Makara Sankranti : ಗವಿ ಗಂಗಾಧರೇಶ್ವರನ ಚರಣ ಸ್ಪರ್ಶಿಸಿದ ಭಾಸ್ಕರ ; ಮುನಿದು ನಿಂತಳೇ ಗಂಗೆ? - Vistara News

ಕರ್ನಾಟಕ

Makara Sankranti : ಗವಿ ಗಂಗಾಧರೇಶ್ವರನ ಚರಣ ಸ್ಪರ್ಶಿಸಿದ ಭಾಸ್ಕರ ; ಮುನಿದು ನಿಂತಳೇ ಗಂಗೆ?

Makara Sankranti : ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದ ಶಿವಲಿಂಗವನ್ನು ಮಕರ ಸಂಕ್ರಾಂತಿ ದಿನವಾದ ಸೋಮವಾರ ಸೂರ್ಯ ರಶ್ಮಿ ಸ್ಪರ್ಶಿಸುವ ವಿಸ್ಮಯವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು.

VISTARANEWS.COM


on

Gavi gangadhareshwara
ಗವಿ ಗಂಗಾಧರೇಶ್ವರನ ಚರಣ ಸ್ಪರ್ಶ ಮಾಡಿದ ಸೂರ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಕರ ಸಂಕ್ರಾಂತಿಯ (Makara Samkranti) ದಿನವಾದ ಸೋಮವಾರ ನಾಡಿನೆಲ್ಲೆಡೆ ಭಕ್ತಿ ಭಾವದ ಸಂಭ್ರಮ. ದೇಗುಲಗಳು ವಿಶೇಷ ಪೂಜೆ, ಅಲಂಕಾರಗಳಿಂದ ಕಂಗೊಳಿಸಿದವು. ಅದರಲ್ಲೂ ಪೌರಾಣಿಕ ಪ್ರಸಿದ್ಧ ಪುಣ್ಯ ಕ್ಷೇತ್ರ ಬೆಂಗಳೂರಿನ (Bangalore News) ಶ್ರೀ ಗವಿ ಗಂಗಾಧರೇಶ್ವರ ದೇಗುಲ‌ (Shri Gavi Gangadhareshwara Temple) ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಿ ಭಕ್ತ ಜನರನ್ನು ಮೂಕ ವಿಸ್ಮಿತಗೊಳಿಸಿತು. ಗುಹಾಂತರದಲ್ಲಿ ನೆಲೆಸಿರುವ ಗಂಗಾಧರೇಶ್ವರನ ಚರಣಕ್ಕೆ ವರ್ಷದಲ್ಲಿ ಒಂದೇ ಬಾರಿ ಸೂರ್ಯ ರಶ್ಮಿ (Sun Rays) ಸ್ಪರ್ಶಿಸುವ ಅಮೃತ ಘಳಿಗೆ ಭಕ್ತ ಜನರು ಸಾಕ್ಷಿಯಾದರು.

ಸೂರ್ಯ ದಕ್ಷಿಣಪಥದಿಂದ ಉತ್ತರಾಯನಕ್ಕೆ ತಿರುಗುವ ವೇಳೆ ಸೂರ್ಯ ಕಿರಣವು ಶಿವನ ವಾಹನ ನಂದಿಯ ಎರಡು ಕೊಂಬುಗಳ ನಡುವೆ ಸಾಗಿ ಶಿವ ಲಿಂಗವನ್ನು ಸ್ಪರ್ಶಿಸುವ ವಿಸ್ಮಯ ಮಕರ ಸಂಕ್ರಾಂತಿಯಂದು ಸಂಭವಿಸುತ್ತದೆ. ಸೋಮವಾರ ಸಂಜೆ 5.20ರಿಂದ 5.30ರ ನಡುವೆ ಈ ವಿಸ್ಮಯಕಾರಿ ವಿದ್ಯಮಾನ ಪ್ರತಿ ವರ್ಷದಂತೆಯೇ ನಡೆಯಿತು.

ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನಗರದ ನಾನಾ ಮೂಲೆಗಳಿಂದ ದೇಗುಲಕ್ಕೆ ಬಂದಿದ್ದರು. ದೇಗುಲದ ಒಳಗೆ ಎಲ್ಲರಿಗೂ ಪ್ರವೇಶ ಇರದಿದ್ದ ಕಾರಣ ಹೊರಭಾಗ ಎರಡು ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು. ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹಾಗೂ ದೇಗುಲದ ಆಡಳಿತ ಸಿಬ್ಬಂದಿ ಹರಸಾಹಸ ಪಟ್ಟರು.

ಸೂರ್ಯ ರಶ್ಮಿ ಸ್ಪರ್ಶದ ನಂತರ ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ರವಿ ಸುಬ್ರಮಣ್ಯ, ಎಂಎಲ್ಸಿ ಶರವಣ ಸೇರಿ ಹಲವು ಮಂದಿ ಗಣ್ಯರು ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ಶೋಭಾ ಕರಂದ್ಲಾಜೆ, ನಮ್ಮ ಪೂರ್ವಜರು ಎಷ್ಟು ವೈಜ್ಞಾನಿಕವಾಗಿ ಮಂದಿರಗಳನ್ನು ನಿರ್ಮಾಣ ಮಾಡಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಆಗಿದ್ದು, ನಾವೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದರು.

ಇದನ್ನೂ ಓದಿ: ಕನ್ನಡದಲ್ಲೇ ಟ್ವೀಟ್​ ಮಾಡಿ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ; ಪೊಂಗಲ್​, ಮಾಗ್​ ಬಿಹು ಹಬ್ಬಗಳಿಗೂ ವಿಶ್​

ಭೂಲೋಕದ ಅದ್ಭುತ ದೇವಸ್ಥಾನ

ಗವಿ ಗಂಗಾಧರೇಶ್ವರ ದೇಗುಲ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಈ ಶುಭ ಸಂದರ್ಭದಲ್ಲಿ ಮಾತನಾಡಿ, ಇದು ಭೂಲೋಕದಲ್ಲೇ ಒಂದು ಅದ್ಭುತ ದೇವಸ್ಥಾನ. ಗಂಗಾಧರೇಶ್ವರ ಸ್ವಾಮಿ ದಕ್ಷಿಣಾಭಿಮುಖನಾಗಿ ಕುಳಿತಿದ್ದಾನೆ. ಈ ವಿಶೇಷ ದೇಗುಲದಲ್ಲಿ ವರ್ಷಕ್ಕೆ ಒಂದೇ ಬಾರಿ ಮಕರ ಸಂಕ್ರಾಂತಿ ದಿನದಂದು ದೇವರ ಲಿಂಗಕ್ಕೆ ಸೂರ್ಯ ರಶ್ಮಿಯ ಸ್ಪರ್ಶವಾಗುತ್ತದೆ. ಮೂರರಿಂದ ಐದು ನಿಮಿಷಗಳ ಕಾಲ ಪಾದದಿಂದ, ಪೀಠದವರೆಗೆ ಸೂರ್ಯ ನಮಸ್ಕಾರ ಮಾಡುತ್ತಾನೆ. ಈ ಪುಣ್ಯ ಅವಸರವನ್ನು ಕಣ್ತುಂಬಿಕೊಳ್ಳುವವರಿಗೂ ಶಿವನಿಂದ ವಿಶೇಷ ಅನುಗ್ರಹವಾಗಲಿದೆ ಎಂದು ಹೇಳಿದರು.

ಸಣ್ಣ ಪ್ರಮಾಣದ ಗಂಡಾಂತರ ಸಾಧ್ಯತೆ

ಈ ಬಾರಿ ಗಂಗೆಗೆ ಸ್ವಲ್ಪ ಕೋಪ ಬಂದಿರುವುದರಿಂದ ಒಂದು ಜಲ ಕಂಟಕ ಆಗಬಹುದು. ಆದರೆ, ತುಂಬಾ ದೊಡ್ಡ ಗಂಡಾಂತರ ಏನು ಇಲ್ಲ, ಸಣ್ಣ ಪ್ರಮಾಣದ್ದು ಎಂದು ಹೇಳಿದ ಸೋಮಸುಂದರ ದೀಕ್ಷಿತರು, ʻಎಲ್ಲರಿಗೂ ಶುಭ ಆಗಲಿ ಅಂತ ದೇವರ ಬಳಿ ಕೇಳಿ ಕೊಂಡಿದ್ದೇವೆʼ ಎಂದು ಹೇಳಿದರು.

ಈ ಬಾರಿ ಸೂರ್ಯ ಸುಮಾರು 46 ಸೆಕೆಂಡ್‌ಗಳ ಕಾಲ ಲಿಂಗದ ಮೇಲಿದ್ದು ನಮಸ್ಕರಿಸಿದ್ದಾನೆ. ಪಾದದಿಂದ ಪೀಠದವರೆಗೆ ಸುಮಾರು 50 ಸೆಕೆಂಡ್‌ ಇದ್ದ. ಆದರೆ, ಗಂಗೆಯನ್ನು ಸ್ಪರ್ಶಿಸಿಲ್ಲ. ಹೀಗಾಗಿ ಗಂಗೆಗೆ ಕೋಪ ಬಂದಿರಬಹುದು. ಇದರಿಂದ ಸಣ್ಣ ಪ್ರಮಾಣದ ಅನಾಹುತ ಆಗಬಹುದು ಎಂದು ದೀಕ್ಷಿತರು ಅಭಿಪ್ರಾಯಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

VISTARANEWS.COM


on

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಇಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು.
ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ.ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest14 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest19 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest20 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌