ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ (Lok Sabha Election 2024) ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರ ಕಣ್ತಪ್ಪಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅಪರಿಚಿತರಿಂದ ಬಂದ ಫೋನ್ ಕರೆ ಮೇರೆಗೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದರು. ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂಬ ವಿಷಯ ತಿಳಿದಿತ್ತು. ಕಿಡಿಗೇಡಿಗಳು ಎರಡು ಕಾರು ಹಾಗೂ ಸ್ಕೂಟಿಯಲ್ಲಿ ಬಂದಿದ್ದರು. ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್ ಮಾಡಿದ್ದರು.
ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಮೊದಮೊದಲು ತಪಾಸಣೆಗೆ ಅಡ್ಡಿಪಡಿಸಿದ್ದಾರೆ. ಅನುಮಾನಬಾರದಿರಲಿ ಎಂದು ಸುಮಾರು 4 ಕೋಟಿ ರೂ. ಹಣವನ್ನು ಚೀಲವೊಂದರಲ್ಲಿ ತುಂಬಿಸಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್ ಅದು ಬಿಡ್ರೀ ಎಂದು ದಬಾಯಿಸಿ, ಕಾರು ಲಾಕ್ ಮಾಡಿದ್ದಾರೆ.
ಆದರೆ ಇವರ ನಡೆಯಿಂದ ಮತ್ತಷ್ಟು ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್ ಒಡೆದು ಪರಿಶೀಲನೆ ನಡೆಸಿದಾಗ ನಾಲ್ಕು ಕೋಟಿ ರೂ. ಹಣ ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ, 4 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ ಹಣ ತುಂಬಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಚುನಾವಣಾಧಿಕಾರಿ ಮೌನೀಶ್ ಮುದ್ಗಿಲ್ ಮಾಹಿತಿ ನೀಡಿದ್ದಾರೆ. ವೆಹಿಕಲ್‌ನಲ್ಲಿ ಹಣ ಇರಬಹುದು ಎಂದು ಶನಿವಾರ ಬೆಳಗ್ಗೆ ನಮಗೊಂದು ಅಪರಿಚಿತ ಕರೆ ಬಂದಿತ್ತು. ಕರೆ ಬಂದ ಮೂರು ನಿಮಿಷಕ್ಕೆ ನಮ್ಮ ಅಧಿಕಾರಿ ವಿನೋದ್ ಪ್ರಿಯಾ ಅವರು ಸ್ಥಳಕ್ಕೆ ಭೇಟಿ ನೀಡಿದರು. ಸ್ಪಾಟ್‌ಗೆ ಬಂದಾಗ ಸ್ಕೂಟರ್‌ನಿಂದ ಫಾರ್ಚೂನರ್‌ಗೆ ಹಣ ಶಿಫ್ಟ್ ಮಾಡುತ್ತಿದ್ದರು. ಫಾರ್ಚೂನರ್‌ನಲ್ಲಿ ಒಟ್ಟು ಐದು ಜನ ಇದ್ದರು. ಮಹಿಳಾ ಅಧಿಕಾರಿ ಒಬ್ಬರೇ ಇದ್ದರು ಅವರನ್ನು ಪ್ರಶ್ನೆ ಮಾಡಿ, ತಕ್ಷಣ ದ್ವಿಚಕ್ರ ವಾಹನದಲ್ಲಿದ್ದ ಒಂದು ಬ್ಯಾಗ್ ಜಪ್ತಿ ಮಾಡಿದರು. ಸದ್ಯ ಈಗ ಹಣದ ಕೌಟಿಂಗ್ ನಡೀತಾ ಇದ್ದು, 1 ಕೋಟಿ ರೂ.ಗೂ ಅಧಿಕ ಹಣ ಇದೆ ಎಂದು ತಿಳಿಸಿದರು.
ಹಣ ಸಾಗಾಟಕ್ಕೆ ಹೊಸ ಕಾರು ಖರೀದಿಸಿದ್ರಾ?
ಇನ್ನೂ ಅಕ್ರಮವಾಗಿ ಹಣ ಸಾಗಾಟ ಮಾಡಲು ಹೊಸ ಕಾರು ಖರೀಸಿದ್ರಾ ಎಂಬ ಅನುಮಾನ ಮೂಡಿದೆ. ಬೆಂಚ್ ಕಾರನ್ನು ನಿನ್ನೆ ಶುಕ್ರವಾರವಷ್ಟೇ ಖರೀದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದು ಫಾರ್ಚೂನರ್ ಕಾರು ತಡೆದು ಪರಿಶೀಲನೆ ನಡೆಸುತ್ತಿದ್ದಂತೆ ಐವರು ಪರಾರಿ ಆಗಿದ್ದಾರೆ. ಕಾರ್ ಮೂವ್ಮೆಂಟ್ ಇದ್ದರೂ ವಿನೋದ್ ಪ್ರಿಯಾ ಅವರು ಕಾರಿನ ನಂಬರ್ ಪ್ಲೇಟ್ ನೋಟ್ ಮಾಡಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ