ಬೆಂಗಳೂರು/ಚಿಕ್ಕೋಡಿ: ಬೈಕ್ ಸವಾರ ಹಾಗೂ ಕಾರು ಚಾಲಕನ ಮೇಲೆ ಚಿರತೆಯೊಂದು (Leopard attack) ದಾಳಿ ಮಾಡಿದೆ. ನಿನ್ನೆ ಶನಿವಾರ ರಾತ್ರಿ 8:30ರ ಸುಮಾರಿಗೆ ಮಾಗಡಿ ರಸ್ತೆಯ ಸಾವನದುರ್ಗದ ಬಳಿ ನಡೆದಿದೆ. ಬೈಕ್‌ಗೆ ಹಾಗೂ ಕಾರಿಗೆ ಮುಖಾಮುಖಿಯಾದ ಚಿರತೆಯು ರಸ್ತೆ ಬದಿ ಬಿದ್ದಿತ್ತು.
ಚಿರತೆ ಸತ್ತು ಹೋಗಿದೆ ಎಂದು ತಿಳಿದ ಬೈಕ್ ಸವಾರ ಹತ್ತಿರ ತೆರಳಿ ಮುಟ್ಟಲು ಹೋಗಿದ್ದ. ಈ ವೇಳೆ ಸತ್ತಂತೆ ಬಿದ್ದಿದ್ದ ಚಿರತೆ ಏಕಾಏಕಿ ದಾಳಿ ಮಾಡಿದೆ. ಬೈಕ್ ಹಾಗೂ ಕ್ಯಾಬ್ ಚಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೈಕ್‌ಗೆ ಟಾಟಾ ಎಸ್ ಡಿಕ್ಕಿ-ಮಹಿಳೆ ಸಾವು
ಬೈಕ್ ಗೆ ಟಾಟಾ ಎಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಎಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಎಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.
ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!
ಬೆಂಗಳೂರಲ್ಲಿ ಬೈಕ್ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.
ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ