Site icon Vistara News

ಪತ್ರಿಕಾ ವಿತರಕರಿಗೆ ನೆರವು; ಸಿಎಂಗೆ ಕೆಯುಡಬ್ಲ್ಯೂಜೆ, ವಿತರಕರ ಒಕ್ಕೂಟ ಕೃತಜ್ಞತೆ

Siddaramaiah

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ, ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ. ನೆರವಿನ ಯೋಜನೆಯನ್ನು ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ಮೂಲಕ ಜಾರಿ ಮಾಡಿದ್ದಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗವು ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿತು.

ಇದೇ ಸಂದರ್ಭದಲ್ಲಿ ಯೋಜನೆ ಜಾರಿಗೆ ಸಹಕಾರ ನೀಡಿದ ಸಿಎಂ ಮಾಧ್ಯಮ ಸಂಯೋಜಕ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಗೌರವಿಸಿದರು.
ನಿಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್, ಪದಾಧಿಕಾರಿಗಳಾದ ಸುಬ್ರಹ್ಮಣ್ಯ, ಧರ್ಮಾಪುರ ನಾರಾಯಣ್, ರಾಘವೇಂದ್ರ, ಮೈಸೂರು ವಿತರಕರ ಸಂಘದ ಗೌರವಾಧ್ಯಕ್ಷ ಸಿ.ಕೆ.ಮಹೇಂದ್ರ ಮತ್ತಿತರರು ಹಾಜರಿದ್ದರು.

ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ನೀಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ.

ಇದನ್ನೂ ಓದಿ | Job Alert: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರನ್ನು ಭೇಟಿ ಮಾಡಿ‌ ಮನವಿ ಮಾಡಿದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version