Leopard | ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಚಿರತೆ, ಹೆಚ್ಚಿದ ಆತಂಕ - Vistara News

ಬೆಂಗಳೂರು

Leopard | ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಚಿರತೆ, ಹೆಚ್ಚಿದ ಆತಂಕ

ಚಿರತೆ (Leopard) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಒಬ್ಬಂಟಿಯಾಗಿ ಓಡಾಡದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

Leopard in Bengaluru university
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಚಿರತೆಯ (Leopard) ಭೀತಿ ಶುರುವಾಗಿದೆ. ರಾತ್ರಿ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿಶ್ವವಿದ್ಯಾಲಯ ಪ್ರವೇಶವನ್ನು ಬಂದ್ ಮಾಡಲಾಗಿದೆ.

ಚಿರತೆಯೊಂದು ವಿಶ್ವವಿದ್ಯಾಲಯ ಕ್ಯಾಂಪಸ್ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ವಿವಿಗೆ ಸಂಪರ್ಕಿಸುವ ನಾಗರಭಾವಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಈ ಮಾರ್ಗವಾಗಿ ಬರುತ್ತಿರುವ ವಾಹನಗಳನ್ನು ಪ್ರವೇಶಿ ನಿರಾಕರಿಸಿ, ಬೇರಡೆಗೆ ಕಳುಹಿಸಲಾಗಿದೆ.

ಯಾರನ್ನೂ ರಸ್ತೆಯಲ್ಲಿ ಬಿಡದಂತೆ ಸೂಚನೆ ನೀಡಲಾಗಿದೆ. ನಿರ್ದಿಷ್ಟ ಸಮಯದಲ್ಲಿ ಯಾವ ಗಾಡಿಗಳನ್ನು ಪೊಲೀಸರು ಬಿಟ್ಟಿಲ್ಲ. ಜ್ಞಾನ ಭಾರತಿ ಪೊಲೀಸರಿಂದ ಗೇಟ್ ಬಂದ್ ಮಾಡಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಒಬ್ಬಂಟಿಯಾಗಿ ಕ್ಯಾಂಪಸ್‌ನಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Leopard Attack | ಮಂಡ್ಯದಲ್ಲಿ ನಿಲ್ಲದ ಚಿರತೆ ಹಾವಳಿ; 6 ಮೇಕೆಗಳ ಕೊಂದು, 4 ಮೇಕೆಗಳನ್ನು ಹೊತ್ತೊಯ್ದ ಚಿರತೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Uttara Kannada landslide: ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ.

VISTARANEWS.COM


on

Uttara Kannada landslide
Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada landslide, Shiruru Landslide) ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ (Search Operation) ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಈಶ್ವರ ಮಲ್ಪೆ ತಂಡದ ಸದಸ್ಯನಿಗೆ ಗಾಯ

ಕಾರ್ಯಾಚರಣೆಗೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಓರ್ವ ಸದಸ್ಯನಿಗೆ ಗಾಯವಾಗಿದೆ. ಈಶ್ವರ ಮಲ್ಪೆ ತಂಡದ ದೀಪು ಎನ್ನುವವರು ಸ್ಥಳದಲ್ಲಿ ಡೈವಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈಶ್ವರ ಮಲ್ಪೆ ಯಾರು?

ಮೂಲತಃ ಈಶ್ವರ್ ಮಲ್ಪೆ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದು, ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಎಂಥದ್ದೇ ಪರಿಸ್ಥಿತಿ ಇದ್ದರೂ ಕರೆ ಬಂದ ತಕ್ಷಣ ಓಡಿ ಬರುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬಿದ್ದು ಸೌಪರ್ಣಿಕಾ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ. ಮರದ ಬೇರಿಗೆ ಸಿಲುಕಿ ದೇಹ ಅಲ್ಲಿಯೇ ಇತ್ತು. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಹೊರಕ್ಕೆ ತೆಗೆದಿದ್ದರು.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರವೂ (Rain News) ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯು (Karnataka Weather Forecast) ಜನರ ನಿದ್ದೆಗೆಡಿಸಿದೆ. ಅದರಲ್ಲೂ ನದಿ ಪಾತ್ರದ ಜನರು ಗಂಟುಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡಿದ್ದಾರೆ. ಸದ್ಯ ಭಾನುವಾರವೂ ಗಾಳಿ ಜತೆಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಬೆಂಗಳೂರಿನಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Puneeth Kerehalli: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಇದೇ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಅವರನ್ನು ಬಂಧಿಸಿದ್ದ ಕಾಟನ್‌ಪೇಟೆ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

VISTARANEWS.COM


on

Puneeth Kerehalli
Koo

ಬೆಂಗಳೂರು: ನಾಯಿ ಮಾಂಸ (Dog Meat) ಸಾಗಣೆಯ ವಾಹನವನ್ನು ತಡೆದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿರುವ ಪುನೀತ್‌ ಕೆರೆಹಳ್ಳಿ (Puneeth Kerehalli) ಅವರನ್ನು ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಹಾಗಾಗಿ, ಇನ್ನೂ 14 ದಿನ ದಿನ ಪುನೀತ್‌ ಕೆರೆಹಳ್ಳಿಯು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಳೆಯಲಿದ್ದಾರೆ. ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್‌ ವಿಜಯ್‌ ಕುಮಾರ್‌ ಅವರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದು, ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿವೆ.

puneeth kerehalli
puneeth kerehalli

ಇದೇ ಸಂದರ್ಭದಲ್ಲಿ, ಬಿಎನ್ಎಸ್ 132 ಆ್ಯಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಹಾಗೂ 351 (2) ಸೆಕ್ಷನ್‌ ಆರೋಪದಡಿ ಕಾಟನ್ ಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್‌ನನ್ನು ಸಿಬ್ಬಂದಿಗಳು ಕೆಸಿ ಜನರಲ್‌ ಆಸ್ಪತ್ರೆಗೆ ವ್ಹೀಲ್‌ಚೇರ್‌ನಲ್ಲಿ ಕರೆದೊಯ್ದಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಬೆಳಗಿನ ಜಾವ 4.45ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಆರೋಪಿಯನ್ನು ಆತುರಾತುರದಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಇದಾದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಜಾಮೀನು ಅರ್ಜಿ ಸಲ್ಲಿಕೆ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತನಾಗಿರುವ ಪುನೀತ್‌ ಕೆರೆಹಳ್ಳಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. “ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ” ಎಂಬುದಾಗಿ ಪುನೀತ್‌ ಕೆರೆಹಳ್ಳಿ ಪರ ವಕೀಲ ಉಮಾಶಂಕರ್‌ ಮಾಹಿತಿ ನೀಡಿದ್ದಾರೆ.

ನಾಯಿ ಮಾಂಸ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ವ್ಯಾಪಾರಿ ಅಬ್ದುಲ್ ರಜಾಕ್‌ ಅವರಿಗೂ ಸಂಕಷ್ಟ ಎದುರಾಗಿದೆ. ಪ್ರಕರಣದ ಕುರಿತು ಮಾತನಾಡಿರುವ ಅಬ್ದುಲ್‌ ರಜಾಕ್‌, ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೀತಿದೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ. ಪುನೀತ್ ಕೆರೆಹಳ್ಳಿ ಅದನ್ನು ನಾಯಿ ಅಂತಿದ್ದಾರೆ. ಹಣ ವಸೂಲಿ ಮಾಡೋಕೆ ಈ ರೀತಿ ಮಾಡ್ತಾ ಇದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಈ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Continue Reading

ಕರ್ನಾಟಕ

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

DK Shivakumar: ಬೆಂಗಳೂರಿನಲ್ಲಿ 250 ಮೀ. ಎತ್ತರದ ಸ್ಕೈಡೆಕ್ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Opposition MLAs agree to Skydeck near Nice Road will discuss in Cabinet meeting says DCM DK Shivakumar
Koo

ಬೆಂಗಳೂರು: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ 250 ಮೀ. ಎತ್ತರದ ಸ್ಕೈಡೆಕ್ ನಿರ್ಮಿಸಲು ಮುಂದಾಗಿದ್ದು, ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಶಾಸಕರ ಸಭೆ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್, ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಶನಿವಾರ ಮಾಹಿತಿ ನೀಡಿದರು.

250 ಮೀಟರ್ ಎತ್ತರದ ಈ ಸ್ಕೈಡೆಕ್‌ಗಾಗಿ 25 ಎಕರೆ ಜಾಗ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು. ಹೀಗಾಗಿ ಈಗ ನೈಸ್ ರಸ್ತೆಯ ಬಳಿ ಮಾಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲಾ ಶಾಸಕರು ಒಪ್ಪಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

ಈ ಜಾಗ ನೈಸ್ ಸಂಸ್ಥೆ ಬಳಿ ಇದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸರ್ಕಾರಕ್ಕೆ ನೈಸ್ ಸಂಸ್ಥೆ 200 ಎಕರೆ ಭೂಮಿ ವಾಪಸ್ ನೀಡಬೇಕಿದೆ ಎಂದು ಅಶೋಕ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ನೈಸ್ ಸಂಸ್ಥೆ ಬಳಿ ಚರ್ಚೆ ಮಾಡುತ್ತೇವೆ. ಈ ಯೋಜನೆಗಾಗಿ 10 ಜಾಗ ಹುಡುಕಲಾಗಿತ್ತು. ಆದರೆ ವಾಯುಸೇನೆ, ವಿಮಾನಯಾನ ಸಚಿವಾಲಯದವರು 20 ಕಿ.ಮೀ ವ್ಯಾಪ್ತಿಯಲ್ಲಿ ಈ ಯೋಜನೆ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದರು. ಹೀಗಾಗಿ ನೈಸ್ ರಸ್ತೆ ಬಳಿ ಮಾಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಸ್ಕೈಡೆಕ್ ಅನ್ನು ನಗರದ ಹೊರ ಭಾಗಕ್ಕೆ ತೆಗೆದುಕೊಂದು ಹೋದರೆ ಅದರ ಉದ್ದೇಶ ಈಡೇರುವುದೇ ಎಂದು ಮಾಧ್ಯಮಗಳು ಕೇಳಿದಾಗ, ಎಲ್ಲಾ ರೀತಿಯ ಲೆಕ್ಕಾಚಾರವನ್ನು ನಾವು ಹಾಕಿಯೇ ಈ ತೀರ್ಮಾನ ಮಾಡಿದ್ದೇವೆ. ನೈಸ್ ರಸ್ತೆ ಬಳಿ ಮಾಡುವುದರಿಂದ ಪ್ರವಾಸಿಗರು ಮೈಸೂರು, ಕೊಡಗು ಭಾಗಕ್ಕೆ ತೆರಳಲು ಮುಕ್ತವಾದ ಸಂಚಾರ ಮಾರ್ಗವಿರುತ್ತದೆ. ಇನ್ನು ನೈಸ್ ರಸ್ತೆ ಅಗಲೀಕರಣಕ್ಕೂ ಅವಕಾಶ ಇರುವುದರಿಂದ ಇದು ಸೂಕ್ತ ಜಾಗ ಎಂದು ಅಶೋಕ್ ಅವರು ಸಲಹೆ ನೀಡಿದ್ದಾರೆ. ಅವರ ಸಲಹೆಯಲ್ಲೂ ಅರ್ಥವಿದೆ. ಪೆರಿಫೆರಲ್ ರಿಂಗ್ ರಸ್ತೆ ಮಾಡಿದಾಗ ಎಲ್ಲಾ ಭಾಗಗಳಿಂದಲೂ ಇಲ್ಲಿಗೆ ಸಂಪರ್ಕ ಸಾಧಿಸಬಹುದು. ಇವರ ಸಲಹೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಕೆಂಗೇರಿಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೂ ಮೆಟ್ರೋ ಸಂಪರ್ಕ ಮಾಡಬೇಕಿದೆ. ಇದಕ್ಕೆ ಆರ್ಥಿಕ ಹೊರೆ ಇದ್ದು, ಈ ಭಾಗದಲ್ಲಿ ಅಭಿವೃದ್ಧಿ ಕಡಿಮೆ ಇರುವ ಕಾರಣ ಭೂಮಿ ವಶಕ್ಕೆ ಪಡೆಯಲು ಕಡಿಮೆ ವೆಚ್ಚವಾಗಲಿದೆ ಎಂದು ಈ ಸಲಹೆ ನೀಡಲಾಗಿದೆ. ಆರ್ಥಿಕವಾಗಿ ಎಲ್ಲಿ ನಮಗೆ ಅನುಕೂಲವಾಗುತ್ತದೆ ಎಂದು ಪರಿಶೀಲಿಸಲಾಗುವುದು. ಇದನ್ನು ಸರ್ಕಾರದಿಂದಲೇ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ತಿಳಿಸಿದರು.

ಸುರಂಗ ರಸ್ತೆ

ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಮೊದಲು ಎಸ್ಟೀಮ್ ಮಾಲ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ 18.5 ಕಿ.ಮೀ ಉದ್ದದ ಟನಲ್ ರಸ್ತೆ ಮಾಡಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಟೆಂಡರ್ ಕರೆಯಲಾಗುವುದು. ಈ ರಸ್ತೆ ನಿರ್ಮಾಣದ ವೇಳೆ ಕೆಲವು ಜಾಗಗಳನ್ನು ವಶಕ್ಕೆ ಪಡೆಯಬೇಕಾಗುತ್ತದೆ. ಈ ಎಲ್ಲಾ ವಿಚಾರವಾಗಿ ಶಾಸಕರ ಮುಂದೆ ಪ್ರಸ್ತಾಪ ಮಾಡಿದ್ದು, ಶಾಸಕರು ಈ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಇದನ್ನೂ ಓದಿ: Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರಿನ ಪೂರ್ವದಿಂದ ಪಶ್ಚಿಮಕ್ಕೆ ಒಂದು ಮಾರ್ಗ ಸಿದ್ಧ ಮಾಡಲಾಗಿದ್ದು, ಮುಂದಿನ ಹಂತಗಳಲ್ಲಿ ತೆಗೆದುಕೊಳ್ಳಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ಮೆಟ್ರೋ ಮಾರ್ಗಗಳನ್ನು ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು. ಪಾಲಿಕೆ ಹಾಗೂ ಮೆಟ್ರೋ ಎರಡೂ ಇಲಾಖೆಗಳು ಇದರ ವೆಚ್ಚವನ್ನು ಭರಿಸಲಿವೆ ಎಂದರು.

ಟನಲ್ ರಸ್ತೆ ಜತೆಗೆ 17-18 ಕಡೆಗಳಲ್ಲಿ ಜಾಗ ಹುಡುಕಿದ್ದು, ಸದ್ಯಕ್ಕೆ 100 ಕಿ.ಮೀ ನಷ್ಟು ಸಿಗ್ನಲ್ ಮುಕ್ತ ಕಾರಿಡಾರ್ ಮೇಲ್ಸೇತುವೆ ಮಾಡಲು ಮುಂದಾಗಿದ್ದು, ಇದಕ್ಕಾಗಿ 12 ಸಾವಿರ ಕೋಟಿಯಷ್ಟು ವೆಚ್ಚ ತಗುಲಲಿದೆ. ಇದಕ್ಕಾಗಿ ಟೆಂಡರ್ ಕರೆಯಲು ಸಿದ್ಧತೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ನಗರದ ಹೊರಗೆ ಕಸ ವಿಲೇವಾರಿ

ಇನ್ನು ಕಸ ವಿಲೇವಾರಿಗೆ ಬೆಂಗಳೂರಿನ ಹೊರಭಾಗದ 15-20 ಕಿ.ಮೀ ದೂರ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಜಾಗ ಗುರುತಿಸಿ ಅಲ್ಲಿ ಕಸ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಜಾಗ ಇದ್ದಲ್ಲಿ ಅದನ್ನು ಬಳಸಲಾಗುವುದು. ಇಲ್ಲವಾದರೆ ಖಾಸಗಿ ಜಮೀನುಗಳನ್ನು ಆಯುಕ್ತರು ಖರೀದಿ ಮಾಡಲಿದ್ದಾರೆ. ಕೇಂದ್ರ ಪರಿಸರ ಇಲಾಖೆ ನಿಯಮಾನುಸಾರ ಇದನ್ನು ಮಾಡಲಾಗುವುದು.

ಸಂಚಾರಿ ದಟ್ಟಣೆ ವಿಚಾರವಾಗಿ ಹಳೇ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿರುವುದರ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಆಯ್ಕೆ ನೀಡಲಾಗಿದ್ದು, ಇಂತಹ ಗಾಡಿಗಳನ್ನು ಅವರು ತೆಗೆದುಕೊಂಡು ಯಾರ್ಡ್‌ಗಳಿಗೆ ಹಾಕಿ ಹರಾಜು ಮಾಡಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಗಸ್ಟ್ 20ರ ವೇಳೆಗೆ ಕಾವೇರಿ 5ನೇ ಹಂತಕ್ಕೆ ಚಾಲನೆ

ಕಾವೇರಿ 5ನೇ ಹಂತದ ನೀರು ಪೂರೈಕೆ ಯೋಜನೆ ಪ್ರಯೋಗ ಹಂತದಲ್ಲಿದೆ. ಆಗಸ್ಟ್ 15ರಂದು ಇದಕ್ಕೆ ಚಾಲನೆ ನೀಡಲು ತೀರ್ಮಾನಿಸಿದ್ದೆ. ಆದರೆ ಅಧಿಕಾರಿಗಳು ಇನ್ನು ಐದಾರು ದಿನ ಸಮಯಾವಕಾಶ ಕೇಳುತ್ತಿದ್ದು, ಆಗಸ್ಟ್ 20ರ ವೇಳೆಗೆ ನೀರು ನೀಡಲಾಗುವುದು ಎಂದರು.

ವಿಶೇಷ ಅನುದಾನಕ್ಕೆ ಬೇಡಿಕೆ

ಇದೆಲ್ಲದರ ಜತೆಗೆ ಬೆಂಗಳೂರಿನ ಶಾಸಕರು ವಿಶೇಷ ಅನುದಾನಗಳನ್ನು ಕೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರ ಜತೆ ಚರ್ಚೆ ಮಾಡಿ ಎಷ್ಟು ಅನುದಾನ ನೀಡಲು ಸಾಧ್ಯವೋ ಅದನ್ನು ನೀಡುತ್ತೇವೆ. ಇಂದಿನ ಸಭೆಯಲ್ಲಿ ಎಲ್ಲರೂ ಉತ್ತಮವಾದ ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಹಳ ಅನುಭವದ ಶಾಸಕರಿದ್ದು, ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡಲು ಬಿಚ್ಚುಮನಸ್ಸಿನಿಂದ ಸಲಹೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ಬ್ರ್ಯಾಂಡ್ ಬೆಂಗಳೂರು ವಿಚಾರವಾಗಿ ಚರ್ಚೆಯಾಗಿದೆ. ಇನ್ನು ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ಎಲ್ಲಾ ಪಕ್ಷದ ಶಾಸಕರು ಸದನ ಸಮಿತಿ ರಚನೆಗೆ ಮನವಿ ಮಾಡಿದ ಕಾರಣ ಸಮಿತಿ ರಚನೆಗೆ ನಿರ್ಧರಿಸಿದ್ದೇವೆ. ವಿರೋಧ ಪಕ್ಷದ ನಾಯಕರು ಅವರ ಪಕ್ಷದ ಶಾಸಕರ ಹೆಸರನ್ನು ಎಷ್ಟು ಬೇಗ ನೀಡುತ್ತಾರೋ ಅಷ್ಟು ಬೇಗ ಸಮಿತಿ ರಚನೆ ಮಾಡಲಾಗುವುದು ಎಂದರು.

ರಾಗಿಗುಡ್ಡದ ಬಳಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗಿದ್ದು, ಈ ಯೋಜನೆ ಅನುಕೂಲವಾಗಿದೆ ಎಂಬ ವರದಿ ಬಂದಿದೆಯೇ ಎಂದು ಕೇಳಿದಾಗ, “ನಾಗ್ಪುರದಲ್ಲಿ ಮಾಡಲಾಗಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಪರಿಶೀಲನೆ ಮಾಡಿದ್ದೆ. ದಕ್ಷಿಣ ಭಾರತದಲ್ಲಿ ನಮ್ಮಲ್ಲೇ ಮೊದಲ ಬಾರಿಗೆ ಇದನ್ನು ಮಾಡಲಾಗಿದೆ. ಅವುಗಳ ಸಾಧಕ ಭಾದಕ ಗಮನಿಸಿದ್ದೇವೆ. ಈಗ ಸಿದ್ಧವಾಗಿರುವ ಮೇಲ್ಸೇತುವೆಯ ಒಂದು ಭಾಗ ಮಾತ್ರ ಚಾಲನೆಯಾಗಿದ್ದು, ಮತ್ತೊಂದು ಭಾಗ ಚಾಲನೆ ಆಗಬೇಕು. ಕೆಲವು ಭಾಗಗಳಲ್ಲಿ ಅಂಡರ್ ಪಾಸ್ ಮಾಡಲು ರಾಮಲಿಂಗಾ ರೆಡ್ಡಿ ಹಾಗೂ ಇತರರು ಸಲಹೆ ನೀಡಿದ್ದು, ಆ ಬಗ್ಗೆ ಪ್ರಸ್ತಾವನೆ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಸ್ಕೈಡೆಕ್ ಯೋಜನೆಗೆ ಅಗತ್ಯವಿರುವ ಜಾಗ ಹಾಗೂ ವೆಚ್ಚದ ಬಗ್ಗೆ ಕೇಳಿದಾಗ, ಮೊದಲು ಈ ಯೋಜನೆಯನ್ನು ಕಂಠೀರವ ಕ್ರೀಡಾಂಗಣದ ಎದುರು ಮಾಡಲು ಪ್ರಸ್ತಾವನೆ ನೀಡಿದ್ದರು. ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತದೆ ಹಾಗೂ ಎಚ್ಎಎಲ್‌ನಿಂದ ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅಲ್ಲಿ ಮಾಡುತ್ತಿಲ್ಲ. ಈ ಯೋಜನೆಗೆ 400-500 ಕೋಟಿ ವೆಚ್ಚವಾಗಲಿದ್ದು, ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುವ ಉದ್ದೇಶದಿಂದ ಕನಿಷ್ಠ ಪಕ್ಷ 25 ಎಕರೆ ಜಾಗ ಅಗತ್ಯವಿದೆ ಎಂದು ಅಂದಾಜಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು ಕೆರೆಗಳ ವಿಚಾರವಾಗಿ ಕೇಳಿದಾಗ, ಬೆಂಗಳೂರು ಕೆರೆಗಳ ವಿಚಾರವಾಗಿ ಮತ್ತೊಂದು ಸಭೆ ಕರೆಯಲಿದ್ದೇನೆ. ಬಿಡಬ್ಲ್ಯೂಎಸ್ಎಸ್‌ಬಿ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರ ಮಾಡಿ ಎಲ್ಲಾ ಕೆರೆಗಳಿಗೆ ಶುದ್ಧೀಕರಿಸಿದ ನೀರನ್ನು ಹರಿಸಲಾಗುವುದು. ಆ ಮೂಲಕ ಅಂತರ್ಜಲ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆ ಸಂಬಂಧ ಚರ್ಚೆ ಆಯಿತಾ, ಚುನಾವಣೆ ಯಾವಾಗ ಮಾಡಬಹುದು ಎಂದು ಕೇಳಿದಾಗ, ನ್ಯಾಯಾಲಯ ಆದೇಶ ನೀಡಿದ ನಂತರ ಖಂಡಿತವಾಗಿ ಚುನಾವಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ವಿಜಯೇಂದ್ರ ಅಪ್ರಬುದ್ಧ ರಾಜಕಾರಣಿ

ರಾಹುಲ್ ಗಾಂಧಿ ಪದೇ ಪದೆ ಪರಿಶಿಷ್ಟರ ಬಗ್ಗೆ ಮಾತನಾಡುತ್ತಾರೆ, ಹಾಗಾಗಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹಾಗೆ ನೋಡಿದರೆ ವಾಲ್ಮೀಕಿ ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರುವುದರಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಮಾತನಾಡಬೇಕು. ಬ್ಯಾಂಕ್‌ಗಳು ಕೇವಲ 2 ಗಂಟೆಗಳಲ್ಲಿ ಸಾಲವನ್ನು ಮಂಜೂರು ಮಾಡಿದ್ದು, ಬ್ಯಾಂಕುಗಳ ಅಧಿಕಾರವನ್ನು ಹೊಂದಿರುವ ನಿರ್ಮಲಾ ಸೀತರಾಮನ್ ಮಾತನಾಡಬೇಕು ಎಂದು ಅವರು ಕೇಳುತ್ತಿಲ್ಲ ಯಾಕೆ?

ವಿಜಯೇಂದ್ರ ಓರ್ವ ಅಪ್ರಬುದ್ಧ ರಾಜಕಾರಣಿ. ಅವರ ಹಗರಣಗಳನ್ನು ನಾವು ಸಧ್ಯದಲ್ಲೇ ಬಹಿರಂಗಪಡಿಸುತ್ತೇವೆ. ಅವರ ಹಗರಣಗಳ ಬಗ್ಗೆ ಬಿಜೆಪಿ ಪಕ್ಷಕ್ಕೂ ಗೊತ್ತಿದೆ. ಅವರ ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅವರ ತಂದೆ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲಾ ಮಾಡಿದ್ದಾರೆ ಎಂದು ಗೊತ್ತಿದೆ. ಅವರ ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ? ವಿಜಯೇಂದ್ರ ಅವರು ಪ್ರಮಾಣಿಕರಾಗಿಲ್ಲ. ಹೀಗಾಗಿ ಅವರು ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.

ಮುಡಾ ಹಗರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮುಡಾ ಹಗರಣಗಳನ್ನು ಮಾಡಿರುವುದು ಬಿಜೆಪಿ. ನಮ್ಮ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದವರಿಗೂ ಈ ಅಕ್ರಮಕ್ಕೂ ಸಂಬಂಧವಿಲ್ಲ. ಮುಡಾ ಅವರು ಇವರ ಜಮೀನನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಮುಖ್ಯಮಂತ್ರಿಗಳ ಕುಟುಂಬದವರು ಮುಡಾ ಸಂಸ್ಥೆಯಿಂದ ಪರಿಹಾರ ಪಡೆಯಲು ಅರ್ಹರಾಗಿದ್ದು, ಅವರು ಪರಿಹಾರ ಪಡೆದಿದ್ದಾರೆ. ಕಾನೂನು ಪ್ರಕಾರವಾಗಿ ಅವರು ಪರಿಹಾರ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬದಲಿ ನಿವೇಶನ ಕೇಳಿದ್ದಾರೆ. ಅದೇ ರೀತಿ ಅನೇಕರು ನಿವೇಶನ ಪಡೆದಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಮುಡಾದಲ್ಲಿ ಅಕ್ರಮ ನಡೆದಿದ್ದರೆ ಅದು ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿದೆ. ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಕ್ರಮ ನಡೆದಿದೆ. ಈ ಕಾರಣಕ್ಕೆ ನಮ್ಮ ಮುಖ್ಯಮಂತ್ರಿಗಳು 2006ರಿಂದ ಮುಡಾ ಅಕ್ರಮ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Continue Reading
Advertisement
New Governors
ದೇಶ9 mins ago

New Governors: ನೂತನ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ; ಮೈಸೂರಿನ ವಿಜಯ ಶಂಕರ್ ಮೇಘಾಲಯ ಗವರ್ನರ್‌

karnataka rain news yadgir
ಪ್ರಮುಖ ಸುದ್ದಿ15 mins ago

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

vali sugreeva ಧವಳ ಧಾರಿಣಿ
ಅಂಕಣ56 mins ago

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

beml factory kgf
ಕೋಲಾರ1 hour ago

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

ರಾಜಮಾರ್ಗ ಅಂಕಣ n narasimhaiah
ಅಂಕಣ1 hour ago

ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Uttara Kannada landslide
ಪ್ರಮುಖ ಸುದ್ದಿ2 hours ago

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Weight lose
ಆರೋಗ್ಯ2 hours ago

Weight Lose: ಏನೇ ಸರ್ಕಸ್‌ ಮಾಡಿದರೂ ತೂಕ ಇಳಿಯದೇ? ಹಾಗಿದ್ದರೆ ಕಾರಣ ಇದಾಗಿರಬಹುದು!

World Hepatitis Day
ಆರೋಗ್ಯ3 hours ago

World Hepatitis Day: ಏನಿದು ಹೆಪಟೈಟಿಸ್‌? ಇದು ಏಕೆ ಅಪಾಯಕಾರಿ?

karnataka weather Forecast
ಮಳೆ3 hours ago

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Dina bhavishya
ಭವಿಷ್ಯ3 hours ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ18 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ19 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌