Kirik Party: ಮಹಿಳಾ ಬೈಕ್‌ ರೈಡರ್ಸ್‌ ಮೇಲೆ ಸ್ಥಳೀಯನ ಕಿರಿಕ್‌, ಉಭಯ ಕಡೆಗಳಿಂದ ದೂರು - Vistara News

ಕ್ರೈಂ

Kirik Party: ಮಹಿಳಾ ಬೈಕ್‌ ರೈಡರ್ಸ್‌ ಮೇಲೆ ಸ್ಥಳೀಯನ ಕಿರಿಕ್‌, ಉಭಯ ಕಡೆಗಳಿಂದ ದೂರು

ನೈಸ್‌ ರಸ್ತೆ ಬದಿಯಲ್ಲಿ ನೀರು ಕುಡಿಯಲು ನಿಲ್ಲಿಸಿದ ಮಹಿಳಾ ಬೈಕ್‌ ರೈಡರ್‌ಗಳ ಜತೆ ಅನುಚಿತವಾಗಿ ವರ್ತಿಸಿದ ಸ್ಥಳೀಯ ವ್ಯಕ್ತಿಯೊಬ್ಬ ಬೈಕ್‌ ಕೀಯನ್ನೂ ಕಿತ್ತುಕೊಂಡು ಕೊಡದೆ ಸತಾಯಿಸಿದ್ದಾನೆ.

VISTARANEWS.COM


on

kirik party manjunatha
ಬೈಕ್ ಕೀ ಕಿತ್ತುಕೊಂಡ ಮಂಜುನಾಥ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೈಸ್‌ ರಸ್ತೆಯಲ್ಲಿ ಬೈಕ್‌ ನಿಲ್ಲಿಸಿ ನೀರು ಕುಡಿಯುತ್ತಿದ್ದ ಮಹಿಳಾ ಬೈಕ್‌ ರೈಡರ್‌ಗಳ ಮೇಲೆ ಮುಗಿಬಿದ್ದು ತಗಾದೆ ತೆಗೆದ ಸ್ಥಳೀಯನೊಬ್ಬ‌ ಅವಾಚ್ಯ ಶಬ್ದಗಳಿಂದ ಬೈದು ಬೈಕಿನ ಕೈ ಕಿತ್ತುಕೊಂಡು ಒರಟಾಗಿ ವರ್ತಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಎರಡೂ ಕಡೆಗಳಿಂದಲೂ ದೂರು ಪ್ರತಿದೂರು ದಾಖಲಾಗಿವೆ.

ಭಾನುವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ನಡೆದಿರುವ ಘಟನೆ ಇದು. ಶಾರಣ್ ಸ್ಯಾಮಿಯಲ್, ಅವರ ಗೆಳೆಯ ಹಾಗೂ ಗೆಳತಿ ಭಾನುವಾರ ವುಮೆನ್ಸ್ ಡೇ ಬೈಕ್ ರೈಡ್‌ನಲ್ಲಿ ಪಾಲ್ಗೊಂಡಿದ್ದರು. ರೈಡಿಂಗ್ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದಾಗ ಕೋಣನಕುಂಟೆ ಠಾಣೆ ವ್ಯಾಪ್ತಿಯ ನೈಸ್ ರಸ್ತೆ ಬಳಿ ನೀರು ಕುಡಿಯಲು ಗಾಡಿ ನಿಲ್ಲಿಸಿದ್ದಾರೆ. ಆ ವೇಳೆ ಅಲ್ಲಿಗೆ ಬಂದ ಸ್ಥಳೀಯ ವೃದ್ಧರೊಬ್ಬರು ಯುವತಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ಆ ವೃದ್ಧರ ಪುತ್ರ ಮಂಜುನಾಥ್ ಎಂಬಾತ ಬಂದು ಯುವತಿಯರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಗಾಡಿ ತೆಗೆಯುವಂತೆ ಒತ್ತಾಯಿಸಿದ್ದಾನೆ.‌ ಬೈಕ್‌ ತೆಗೆಯದೇ ಇದ್ದಾಗ ಬೈಕ್‌ನ ಕೀ ಕಿತ್ತುಕೊಂಡು ಹೋಗಿದ್ದಾನೆ.

ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಯುವತಿಯರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕರ ಸ್ವತ್ತಾದ ರಸ್ತೆಯಲ್ಲಿ ವ್ಯಕ್ತಿಯ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕೋಣನಕುಂಟೆ ಪೊಲೀಸ್ ಠಾಣೆಗೆ ಬಂದು ಮಂಜುನಾಥ್ ಹಾಗೂ ಆತನ ತಂದೆಯ ವಿರುದ್ಧ ದೂರು ನೀಡಿದ್ದಾರೆ. ಯುವತಿಯರಿಗಿಂತ ಮೊದಲೇ ಠಾಣೆಗೆ ಬಂದ ಮಂಜುನಾಥ್ ಸಹ ಯುವತಿಯರ ವಿರುದ್ಧ ದೂರು ನೀಡಿದ್ದಾನೆ. ತಮ್ಮ ಪ್ರಾಪರ್ಟಿಗೆ ಅಕ್ರಮವಾಗಿ ಬಂದಿದ್ದಷ್ಟೇ ಅಲ್ಲದೇ ತಮ್ಮ ಮೇಲೆ ಹಲ್ಲೆ ಸಹ ಮಾಡಿದ್ದಾರೆಂದು ಆರೋಪ ಮಾಡಿದ್ದು, 11 ಜನರ ವಿರುದ್ಧ ದೂರು ನೀಡಿದ್ದಾನೆ. ಎರಡೂ ಕಡೆಯ ದೂರು ಹಾಗೂ ಪ್ರತಿದೂರುಗಳನ್ನು ಸ್ವೀಕರಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: Rapido Bike Vs Auto: ಮುಂದುವರಿದ ಚಾಲಕರ ಸಂಘರ್ಷ; ರ‍್ಯಾಪಿಡೋ ಬೈಕ್‌ ಚಾಲಕನ ಜತೆ ಆಟೋ ಡ್ರೈವರ್‌ ಕಿರಿಕ್‌, ಪ್ರಯಾಣಿಕರು ಕಂಗಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Bengaluru: ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಮಹಿಳೆಯೊಬ್ಬರು ವಾಕಿಂಗ್‌ ಮಾಡುತ್ತಿದ್ದರು. ಇದೇ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್‌ ಕೊಟ್ಟು ಆತ ಪರಾರಿಯಾಗಿದ್ದಾನೆ. ಈ ವಿಡಿಯೊ ಈಗ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿ

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ ಗ್ಯಾಂಗ್‌ಗಳು ಕೂಡ ಪೊಲೀಸರಿಗೆ ತಲೆನೋವಾಗಿವೆ. ಹರಿಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading

ಕ್ರೈಂ

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತವನ್ನು ಮುಂದಿನ ತನಿಖೆಗಾಗಿ ಸಿ.ಐ.ಡಿ ಘಟಕಕ್ಕೆ ನೀಡಲು ಡಿ.ಜಿ ಮತ್ತು ಐ.ಜಿ.ಪಿ ಆದೇಶ ನೀಡಿದ್ದಾರೆ. ಹೀಗಾಗಿ ಕಡತವನ್ನು ಆ.5ರಂದು ಸಿ.ಐ.ಡಿ ಘಟಕಕ್ಕೆ ವರ್ಗಾಯಿಸಲಾಗುವುದು ಎಂದು ಎಸ್‌ಪಿ ಜಿ. ಸಂಗೀತಾ ತಿಳಿಸಿದ್ದಾರೆ.

VISTARANEWS.COM


on

PSI Parashuram Case
Koo

ಯಾದಗಿರಿ: ಪಿಎಸ್‌ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ (PSI Parashuram Case) ಸಂಬಂಧಿಸಿದ ಕಡತವನ್ನು ಮುಂದಿನ ತನಿಖೆಗೆ ಆ.5ರಂದು ಸಿಐಡಿಗೆ ವರ್ಗಾಯಿಸಲಾಗುತ್ತದೆ ಎಂದು ಎಸ್‌ಪಿ ಜಿ. ಸಂಗೀತಾ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆ.3ರಂದು ಮೃತ ಪಿ.ಎಸ್.ಐ ಪರಶುರಾಮ ಅವರ ಪತ್ನಿ ಶ್ವೇತಾ ಎನ್.ವಿ ಅವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಪುತ್ರ ಪಂಪನಗೌಡ (ಸನ್ನಿಗೌಡ) ಅವರ ವಿರುದ್ಧ ಪೊಲೀಸ್‌ ಠಾಣೆ ಗುನ್ನೆ ನಂ. 105/2024, ಕಲಂ 352, 108 ಸಂಗಡ 3(5) ಬಿಎನ್‌ಎಸ್ 2023 ಮತ್ತು ಕಲಂ 3(1) (ಆರ್) (ಎಸ್) 3(2) (v), ಎಸ್‌ಸಿ, ಎಸ್‌ಟಿ ಕಾಯ್ದೆ ಅಡಿ ಪ್ರಕರಣದಾಗಿದೆ.

ಡಿ.ಜಿ ಮತ್ತು ಐ.ಜಿ.ಪಿ ಅವರು ಪ್ರಕರಣದ ಕಡತವನ್ನು ಮುಂದಿನ ತನಿಖೆಗಾಗಿ ಸಿ.ಐ.ಡಿ ಘಟಕಕ್ಕೆ ನೀಡಲು ಆದೇಶಿಸಿದ್ದಾರೆ. ಹೀಗಾಗಿ ಪ್ರಕರಣದ ಕಡತವನ್ನು ಬೆಂಗಳೂರಿನ ಸಿ.ಐ.ಡಿ ಘಟಕಕ್ಕೆ ಆ. 5ರಂದು ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

ಆರೋಪಿ ಪಂಪನಗೌಡ ವಿರುದ್ಧ ಮತ್ತೊಂದು ಗಂಭೀರ ಆರೋಪ

PSI Parashuram Case
PSI Parashuram Case

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣದ (PSI Parashuram Case) ಎ2 ಆರೋಪಿ ಪಂಪನಗೌಡ (ಸನ್ನಿಗೌಡ) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಗೆ ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಭಾಧ್ಯಕ್ಷರಿಗೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದಿದ್ದಾರೆ.

ಜಿಲ್ಲೆಯ ಐದು ತಾಲೂಕಿನ ಪಂಚಾಯತ್‌ ರಾಜ್ ಯೋಜನೆ ಹಣ ಬಿಡುಗಡೆಯಾಗಿದೆ. ಆದರೆ ವಡಗೇರಾ ತಾಲೂಕಿನ ಪಂಚಾಯತಿ ರಾಜ್ ಹಣ ಬಿಡುಗಡೆ ಆಗಿಲ್ಲ. ಇದರಿಂದ ವಡಗೇರಾ ತಾಲೂಕಿನಲ್ಲಿ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ. ಶಾಸಕರ ಪುತ್ರ ಸನ್ನಿಗೌಡ ಹಣ ಬಿಡುಗಡೆಗೆ ಕಮಿಷನ್ ಕೇಳಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಲಂಚಕ್ಕೆ ಬೇಡಿಕೆ ಇಟ್ಟು ಪಿಎಸ್‌ಐ ಪರಶುರಾಮ ಸಾವಿಗೆ ಕಾರಣವಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಒತ್ತಾಯಿಸಿದ್ದಾರೆ.

ಎರಡು ಪ್ರಕರಣ ಗಂಭೀರವಾಗಿ ಪರಿಗಣಿಸಿ ಶಾಸಕ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರ ವಿಧಾನಸಭಾ ಸದಸ್ಯತ್ವ ರದ್ದುಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದು ಮನವಿ ಮಾಡಿದ್ದಾರೆ.

Continue Reading

ಕರ್ನಾಟಕ

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Murder Case: 300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಕ್ಕೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ತಾಯಿ ಮೃತಪಟ್ಟಿದ್ದಾರೆ.

VISTARANEWS.COM


on

Murder Case
Koo

ಬೆಳಗಾವಿ: 300 ರೂಪಾಯಿಗಾಗಿ ಪಾಪಿ ಮಗನೊಬ್ಬ ಹೆತ್ತಮ್ಮನನ್ನೇ ಕೊಂದಿರುವ ಘಟನೆ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆಸದಿದೆ. ಮಹಾದೇವಿ ಗುರೇಪ್ಪ ತೊಲಗಿ (70) ಕೊಲೆಯಾದ ದುರ್ದೈವಿ. ಈರಪ್ಪ ಗುರೇಪ್ಪ ತೊಲಗಿ(34) ತಾಯಿಯನ್ನೇ ಕೊಲೆ ಮಾಡಿದ ಮಗ.

300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ನಂತರ ಜಗಳ ವಿಕೋಪಕ್ಕೆ ತಿರುಗಿ ಕಟ್ಟಿಗೆಯಿಂದ ಮಹಾದೇವಿ ತಲೆಗೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿ ಈರಪ್ಪನನ್ನು ದೊಡವಾಡ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆ ಸಿಂದಗಿ ತಾಲೂಕಿನ ಯರಗಲ್ ಕೆ.ಡಿ. ಗ್ರಾಮದ ಬಳಿ ನಡೆದಿದೆ. ಹನುಮಂತ ಹಿರೇಕುರುಬರ (43) ಮೃತ ಸವಾರ. ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ನಿವಾಸಿಯಾದ ಹನುಮಂತ, ಅಮಾವಾಸ್ಯೆ ಹಿನ್ನಲೆ ಯಾತನೂರು ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದ. ಈ ವೇಳೆ ದುರಂತ ನಡೆದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ ಮೇಯಿಸಲು ಹೋದ ಮಹಿಳೆ‌ ಮೇಲೆ ಕಾಡಾನೆ ದಾಳಿ

ಕೋಲಾರ: ಜಿಲ್ಲೆಯ ಗಡಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋಗಿದ್ದ ಮಹಿಳೆ‌ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯ ಕೈ, ತಲೆಗೆ ಗಂಭೀರ ಗಾಯಗಳಾಗಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಚಿತ್ತಗುಟ್ಟಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗ್ರಾಮದ ರಾಧಮ್ಮ (70) ಗಾಯಾಳು. ಇವರನ್ನು ಚಿಕಿತ್ಸೆಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident
Road Accident

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ವಿಜಯಪುರ

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident : ಕಾರು-ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಅಮಾವಾಸ್ಯೆ ಹಿನ್ನೆಲೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

VISTARANEWS.COM


on

By

Road Accident
Koo

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ತಡರಾತ್ರಿ ಭೀಕರ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ಮಂಜುನಾಥ್ (42) ಮೃತ ದುರ್ದೈವಿ.

ಕಾರೊಂದು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕೆಟ್ಟು ನಿಂತಿತ್ತು. ಹಿಗಾಗಿ ಫ್ಲೈ ಓವರ್ ಸಿಬ್ಬಂದಿ ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುತ್ತಿದ್ದರು. ಈ ವೇಳೆ ಮಂಜುನಾಥ್‌ ಅವರು ಫ್ಲೈಓವರ್ ಟ್ರಾಫಿಕ್ ನಿಯಂತ್ರಣ ಮಾಡುತ್ತಿದ್ದರು.

ಇನ್ನೇನು ಕಾರು ಟೋಯಿಂಗ್ ಮಾಡಬೇಕು ಎನ್ನುವ ವೇಳೆ ಅತಿವೇಗವಾಗಿ ಬಂದ ಗೂಡ್ಸ್‌ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ. ಗೂಡ್ಸ್‌ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಫ್ಲೈ ಓವರ್ ಟೋಲ್ ಸಿಬ್ಬಂದಿ ವಾಹನ ಮತ್ತು ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಬಳಿಕ ಪಲ್ಟಿ ಹೊಡೆದಿದೆ.

ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜುನಾಥ್ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರಿಗೆ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Road Accident
Road Accident

ಮಗಳ ಮದುವೆ ಸಿದ್ಧತೆಯಲ್ಲಿದ್ದ ಮಂಜುನಾಥ್‌

ಇದೇ ತಿಂಗಳ 10ರಂದು ಮಗಳ ಮದುವೆ ಇತ್ತು. ಹೀಗಾಗಿ ಮಂಜುನಾಥ್‌ ಅವರು ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ನಿನ್ನೆ ಶನಿವಾರ ಬೆಳಗ್ಗೆಯೂ ಸಹ ಮದುವೆಯ ಆಮಂತ್ರಣ ಪತ್ರಿಕೆ ಹಂಚಿ ಬಂದಿದ್ದರು. ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದ ಮಂಜುನಾಥ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಗಳ ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru
ಕ್ರೈಂ4 hours ago

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Wanindu Hasaranga
ಕ್ರೀಡೆ4 hours ago

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

NEET 2024
ಕರ್ನಾಟಕ4 hours ago

NEET 2024: ಆಗಸ್ಟ್‌ 5ರಿಂದ ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

virat kohli
ಕ್ರಿಕೆಟ್5 hours ago

Virat Kohli : ಲಂಕಾ ವಿರುದ್ಧದ ಪಂದ್ಯದ ನಡುವೆಯೇ ಬಿಹು ಡಾನ್ಸ್ ಮಾಡಿದ ವಿರಾಟ್ ಕೊಹ್ಲಿ, ಇಲ್ಲಿದೆ ವಿಡಿಯೊ

IND vs SL
ಪ್ರಮುಖ ಸುದ್ದಿ6 hours ago

IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

Bengal Minister
ದೇಶ6 hours ago

Bengal Minister: ಮಹಿಳಾ ಅಧಿಕಾರಿಗೆ ಬಂಗಾಳ ಸಚಿವ ಜೀವ ಬೆದರಿಕೆ; ದೀದಿ ಆದೇಶದ ಬಳಿಕ ರಾಜೀನಾಮೆ!

BJP-JDS Padayatra
ಕರ್ನಾಟಕ7 hours ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

Novak Djokovic
ಪ್ರಮುಖ ಸುದ್ದಿ7 hours ago

Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

PSI Parashuram Case
ಕ್ರೈಂ7 hours ago

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

Health Tips
ಆರೋಗ್ಯ7 hours ago

Health Tips: ಪಾದಗಳ ಊತ, ನೋವನ್ನು ಕಡಿಮೆ ಮಾಡಲು ಇಲ್ಲಿದೆ ಸರಳ ಉಪಾಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ14 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌