ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್ ನಡೆಸಲಾಯಿತು.
ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.
ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.