ಬೆಂಗಳೂರು: ನಟಿ ಶೃತಿ ಹರಿಹರನ್ (sruthi hariharan) ಅವರ ಮೀಟೂ ಕೇಸ್‌ಗೆ (Me too case) ಮತ್ತೆ ಟ್ವಿಸ್ಟ್ ದೊರೆತಿದೆ. ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್‌ಗೆ, ಸಾಕ್ಷ್ಯಾಧಾರ ನೀಡುವಂತೆ ನೋಟಿಸ್ ಕೊಡಲಾಗಿದೆ.
2018ರಲ್ಲಿ ಅರ್ಜುನ್ ಸರ್ಜಾ (arjun sarja) ವಿರುದ್ಧ ನಟಿ ಶೃತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ತನಿಖೆ ನಡೆಸಿದ್ದ ಕಬ್ಬನ್ ಠಾಣೆಯ ಪೊಲೀಸರು, ಅರ್ಜುನ್ ಸರ್ಜಾ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು.
ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಶೃತಿ ಹರಿಹರನ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ಅರ್ಜಿ ಕುರಿತ ವಿಚಾರಣೆ ಬಳಿಕ, ಪೊಲೀಸರಿಗೆ ಈ ಬಗೆಗಿನ ಸಾಕ್ಷ್ಯಾಧಾರ ನೀಡುವಂತೆ ಸೂಚನೆ ನೀಡಲಾಗಿದೆ.
ಏನಿದು ಪ್ರಕರಣ?
‘ವಿಸ್ಮಯ’ ಸಿನಿಮಾ ಚಿತ್ರೀಕರಣ ವೇಳೆ ಲೈಂಗಿಕ ಕಿರುಕುಳ ಆಗಿತ್ತು ಎಂದು ನಟಿ ಶೃತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪಿಸಿದ್ದರು. ವಿಸ್ಮಯ ಚಿತ್ರದಲ್ಲಿ ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ಇಬ್ಬರೂ ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೃತಿ ಹರಿಹರನ್ ಆರೋಪ ಹೊರಿಸಿದ ಬಳಿಕ ಸ್ಯಾಂಡಲ್ವುಡ್ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಕೆಲವರು ನಟಿ ಶೃತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿಯೂ ಕೂಡ ಈ ಬಗ್ಗೆ ಸಭೆ ನಡೆಸಲಾಗಿತ್ತು.
ಇದನ್ನೂ ಓದಿ: Tanushree Dutta | ಮೀಟೂ ನಂತರ ಕೊಲೆ ಯತ್ನದ ಬಗ್ಗೆ ಭಯಾನಕ ಸತ್ಯ ಬಾಯ್ಬಿಟ್ಟ ನಟಿ ತನುಶ್ರೀ ದತ್ತಾ!