಂಟಿಸಿ ಬಸ್ಸುಗಳು ಇತ್ತೀಚೆಗೆ ನಗರದಲ್ಲಿ ಹಲವಾರು ಅಪಘಾತಗಳಿಗೆ ಕಾರಣವಾಗಿದ್ದು, ʼಕಿಲ್ಲರ್‌ ಬಿಎಂಟಿಸಿʼ ಎನಿಸಿಕೊಳ್ಳುತ್ತಿದೆ. ಶುಕ್ರವಾರ ರಾತ್ರಿ ನಾಗವಾರ – ಯಲಹಂಕ ಮಾರ್ಗದ ಭಾರತೀಯ ಸಿಟಿ ಕ್ರಾಸ್ ಬಳಿ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರರೊಬ್ಬರನ್ನು ಬಲಿ ಪಡೆದಿದೆ.

ನಾಗವಾರ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸುತ್ತಿದ್ದ 290ED ಬಸ್ಸಿನಿಂದ ಸರಣಿ ಅಪಘಾತ ಸಂಭವಿಸಿದೆ. ಸಂಜೆ 7.30 ರ ಸುಮಾರಿಗೆ ಬೆಳ್ಳಳ್ಳಿ ಕಡೆಯಿಂದ ಹೆಗಡೆನಗರ ಮಾರ್ಗವಾಗಿ ಹೋಗುತ್ತಿದ್ದ ಬಸ್ಸು ಭಾರತೀಯ ಸಿಟಿ ಜಂಕ್ಷನ್ ಬಳಿ ಟ್ರಾಫಿಕ್ ವಾರ್ಡನ್ ಸೂಚನೆ ಮೇರೆಗೆ ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದು ತಳ್ಳಿಕೊಂಡು ಹೋಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರು, ಮೂರು ಬೈಕ್‌ಗಳು ಜಖಂ ಆಗಿವೆ.

ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಅಯೂಬ್ (35) ಎಂಬವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನಿತರ 4 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ರಫಿಯುಲ್ಲಾ ಖಾನ್, ಮುಸಾದ್ಧೀಕ್, ಮುನ್ನಾವರ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದ್ದಾಗಿ ಬಸ್‌ ಚಾಲಕ ಗೋವಿಂದರಾಜು ಹೇಳಿದ್ದಾನೆ.

ಇದನ್ನೂ ಓದಿ: Killer BMTC | ಒನ್‌ವೇನಲ್ಲಿ ನುಗ್ಗಿದ ಬಿಎಂಟಿಸಿ ಬಸ್‌: ಬೈಕ್‌ಗೆ ಡಿಕ್ಕಿಯಾಗಿ ಸವಾರ ದುರ್ಮರಣ

Exit mobile version