Site icon Vistara News

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

KSET updates

ಬೆಂಗಳೂರು: ಕೆಸೆಟ್ (KSET 2024) ಪರೀಕ್ಷೆಯಲ್ಲಿ ಅರ್ಹತೆ ಪಡೆದು, ವಿವಿಧ ಕಾರಣಗಳಿಂದ ಮೂಲ ದಾಖಲೆಗಳ ಪರಿಶೀಲನೆಗೆ ಒಳಪಡದವರ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ (ಆ.12) ಪ್ರಕಟಿಸಿದೆ. ಅಂತಹವರು ಇದೇ ಆ.17 ರಂದು ಹಾಜರಾಗಿ ಕೆಸೆಟ್ ಪ್ರಮಾಣ ಪತ್ರ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಜುಲೈ 11 ರಿಂದ 22 ಹಾಗೂ 31ರಂದು ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ, ಪ್ರಮಾಣ ಪತ್ರ ಕೂಡ ನೀಡಲಾಗಿದೆ. ಕೆಲವರು ಆ ಸಂದರ್ಭದಲ್ಲಿ ಹಾಜರಾಗಿದ್ದರೂ ಪ್ರಮಾಣ ಪತ್ರ ಕೊಟ್ಟಿರಲಿಲ್ಲ. ಅಂತಹವರು ನಂತರ ಮೂಲ ದಾಖಲೆಗಳನ್ನು ಕೊಟ್ಟು ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಪರಿಶೀಲಿಸಿ, ಯಾರೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಹರು ಎಂಬುದನ್ನು ತೀರ್ಮಾನಿಸಿದೆ. ಅಂತಹವರ ಪಟ್ಟಿಯನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಆ.17ರಂದು ಬೆಳಗ್ಗೆ 10ಗಂಟೆಗೆ ಮೂಲ ದಾಖಲೆ ಸಮೇತ ಹಾಜರಾಗಿ ಪ್ರಮಾಣ ಪತ್ರ ಪಡೆಯಬಹುದು. ಅನಿವಾರ್ಯ ಕಾರಣಗಳಿಂದ ಪರಿಶೀಲನೆ ಸಂದರ್ಭದಲ್ಲಿ ಗೈರುಹಾಜರಾಗಿದ್ದವರೂ ಅಂದು ಬಂದು ಪ್ರಮಾಣ ಪತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ:KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ಆಗಸ್ಟ್‌ 5ರಿಂದ ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗುತ್ತದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version