Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಾಂತರ ರೂಪಾಯಿ ವಾರಸುದಾರರು ಯಾರು? ಪೊಲೀಸ್‌ ತನಿಖೆ ಚುರುಕು - Vistara News

ಬೆಂಗಳೂರು

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಾಂತರ ರೂಪಾಯಿ ವಾರಸುದಾರರು ಯಾರು? ಪೊಲೀಸ್‌ ತನಿಖೆ ಚುರುಕು

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಾಂತರ ರೂಪಾಯಿ ವಿಷಯವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಆರೋಪ ಪ್ರತ್ಯಾರೋಪ ಮುಂದುವರಿದಿದೆ. ಈ ನಡುವೆ ಚುನಾವಣಾಧಿಕಾರಿಗಳು ಹಾಗೂ ಜಯನಗರ ಪೊಲೀಸರು ಹಣ ಬಿಟ್ಟು ಪರಾರಿ ಆಗಿರುವವರಿಗೆ ಹುಡುಕಾಟ ನಡೆಸಿದ್ದು, ಕಾರು ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

VISTARANEWS.COM


on

lok sabha election Bengaluru Jayanagar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣಾ (Lok Sabha Election 2024) ಸಮಯದಲ್ಲಿ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣವನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಸದ್ಯ ನಿನ್ನೆ ಶನಿವಾರ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೋಟಿ ಕೋಟಿ ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಇಷ್ಟೊಂದು ಹಾರ್ಡ್ ಕ್ಯಾಶ್ ಎಲ್ಲಿಗೆ ಸಾಗಾಟ ಮಾಡಲಾಗುತ್ತಿತ್ತು, ಎಲ್ಲಿಂದ ತೆಗೆದುಕೊಂಡು ಬರಲಾಗಿತ್ತು? ಜತೆಗೆ ಹಣ, ಬೆಲೆ ಬಾಳುವ ಕಾರು, ದಾಖಲೆಗಳನ್ನು ಸ್ಥಳದಲ್ಲೇ ಬಿಟ್ಟು ಕಿಡಿಗೇಡಿಗಳು ಕಾಲ್ಕಿತ್ತಿದ್ದೇಕೆ? ಎಂಬ ಅನುಮಾನ ಮೂಡಿದೆ.

ಈ ಪ್ರಕರಣವು ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಕಾಂಗ್ರೆಸ್ ಮೇಲೆ ಬಿಜೆಪಿ, ಬಿಜೆಪಿ ಮೇಲೆ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಸದ್ಯ ಎಲ್ಲಾ ಆಯಾಮದಲ್ಲೂ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈಗಾಗಲೇ ಕಾರು ಮತ್ತು ಬೈಕ್ ಸೋಮಶೇಖರ್ ಜಿ, ಧನರಾಜ್ ಎಂಬುವರ ಹೆಸರಲ್ಲಿ ಇರುವುದು ತಿಳಿದು ಬಂದಿದೆ. ಈಗಾಗಲೇ ವೆಹಿಕಲ್ ಮಾಹಿತಿ ಆಧಾರದ ಮೇಲೆ ಅವರ ಮನೆಗಳಿಗೆ ನೋಟಿಸ್‌ ನೀಡಲಾಗಿದೆ.

ಕಾರಿನಲ್ಲಿ‌ ಒಂದಷ್ಟು ದಾಖಲೆಗಳು, ಹಾರ್ಡ್ ಡಿಸ್ಕ್, ಡೆಬಿಟ್ ಕಾರ್ಡ್‌ಗಳು ಪತ್ತೆಯಾಗಿವೆ. ಹೀಗಾಗಿ ಕಾರಿನಲ್ಲಿ ಪತ್ತೆಯಾಗಿರುವ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಈವರೆಗೆ 1 ಕೋಟಿ 34 ಲಕ್ಷ ರೂ. ಹಣ ಪತ್ತೆಯಾಗಿದೆ. ಇನ್ನೊಂದು ಕಡೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

ಕಾಂಗ್ರೆಸ್‌ಗೆ ಸೋಲಿನ ಹತಾಶೆ- ತೇಜಸ್ವಿ ಸೂರ್ಯ

ಜಯನಗರದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಾಂತರ ರೂ. ಹಣ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಕರೆಯೊಂದು ಬಂದಿತ್ತು, ಆ ಪ್ರಕಾರ ಕಾಂಗ್ರೇಸ್ ಸದಸ್ಯರು ಹಣ ಹಂಚುತ್ತಿರುವ ಕುರಿತು ಮಾಹಿತಿ ನೀಡಿದರು. ಯಾರಿಂದ ಬಲವಂತವಾಗಿ ಹಣ ಪಡೆದಿದ್ದಾರೋ ಅವರಿಂದಲೇ ಮಾಹಿತಿ ಸೋರಿಕೆಯಾಗಿತ್ತು. ಕೂಡಲೇ ನಾವು ಈ ವಿಚಾರವನ್ನು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದೆವು. ಕೂಡಲೇ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್ ಕಾರು ಹಾಗು ನೋಂದಣಿಯಾಗದ ಬೆಂಜ್‌ ಕಾರನ್ನು ತಡೆದು ತಪಾಸಣೆ ನಡೆಸಿದಾಗ 1.5 ಕೋಟಿ ಹಣ ಕಂಡು ಬಂದಿದೆ. ಕೂಡಲೇ ಅಲ್ಲಿಂದ ಆರೋಪಿಗಳು ಎಸ್ಕೇಪ್‌ ಆಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ತೇಜಸ್ವೀ ಸೂರ್ಯ, ಕಾಂಗ್ರೆಸ್‌ಗೆ ಈ ಬಾರಿ ನೂರಕ್ಕೆ ನೂರು ಸೋಲು ಖಚಿತ ಎಂಬ ಸತ್ಯ ಗೊತ್ತಾಗಿದೆ. ಹಾಗಾಗಿ ದುಡ್ಡಿನ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದೆ. ಕೆಲ ದಿನಗಳ ಹಿಂದೆ ರ್‍ಯಾಲಿ ವೇಳೆ ಸಿದ್ಧರಾಮಯ್ಯನವರಿಗೆ ಗನ್‌ ಹಿಡಿದು ಹಾರ ಹಾಕಿ ಜನರನ್ನು ಭಯಪಡಿಸುವ ಪ್ರಸಂಗ ಕೂಡ ನಡೆದಿದೆ. ಈಗ ಕೋಟಿ ಹಣದ ಮೂಲಕ ಚುನಾವಣೆ ಎದುರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌ನ ಇಂತಹ ಕಾರ್ಯಗಳಿಗೆ ತಡೆ ಹಾಕುವ ಉದ್ದೇಶದಿಂದಲೇ ನಾವೇ ಚುನಾವಣಾ ಅಧಿಕಾರಿಗಳಿಗೆ ವಾಹನದ ಸಂಖ್ಯೆ ಹಾಗು ಸ್ಥಳದ ಸಮೇತ ಅಕ್ರಮ ಹಣ ವರ್ಗಾವಣೆ ಬಗ್ಗೆ ಮಾಹಿತಿ ನೀಡಿದೆವು. ಕೇವಲ 10 ನಿಮಿಷದಲ್ಲಿ ಅಧಿಕಾರಿಗಳು ಅಕ್ರಮ ಹಣ ಜಪ್ತಿ ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ ತನ್ನ ಹಣಬಲ, ತೋಳ್‌ಬಲ, ಅಧಿಕಾರ ಬಲದಿಂದ ಚುನಾವಣೆ ಗೆಲ್ಲಲು ಮುಂದಾಗಿದೆ. ಆದರೆ ಅಂತಿಮವಾಗಿ ಬೆಂಗಳೂರು ದಕ್ಷಿಣದ ಜನರ ಸ್ವಾಭಿಮಾನ ಗೆಲ್ಲುತ್ತದೆ ಎಂಬುದನ್ನು ಕಾಂಗ್ರೆಸ್‌ ಮನದಟ್ಟು ಮಾಡಿಕೊಳ್ಳಬೇಕಿದೆ. ನರೇಂದ್ರ ಮೋದಿಯವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡುತ್ತಾರೆ ಎಂದು ನುಡಿದರು.

ಇದನ್ನೂ ಓದಿ: Murder case : ಸದ್ಯಕ್ಕೆ ಮಗು ಮಾಡಿಕೊಳ್ಳುವುದು ಬೇಡ ಎಂದಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಂದ

ಏನಿದು ಘಟನೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ (Lok Sabha Election 2024) ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರ ಕಣ್ತಪ್ಪಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣವನ್ನು ಸೀಜ್‌ ಮಾಡಲಾಗಿತ್ತು. ಏ.13ರಂದು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.

ಅಪರಿಚಿತರಿಂದ ಬಂದ ಫೋನ್‌ ಕರೆ ಮೇರೆಗೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದರು. ಜಯನಗರದಲ್ಲಿ ಬೆಂಜ್‌ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂಬ ವಿಷಯ ತಿಳಿದಿತ್ತು. ಕಿಡಿಗೇಡಿಗಳು ಎರಡು ಕಾರು ಹಾಗೂ ಸ್ಕೂಟಿಯಲ್ಲಿ ಬಂದಿದ್ದರು. ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್‌ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದರು.

ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಮೊದಮೊದಲು ತಪಾಸಣೆಗೆ ಅಡ್ಡಿಪಡಿಸಿದ್ದಾರೆ. ಅನುಮಾನಬಾರದಿರಲಿ ಎಂದು ಸುಮಾರು 4 ಕೋಟಿ ರೂ. ಹಣವನ್ನು ಚೀಲವೊಂದರಲ್ಲಿ ತುಂಬಿಸಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್‌ ಅದು ಬಿಡ್ರೀ ಎಂದು ದಬಾಯಿಸಿ, ಕಾರು ಲಾಕ್‌ ಮಾಡಿದ್ದಾರೆ. ಆದರೆ ಇವರ ನಡೆಯಿಂದ ಮತ್ತಷ್ಟು ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ಗರಿ ಗರಿ ಹಣದ ಕಂತೆ ಪತ್ತೆಯಾಗಿತ್ತು. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ಕಾಲ್ಕಿತ್ತಿದ್ದರು.

ಈ ಬಗ್ಗೆ ಚುನಾವಣಾಧಿಕಾರಿ ಮೌನೀಶ್ ಮುದ್ಗಿಲ್ ಶನಿವಾರ ಬೆಳಗ್ಗೆ ನಮಗೊಂದು ಅಪರಿಚಿತ ಕರೆ ಬಂದಿತ್ತು. ಕರೆ ಬಂದ ಮೂರು ನಿಮಿಷಕ್ಕೆ ನಮ್ಮ ಅಧಿಕಾರಿ ವಿನೋದ್ ಪ್ರಿಯಾ, ನಿಖಿತಾ ಅವರು ಸ್ಥಳಕ್ಕೆ ಭೇಟಿ ನೀಡಿದರು. ಸ್ಪಾಟ್‌ಗೆ ಬಂದಾಗ ಸ್ಕೂಟರ್‌ನಿಂದ ಫಾರ್ಚೂನರ್‌ಗೆ ಹಣ ಶಿಫ್ಟ್ ಮಾಡುತ್ತಿದ್ದರು.

ಹಣ ಸಾಗಾಟಕ್ಕೆ ಹೊಸ ಕಾರು ಖರೀದಿಸಿದ್ರಾ?

ಇನ್ನೂ ಅಕ್ರಮವಾಗಿ ಹಣ ಸಾಗಾಟ ಮಾಡಲು ಹೊಸ ಕಾರು ಖರೀಸಿದ್ರಾ ಎಂಬ ಅನುಮಾನ ಮೂಡಿದೆ. ಬೆಂಚ್‌ ಕಾರನ್ನು ನಿನ್ನೆ ಶುಕ್ರವಾರವಷ್ಟೇ ಖರೀದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದು ಫಾರ್ಚೂನರ್‌ ಕಾರು ತಡೆದು ಪರಿಶೀಲನೆ ನಡೆಸುತ್ತಿದ್ದಂತೆ ಐವರು ಪರಾರಿ ಆಗಿದ್ದಾರೆ. ಕಾರ್ ಮೂವ್ಮೆಂಟ್‌ ಇದ್ದರೂ ಚುನಾವಣಾಧಿಕಾರಿ ನಿಖಿತಾ ಅವರು ಕಾರಿನ ನಂಬರ್ ಪ್ಲೇಟ್‌ ನೋಟ್ ಮಾಡಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Appu Cup Season 2: ಅಪ್ಪು ಕಪ್‌ ಸೀಸನ್‌ 2ಗೆ ವಿಧ್ಯುಕ್ತ ಚಾಲನೆ; ಅಶ್ವಿನಿ ಪುನೀತ್‌ ಟ್ರೋಫಿ ಅನಾವರಣ

Appu Cup Season 2: ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದ ವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

VISTARANEWS.COM


on

Appu Cup Season 2
Koo

ಬೆಂಗಳೂರು: ಓರಾಯನ್ ಮಾಲ್‌ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ” ಅಪ್ಪು ಕಪ್ ಸೀಸನ್ 2″ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ (Appu Cup Season 2) ಅದ್ಧೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್‌ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ಅನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು. ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದ ವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು. ‘ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ “ಅಪ್ಪು ಕಪ್ ಸೀಸನ್ 2” ಯಶಸ್ವಿಯಾಗಲಿ’ ಎಂದು ಶ್ರೀಮುರಳಿ ಹಾರೈಸಿದರು.

‘ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ “ಅಪ್ಪು ಕಪ್” ಶಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ 100 ಗ್ರಾಂ ಬಂಗಾರ, ದ್ವಿತೀಯ ವಿಜೇತರಿಗೆ 50 ಗ್ರಾಂ ಬಂಗಾರ ಹಾಗೂ ಮೂರನೇ ವಿಜೇತರಿಗೆ 25 ಗ್ರಾಂ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್‌ನ ಶರವಣ ತಿಳಿಸಿದರು.

ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ “ಅಪ್ಪು ಕಪ್” ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ‌. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ‌. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ “ಅಪ್ಪು ಕಪ್”ನ ರೂವಾರಿ ಚೇತನ್ ಸೂರ್ಯ, ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಹತ್ತು ತಂಡಗಳ ಲೋಗೊ, ಜರ್ಸಿ ಅನಾವರಣ ಮಾಡಿ, ತಂಡದ ಮಾಲೀಕರ ಹಾಗೂ ಆಟಗಾರರ ಪರಿಚಯ ಮಾಡಿಕೊಡಲಾಯಿತು. ALL OK (ಅಲೋಕ್), ಸಮರ್ಜಿತ್ ಲಂಕೇಶ್, ಐಶ್ವರ್ಯ ಸಿಂದೋಗಿ, ಅಭಿಲಾಶ್ ದಳಪತಿ, ಕಾವ್ಯ ಶಾ, ಶರತ್ ಕ್ಷತ್ರಿಯ, ದಿಲೀಪ್ ಕೆಂಪೇಗೌಡ, ಸಿರಿ ರಾಜು, ರಾಮ್ ಪವನ್, ಐಶಾನ, ಲಾವಣ್ಯ, ದೇವನ್, ರಾಘವ್ ನಾಗ್, ಸುನಾಮಿ ಕಿಟ್ಟಿ, ವಿಜಯ್ ಸಿದ್ದರಾಜ್, ವ್ಯಾಸರಾಜ ಸೋಸಲೆ, ಜ್ಯೋತಿ ವ್ಯಾಸರಾಜ್ ಸೇರಿದಂತೆ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು. “ಅಪ್ಪು ಕಪ್” ನಲ್ಲಿ ಆಡುತ್ತಿರುವ ತಂಡಗಳು ಹೀಗಿದೆ.

1) ಅರಸು ಹಂಟರ್ಸ್ ಮಾಲೀಕರು ಆನಂದ್(PRO Win management) . ನಾಯಕ ಹರೀಶ್ ನಾಗರಾಜ್. 2) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ(Oirgin Ventures), ನಾಯಕ ರವಿ ಚೇತನ್. 3) ಪವರ್ ಪೈತಾನ್ಸ್ ಮಾಲೀಕರು ಐಶ್ವರ್ಯ (SN Jals Events), ‌ನಾಯಕ ಸದಾಶಿವ ಶೆಣೈ. 4) ದೊಡ್ಮನೆ ಡ್ರಾಗನ್ಸ್ ಮಾಲೀಕರು ಮಹೇಶ್ ಗೌಡ,(MKJ Group), ನಾಯಕ ಪ್ರಮೋದ್ ಶೆಟ್ಟಿ. 5) ಜಾಕಿ ರೈಡರ್ಸ್ ಮಾಲೀಕರು ಶ್ರೀಹರ್ಷ(Sri Entertainments), ನಾಯಕ ಮನು ರವಿಚಂದ್ರನ್, 6) ರಾಜಕುಮಾರ ಕಿಂಗ್ಸ್ (Kings Club), ಮಾಲೀಕರು ವಿ.ರವಿಕುಮಾರ್ & ಶಂಶುದ್ದೀನ್, ನಾಯಕ ವಿಕ್ರಮ್ ರವಿಚಂದ್ರನ್, 7) ಗಂಧದಗುಡಿ ವಾರಿಯರ್ಸ್ ಮಾಲೀಕರು ಡಾ.ಚೇತನ ಆರ್ ಎಸ್,(Kalaluha), ನಾಯಕ ಭುವನ್ ಗೌಡ, 8)ವೀರ ಕನ್ನಡಿಗ ಬುಲ್ಸ್ ಮಾಲೀಕರು ಮೋನೀಶ್ ಸಿ.‌(Builder), ನಾಯಕ ದಿಲೀಪ್ ರಾಜ್. 9)ಯುವರತ್ನ ಚಾಂಪಿಯನ್ಸ್ ಮಾಲೀಕರು ಬಿ.ಎಂ.ಶ್ರೀರಾಮ್ ಕೋಲಾರ್(Deepa Films), ನಾಯಕ ಪ್ರವೀಣ್ ತೇಜ್, 10) ಮೌರ್ಯ ವೈಟ್ ಗೋಲ್ಡ್, ಮಾಲೀಕರು ಬಾಬು ಸಿ.ಜೆ(White Gold), ನಾಯಕ ನಿರಂಜನ್ ದೇಶಪಾಂಡೆ.

ಇದನ್ನೂ ಓದಿ: Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

Continue Reading

ಕರ್ನಾಟಕ

Revenue Officers: ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಸಚಿವ ಕೃಷ್ಣಭೈರೇಗೌಡ ಸೂಚನೆ

Revenue Officers: ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿವರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.

VISTARANEWS.COM


on

Revenue Officers
Koo

ಬೆಂಗಳೂರು: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾರ್ವಜನಿಕರಿಂದ ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು (Revenue Officers) ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿಸಿ ಹಂಚಿಕೊಂಡಿರುವ ಸಚಿವರು, ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಅಂತಹ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ

ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ದೂರುಗಳು ದಾಖಲಾಗಿರುವ ಕಂದಾಯ ಅಧಿಕಾರಿಗಳ ವಿವರ ನೀಡುವಂತೆ ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಸುತ್ತೋಲೆ ಹೊರಡಿಸಿದ್ದಾರೆ.

ಜುಲೈ 8ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ ನಡೆದಿತ್ತು. ಈ ವೇಳೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸಲು ಅಧೀನ ಅಧಿಕಾರಿ, ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸಿಎಂ ಸೂಚಿಸಿದ್ದರು. ಅಲ್ಲದೆ ಕಚೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ, ಸಿಬ್ಬಂದಿ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಿದ್ದರು. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ | Assembly Session: ನಾಳೆಯಿಂದ ಮುಂಗಾರು ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು. ಅಲ್ಲದೆ ಇಂತಹ ಹಲವು ಅಧಿಕಾರಿಗಳು, ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ. ಸ್ಥಾನದಲ್ಲಿ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರಾಜೇಂದರ್‌ ಕುಮಾರ್‌ ಕಟಾರಿಯಾ ಸೂಚಿಸಿದ್ದಾರೆ.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 8000 ಕ್ಯುಸೆಕ್ ನೀರು ಬಿಡುವುದು ಅನಿವಾರ್ಯ: ಸಿದ್ದರಾಮಯ್ಯ ಹೇಳಿಕೆ

Cauvery Dispute: ಹೆಚ್ಚು ಮಳೆ ಬಿದ್ದರೆ ಮಾತ್ರ CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯುಸೆಕ್ ನೀರು ಬಿಡಬೇಕಾಗುತ್ತದೆ. ಇದರ ಜತೆಗೆ ಮೇಲ್ಮನವಿ ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ ಜುಲೈ 12ರಿಂದ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು (Cauvery Dispute) ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಸರ್ವಪಕ್ಷ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ 8000 ಕ್ಯುಸೆಕ್ ನೀರು ಬಿಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜುಲೈ 11ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದಿದ್ದು, ಜುಲೈ 12ರಿಂದ 31ರವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು.12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ ಶೇ.63 ಮಾತ್ರ ನೀರು ಭರ್ತಿ ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯುಸೆಕ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯುಸೆಕ್ ನೀರು ಬಿಡಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMCಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಎಂಎಲ್‌ಸಿ ರವಿ ಕುಮಾರ್‌, ಸುರೇಶ್ ಬಾಬು, ನಾಗರಾಜ್ ಯಾದವ್, ಎಜಿ ಶಶಿಕಿರಣ್ ಶೆಟ್ಟಿ, ಮಂಜೇಗೌಡ, ಜಿಟಿ ದೇವೇಗೌಡ, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಯದವೀರ್ ಒಡೆಯರ್‌, ದರ್ಶನ ಪುಟ್ಟಣ್ಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

Cauvery Dispute: CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕರು ಸಹಮತ ಸೂಚಿಸಿದ್ದು, ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸುವುದು ಬೇಡ ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ ಜುಲೈ 12ರಿಂದ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು (Cauvery Dispute) ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ತಿಳಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಭಾನುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸದ್ಯಕ್ಕೆ ತಮಿಳುನಾಡಿಗೆ 8000 ಕ್ಯುಸೆಕ್‌ ನೀರು (Cauvery Dispute) ಬಿಡಲು ತೀರ್ಮಾನ ಮಾಡಲಾಗಿದೆ.

ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕರು ಸಹಮತ ಸೂಚಿಸಿದ್ದು, ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸುವುದು ಬೇಡ ಎಂದು ಒತ್ತಾಯಿಸಿದರು. ಬಳಿಕ ಅಂತಿಮವಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದೆ.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಭೆಯಲ್ಲಿ ವಸ್ತು ಸ್ಥಿತಿ ಬಗ್ಗೆ ಚರ್ಚೆಯಾಗಿದೆ. ಜುಲೈ 11ರಂದು ನಡೆದ ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ಜುಲೈ 12ರಿಂದ 31ರವರೆಗೆ ತಮಿಳುನಾಡಿಗೆ ಪ್ರತಿ ನಿತ್ಯ 1TMC ನೀರನ್ನು ಬಿಡಲು ಆದೇಶ ಮಾಡಲಾಗಿತ್ತು. ಜೂನ್ ತಿಂಗಳಲ್ಲಿ 9.14 ಟಿಎಂಸಿ ನೀರು ಬಿಡಬೇಕಿತ್ತು. 31.24 ಜುಲೈ ತಿಂಗಳಲ್ಲಿ ಬಿಡಬೇಕು. ಒಟ್ಟಾರೆ ಸುಮಾರು 40.43 ಟಿಎಂಸಿ ನೀರು ಬಿಡಬೇಕು. ನಾವು ಈವರೆಗೂ 5 ಟಿಎಂಸಿವರೆಗೂ ನೀರು ಬಿಟ್ಟಿದ್ದೇವೆ ಎಂದು ತಿಳಿಸಿದರು.

8 ಸಾವಿರ ಕ್ಯುಸೆಕ್ ನೀರು ಬಿಡಲು ಸಲಹೆ

ಲೀಗಲ್ ಟೀಮ್‌ನ ಮೋಹನ್ ಕಾತರಕಿ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಶೇ. 30 ಕಡಿಮೆ ಮಳೆಯಾಗಿದೆ.
ಕಬಿನಿ ಜಲಾಶಯ ಶೇ.96 ಭರ್ತಿಯಾಗಿದ್ದು, ಹಾರಂಗಿಯಲ್ಲಿ ಶೇ.76, ಹೇಮಾವತಿ ಶೇ.56, ಕೆಆರ್‌ಎಸ್‌ನಲ್ಲಿ ಶೇ. 52 ನೀರು ಇದೆ. ಒಟ್ಟು ಶೇ. 63 ಮಾತ್ರ ನೀರು ಸಂಗ್ರಹ ಆಗಿದೆ ಎಂದು ತಿಳಿಸಿದರು.

ವಿಪಕ್ಷ ಹಾಗೂ ನಮ್ಮ ಶಾಸಕರು, ಸಚಿವರ ಅಭಿಪ್ರಾಯ ಒಂದೇ ಆಗಿದೆ. ನಿತ್ಯ 1 ಟಿಎಂಸಿ ಬದಲಿಗೆ 8 ಸಾವಿರ ಕ್ಯುಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬಾರದಿದ್ದರೆ ಕಡಿಮೆ ಹರಿಸೋಣ, ಇಲ್ಲದಿದ್ದರೆ CWMAಗೆ ಮೇಲ್ಮನವಿ ಸಲ್ಲಿಸೋಣ ಎಂಬ ಎಂಬ ಸಲಹೆ ಬಂದಿದೆ. 24 ಗಂಟೆಯಲ್ಲಿ 11,500 ಕ್ಯುಸೆಕ್‌ ನೀರು ಹರಿದರೆ 1 TMC ಆಗಲಿದೆ. ಅಷ್ಟು ನೀರು ಇಲ್ಲದಿರುವ ಹಿನ್ನೆಲೆಯಲ್ಲಿ 8 ಸಾವಿರ ಕ್ಯುಸೆಕ್ ನೀರು ಬಿಡೋಣ. ಮಳೆ ಜಾಸ್ತಿ ಬಂದರೆ ಜಾಸ್ತಿ ಬಿಡೋಣ ಅಂತ ನಿರ್ಧಾರ ಮಾಡಿದ್ದೇವೆ ಎಂದರು.

ಸಭೆಯಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಎಂಎಲ್‌ಸಿ ರವಿ ಕುಮಾರ್‌, ಸುರೇಶ್ ಬಾಬು, ನಾಗರಾಜ್ ಯಾದವ್, ಎಜಿ ಶಶಿಕಿರಣ್ ಶೆಟ್ಟಿ, ಮಂಜೇಗೌಡ, ಜಿಟಿ ದೇವೇಗೌಡ, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಯದವೀರ್ ಒಡೆಯರ್‌, ದರ್ಶನ ಪುಟ್ಟಣ್ಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ | Recruitment Delay: ನೇಮಕಾತಿ ವಿಳಂಬ; ದಯಾಮರಣ ಕೋರಿ ರಾಜ್ಯಪಾಲರಿಗೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಪತ್ರ!

ನಾಳೆಯಿಂದ ಮುಂಗಾರು ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

Assembly Session

ಬೆಂಗಳೂರು: ನಾಳೆ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ (Assembly Session) ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್‌ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್‌ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್‌ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್‌ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ಇದನ್ನೂ ಓದಿ | Recruitment Delay: ನೇಮಕಾತಿ ವಿಳಂಬ; ದಯಾಮರಣ ಕೋರಿ ರಾಜ್ಯಪಾಲರಿಗೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಪತ್ರ!

ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು.

ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು.

ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದರು.

ಇದನ್ನೂ ಓದಿ | LKG UKG in Anganwadis: ಜು.22ಕ್ಕೆ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ; ಕಾರ್ಯಕರ್ತೆಯರಿಗೆ ಜೀವ ವಿಮೆ

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Continue Reading
Advertisement
NSUI
ದೇಶ3 hours ago

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

Yashasvi Jaiswal
ಕ್ರಿಕೆಟ್4 hours ago

Yashasvi Jaiswal : ಇನಿಂಗ್ಸ್​​ನ ಮೊದಲ ಎಸೆತಕ್ಕ 13 ರನ್​, ವಿನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

MUDA Scam
ಕರ್ನಾಟಕ4 hours ago

MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Hardik Pandya
ಕ್ರೀಡೆ4 hours ago

Hardik Pandya : ಪತ್ನಿ ಜತೆ ವಿಚ್ಛೇದನ ಸುದ್ದಿ ನಡುವೆ ರಷ್ಯನ್ ಮಾಡೆಲ್​ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ; ಯಾರವರು?

Anant Ambani Wedding
ದೇಶ5 hours ago

ಅನಂತ್‌ ಅಂಬಾನಿ ಮದುವೆಯಲ್ಲಿ ಶಂಕರ್‌ ಮಹಾದೇವನ್‌, ಶ್ರೇಯಾ ಘೋಷಾಲ್ ಗಾಯನಕ್ಕೆ ಮನಸೋತ ಗಣ್ಯರು; Video ಇದೆ

Carlos Alcaraz
ಪ್ರಮುಖ ಸುದ್ದಿ5 hours ago

Wimbledon 2024 : ಜೊಕೊವಿಕ್ ಮಣಿಸಿದ 2ನೇ ವಿಂಬಲ್ಡನ್​ ಟ್ರೋಫಿ ಗೆದ್ದ ಕಾರ್ಲೋಸ್ ಅಲ್ಕರಾಜ್

Appu Cup Season 2
ಕರ್ನಾಟಕ6 hours ago

Appu Cup Season 2: ಅಪ್ಪು ಕಪ್‌ ಸೀಸನ್‌ 2ಗೆ ವಿಧ್ಯುಕ್ತ ಚಾಲನೆ; ಅಶ್ವಿನಿ ಪುನೀತ್‌ ಟ್ರೋಫಿ ಅನಾವರಣ

Fidias Panayiotou
ಪ್ರಮುಖ ಸುದ್ದಿ6 hours ago

Fidias Panayiotou: ನಮ್ಮ ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದನಾಗಿ ಆಯ್ಕೆ!

Team India
ಪ್ರಮುಖ ಸುದ್ದಿ6 hours ago

Team India : ಆಸ್ಟ್ರೇಲಿಯಾ ಪ್ರವಾಸಕ್ಕೆ 18 ಸದಸ್ಯರ ಭಾರತ ‘ಎ’ ಮಹಿಳಾ ತಂಡ ಪ್ರಕಟ

Self harming
ಕರ್ನಾಟಕ7 hours ago

Self Harming: ಪದವಿ ಪರೀಕ್ಷೆಯಲ್ಲಿ ಇಂಗ್ಲಿಷ್‌ ಸಬ್ಜೆಕ್ಟ್‌ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ11 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ15 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ16 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ1 day ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ6 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ6 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

ಟ್ರೆಂಡಿಂಗ್‌