ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC Exam) ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನು (Time Table) ಪ್ರಕಟಿಸಿದೆ.
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆಯುಷ್ ಇಲಾಖೆಯಲ್ಲಿನ ಹೋಮಿಯೋಪತಿ, ಪದವಿ ಪೂರ್ವ ವಿದ್ಯಾರ್ಹತೆಯ ವಿವಿಧ ಇಲಾಖೆ, ಹೀಗೆ ಹಲವು ಇಲಾಖೆಗಳ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ವೇಳಾಪಟ್ಟಿ ಹೀಗಿದೆ…
1) ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ಲರುಗಳ ಸಹಾಯಕ ನಿರ್ದೇಶಕರು 03 ಹುದ್ದೆಗಳು (ಉಳಿಕೆ ಮೂಲ ವೃಂದ)ಕ್ಕೆ- ಸೆಪ್ಟೆಂಬರ್ 18ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
2) ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ (ಉಳಿಕೆ ಮೂಲ ವೃಂದ) – 10 ಹುದ್ದೆಗಳು- ಸೆಪ್ಟೆಂಬರ್ 19 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
3) ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
4) ಕಾರ್ಖಾನೆಗಳು, ಬಾಯ್ಲರ್‌ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು 07 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್ 27 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
5) ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 24 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್ 5ರಂದು ಪರೀಕ್ಷೆ ನಡೆಯಲಿದೆ.
6) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) 92 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್ 6 ರಂದು ಪರೀಕ್ಷೆ ನಡೆಯಲಿದೆ.
ಕೆಸೆಟ್- 2024ಕ್ಕೆ ಅರ್ಜಿ ಸಲ್ಲಿಸಲು ಆ.28ರವರೆಗೆ ವಿಸ್ತರಣೆ
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್- 24)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳಿಗೆ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನೋಡುವಂತೆ ತಿಳಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ