Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ - Vistara News

ಬೆಂಗಳೂರು

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇಬ್ಬರು ವಂಚಕರನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Medical Seat
ಬಂಧಿತ ಆರೋಪಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ (Medical Seat)ಸೀಟ್ ಕೊಡಿಸುತ್ತೇವೆ ಎಂದು ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಣ ಸಂಸ್ಥೆ‌ ಅಧಿಕಾರಿಗಳ ಹೆಸರು ಹೇಳಿ ಮೆಡಿಕಲ್ ಸೀಟ್ ಕೊಡಿಸುತ್ತೇನೆ ಹಾಗೂ ಹಣ ಡಬಲ್ ಮಾಡಿ ಕೊಡುತ್ತೇನೆ ಎಂದು ವಂಚಿಸುತ್ತಿದ್ದ ಗ್ಯಾಂಗ್‌ ಬಂಧನವಾಗಿದೆ.

ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೆಡಿಕಲ್ ಸೀಟ್ ವಂಚನೆ ಪ್ರಕರಣ ನಡೆದಿದೆ. ಉದ್ಯಮಿಯೊಬ್ಬರಿಗೆ ಇಬ್ಬರು ಅಸಾಮಿಗಳು ಮೆಡಿಕಲ್ ಸೀಟ್ ಕೊಡಿಸುವುದಾಗಿ ಬರೋಬ್ಬರಿ 1.5 ಕೋಟಿ ಹಣ ವಂಚಿಸಿದ್ದಾರೆ. ಮಂಜಪ್ಪ ಹಾಗೂ ವಿರೂಪಾಕ್ಷಪ್ಪ ಎಂಬುವರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರದೀಪ್ತ ಭಾಸ್ಕರ್ ಪೌಲ್ ಎಂಬುವವರು ಮಗಳ ಮೆಡಿಕಲ್ ಪಿಜಿ ಸೀಟ್‌ಗಾಗಿ ಹುಡುಕಾಡುತ್ತಿದ್ದರು. ಈ ವಿಚಾರವನ್ನು ಪರಿಚಯವಿದ್ದ ಮಂಜಪ್ಪ ಎಂಬಾತನಿಗೆ ತಿಳಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಮಂಜಪ್ಪ 1.5 ಕೋಟಿ ವಂಚಿಸಿದ್ದಾರೆ.

ಇದನ್ನೂ ಓದಿ: Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

ಪ್ರತಿಷ್ಟಿತ ಮೆಡಿಕಲ್ ಕಾಲೇಜ್‌ವೊಂದರ ಮ್ಯಾನೇಜ್ ಮೆಂಟ್ ಸಂಪರ್ಕ ಇದೆ ಎಂದು ಕಥೆ ಕಟ್ಟಿದ್ದರು. ನಿಮ್ಮ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸುತ್ತೇವೆ ಎಂದು 1.30 ಕೋಟಿ ಹಣ ತೆಗೆದುಕೊಂಡಿದ್ದರು. ಪುನಃ ಇತ್ತೀಚಿಗೆ ಮೆಡಿಕಲ್ ಸೀಟ್‌ಗೆ ಡಿಮ್ಯಾಂಡ್ ಜಾಸ್ತಿ ಆಗಿದೆ ಅಂತೇಳಿ ಹೆಚ್ಚುವರಿಯಾಗಿ 26 ಲಕ್ಷ ತೆಗೆದುಕೊಂಡಿದ್ದರು. ನಂತರ ಇತ್ತ ಹಣವೂ ಇಲ್ಲ, ಅತ್ತ ಮೆಡಿಕಲ್ ಸೀಟು ಕೊಡಿಸದೆ ಆಟ ಆಡಿಸಿದ್ದರು.

ಸೀಟ್ ಸಿಗದಿದ್ದರೆ ನಮ್ಮ ಹಣಕ್ಕೆ ಗ್ಯಾರೆಂಟಿ ಏನು ಎಂದು ಕೇಳಿದರೆ ಆರೋಪಿಗಳು ಚಾಲಾಕಿ ಉತ್ತರ ನೀಡುತ್ತಿದ್ದರು. ಸೀಟ್ ಹಂಚಿಕೆ ಆಗದಿದ್ದರೆ ಷೇರು ಮಾರ್ಕೆಟ್‌ನಲ್ಲಿ ಹಣ ಹಾಕಿ ಡಬಲ್ ಮಾಡಿ ಕೊಡುವುದಾಗಿ ಮತ್ತೆ ಸುಳ್ಳು ಹೇಳಿ ನಂಬಿಸಿದ್ದರು. ಷೇರ್ ಮಾರ್ಕೆಟ್ ಏಜೆಂಟ್ ನಾವು ಎಂದು ಹಣ ಡಬಲ್ ಮಾಡುವ ಕಥೆ ಕಟ್ಟಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿ ಡಬಲ್‌ ಮಾಡಿ ಕೊಡುವುದಾಗಿ ನಂಬಿಸಿದ್ದರು. ನಂತರ ಹಣವೂ ಕೊಡದೆ ಮೆಡಿಕಲ್‌ ಸೀಟು ಕೊಡಿಸದೆ ಕೈ ಎತ್ತಿದ್ದರು.

ಬರೋಬ್ಬರಿ 1.57 ಕೋಟಿ ಹಣ ವಂಚನೆ‌ ಮಾಡಿದ ಹಿನ್ನೆಲೆಯಲ್ಲಿ ಪ್ರದೀಪ್ತ ಭಾಸ್ಕರ್ ಪೌಲ್ ಅವರು ಮಂಜಪ್ಪ ಮತ್ತು ವಿರೂಪಾಕ್ಷಪ್ಪ ವಿರುದ್ಧ ದೂರು ದಾಖಲಿಸಿದರು. ಸದ್ಯ ದೂರಿನ ಮೇರೆಗೆ ಇಬ್ಬರನ್ನು ಬಂಧನ ಮಾಡಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Bomb threat to BMS, MS Ramayya and four other colleges in Basavanagudi Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್‌ (Bomb Threat) ಬಂದಿದೆ. ಕಾಲೇಜಿಗೆ Sattanathapuram Be Shekhar ಎಂಬ ಇ-ಮೇಲ್‌ ಐಡಿಯಿಂದ ದುಷ್ಕರ್ಮಿಗಳು ಸಂದೇಶ ಕಳಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಕಾಲೇಜಿಗೆ ಬಾಂಬ್ ಬೆದರಿಕೆ ಮಸೇಜ್‌ ಕಳಿಸಿದ್ದಾರೆ. ಇ- ಮೇಲ್ ನೋಡಿದ ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿಎಂಎಸ್‌ ಕಾಲೇಜಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹಾಗೂ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Sattanathapuram Be Shekhar ಎಂಬ ಇ- ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಬಂದಿದ್ದು, ಸುಧಾರಿತ ಹೈಡ್ರೋಜನ್ IEDs ಇಟ್ಟಿದ್ದು, 5 ಗಂಟೆ ಒಳಗೆ ಕಾಲೇಜು ಬಿಟ್ಟು ಹೊರಹೋಗುವಂತೆ ಸಂದೇಶ ಕಳಿಸಿದ್ದಾರೆ. ಬಿಎಂಎಸ್ ಕಾಲೇಜ್ ಅಲ್ಲದೆ ಬಿಐಟಿ, ಎಂಎಸ್ ಆರ್ ಐಟಿ ಕಾಲೇಜುಗಳಿಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. ದಕ್ಷಿಣ ವಿಭಾಗದ ಮೂರು ಕಾಲೇಜುಗಳಿಗೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ಬಾಂಬ್ ಬೆದರಿಕೆ ಇ‌ಮೇಲ್ ಬಂದಿದೆ. ಜತೆಗೆ ಕೇಂದ್ರ ವಿಭಾಗದ ಮತ್ತೊಂದು ಕಾಲೇಜಿಗೂ ಬಾಂಬ್ ಬೆದರಿಕೆ ಬಂದಿದೆ. ಪ್ರತಿಷ್ಠಿತ ಎಂಎಸ್ ರಾಮಯ್ಯ ಕಾಲೇಜಿಗೂ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ ಮೇಲ್ ಮಾಡಿದ್ದಾರೆ. ಸ್ಥಳಕ್ಕೆ ಸದಾಶಿವನಗರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Namma Metro : ಸಿಲಿಕಾನ್‌ ಸಿಟಿ ಬೆಂಗಳೂರು ಮಂದಿಗೆ ಮತ್ತೊಂದು ಶಾಕ್‌ ಕಾದಿದೆ. ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Namma metro ticket prices will be hiked soon
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗಲಾಗಿರುವ ಸಿಟಿ ಮಂದಿಗೆ ಮತ್ತೊಂದು ಬರೆ ಬೀಳಲಿದೆ. ಬೆಂಗಳೂರಿನಲ್ಲಿ ಶೀಘ್ರದಲ್ಲೇ ನಮ್ಮ ಮೆಟ್ರೋ‌ (Namma Metro) ಟಿಕೆಟ್ ದರ ಶೇ.15-20ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ. 2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಲಾಗಿದೆ.

ಎಷ್ಟು ದರ ಏರಿಕೆ ಮಾಡಬೇಕೆಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಸಾರ್ವಜನಿಕರನೊಳಗೊಂಡ ಕಮಿಟಿ ರಚನೆ ಮಾಡಲಾಗಿದೆ. ಅಧಿಕೃತವಾಗಿ ಬಿಎಂಆರ್‌ಸಿಎಲ್ ಜಾಹೀರಾತು ನೀಡಿದೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಹಾಲಿ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಿದೆ. ಮುಂದಿನ ತಿಂಗಳಿಂದ ಹೊಸ ದರ ಜಾರಿ ಆಗಲಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಪ್ರತಿಕ್ರಿಯಿಸಿದ್ದಾರೆ.

ದರ ಏರಿಕೆ ಬಗ್ಗೆ ಕಮಿಟಿ ಆಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದೆ. ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿದೆ. ನಮ್ಮ ಖರ್ಚು- ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ಮೃತಪಟ್ಟಿದ್ದಾಳೆ. ಮೊದಮೊದಲು ಯುಡಿಆರ್‌ ಆಗಿದ್ದ ಪ್ರಕರಣ ಇದೀಗ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗಿಳಿದಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅದೊಂದು ಕೊಲೆ ಪೊಲೀಸರಿಗೆ ತಲೆನೋವಾಗಿದೆ. 13 ವರ್ಷದ ಬಾಲಕಿಯ ನಿಗೂಢ ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. ಗರ್ಗಿ ಮುರುಳೀಧರ್ ಎಂಬಾಕೆ ನಿಗೂಢವಾಗಿ ಮೃತಪಟ್ಟವಳು. ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನ ಕೊಂದಿದ್ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ಅಸಹಜ ಸಾವು ಅಂದುಕೊಂಡಿದ್ದ ಪೊಲೀಸರಿಗೆ ಪಿಎಂ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಅದೊಂದು ಸುಳಿವು ನೀಡಿತ್ತು. ಎರಡು ತಿಂಗಳ ಹಿಂದೆ ಯುಡಿಆರ್ ಆಗಿದ್ದ ಪ್ರಕರಣ ನಂತರ ಕೊಲೆ ಕೇಸ್ ಆಗಿ ಬದಲಾಗಿದೆ.

ಮುರುಳೀಧರ್ ಹಾಗೂ ಶೃತಿ ದೇಶಪಾಂಡೆ ದಂಪತಿಯ ಒಬ್ಬಳೇ ಮಗಳು ಗರ್ಗಿ ಎಂಬಾಕೆ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರ ಉಷಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದರು. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಗರ್ಗಿ ಮುರಳೀಧರ್, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ತಿಂಗಳು ಟ್ಯೂಷನ್‌ಗೆ ತೆರಳುತ್ತಿದ್ದಳು. ಕೃಷ್ಣ ಮೂರ್ತಿ ಎಂಬುವವರ ಬಳಿ ಗಣಿತ ಟ್ಯೂಷನ್‌ಗೆ ತೆರಳುತ್ತಿದ್ದಳು. ಕಳೆದ ಮೇ 22ರಂದು ಬೆಳಗ್ಗೆ 8:45 ಗರ್ಗಿ ತನ್ನ ಅಮ್ಮನ ಜತೆ ಅಶೋಕನಗರದಲ್ಲಿರುವ ತಾತನ ಮನೆಗೆ ತೆರಳಿದ್ದಳು. ಸಂಜೆ 5:30 ಕ್ಕೆ ತಾಯಿ ಶೃತಿ ದೇಶಪಾಂಡೆ ಹಾಗೂ ಗರ್ಗಿ ಮುರುಳೀಧರ್ ವಾಪಸ್ ಆಗಿದ್ದಳು.

ಸಂಜೆ 7ಕ್ಕೆ ಶೃತಿ ದೇಶಪಾಂಡೆ, ಮಗಳು ಗರ್ಗಿ ಹಾಗೂ ಶೃತಿ ಸಹೋದರಿ ಚಾಟ್ಸ್ ತಿನ್ನಲು ಹೊರಗೆ ಹೋಗಿದ್ದರು. ವಾಪಸ್ 8 ಗಂಟೆಗೆ ಬಂದವರೇ ಗರ್ಗಿ ರಾತ್ರಿ 10:30ಕ್ಕೆ ಮಲಗಲು ರೂಂಗೆ ತೆರಳಿದ್ದಳು. ಎಂದಿನಂತೆ ಬೆಳಗ್ಗೆ 7 ನೋಡಿದಾಗ ಗರ್ಗಿ ಮಲಗಿದ್ದಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಳು. ಎಷ್ಟೇ ಕೂಗಿ ಎಬ್ಬಿಸಿಲು ಪ್ರಯತ್ನಿಸಿದ್ದರು ಎದ್ದೇಳದೆ ಇದ್ದಾಗ ಪೋಷಕರು ಗಾಬರಿಗೊಂಡಿದ್ದರು. ಕೂಡಲೇ ಅಪಾರ್ಟ್‌ಮೆಂಟ್‌ನಲ್ಲಿದ್ದ ವೈದ್ಯರನ್ನು ಕರೆದು ಪರೀಕ್ಷಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ದಾರಿ ಮಧ್ಯೆ ಮೃತಪಟ್ಟಿದ್ದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

ಇದನ್ನೂ ಓದಿ: Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

ಘಟನೆ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿತ್ತು. ಆದರೆ ಮಗಳ ದಿಢೀರ್‌ ಸಾವಿನಿಂದ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಆರೋಗ್ಯವಾಗಿದ್ದ ಮಗಳು ಹೀಗೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮೃತಪಟ್ಟಿರುವುದರಿಂದ ಹಲವು ಅನುಮಾನಗಳು ಮೂಡುತ್ತಿವೆ. ಹೀಗಾಗಿ ತನಿಖೆಯನ್ನು ನಡೆಸುವಂತೆ ದೂರು ನೀಡಿದ್ದರು. ಗರ್ಗಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದಾಗ, ಬಾಲಕಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ವರದಿ ಬಂದಿದೆ.

ಹೀಗಾಗಿ ಯುಡಿಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಕೊಲೆಕೇಸ್‌ ದಾಖಲಿಸಿಕೊಂಡಿದ್ದಾರೆ. ಆದರೆ ಮನೆಯೊಳಗೆ ಮಲಗಿದ್ದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ. ಜುಲೈ 18 ರಂದು ಯುಎಇಆರ್ ಪ್ರಕರಣ 302 ಅಡಿಯಲ್ಲಿ ಎಫ್ಐಆರ್ ಆಗಿ ದಾಖಲಿಸಿಕೊಂಡಿರುವ ಪೊಲೀಸರು, ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ. ಪಿಎಂ ರಿಪೋರ್ಟ್‌ನಲ್ಲಿ ಬಾಲಕಿ ಕಿವಿಯನ್ನು ಬಲವಾಗಿ ಒತ್ತಿದ್ದಾರೆ. ದಿಂಬು ಅಥವಾ ಬೇರೆ ವಸ್ತುವಿನಿಂದ ಉಸಿರುಗಟ್ಟಿಸಿಕೊಂದಿದ್ದಾರೆಂಬ ಮಾಹಿತಿ ಇದೆ. ಪ್ರಕರಣ ಸೂಕ್ಷ್ಮತೆ ಅರಿತ ಡಿಸಿಪಿ ಪ್ರಕರಣವನ್ನು ಎಸಿಪಿಗೆ ರವಾನೆ ಮಾಡಿದ್ದಾರೆ. ಸದ್ಯ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ ನಡೆಸಲಾಗಿದೆ.

VISTARANEWS.COM


on

By

murder case
ಮೃತ ಸಜಿತ್
Koo

ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ನಡೆದಿದ್ದು, ಕೊಲೆಯಲ್ಲಿ‌ (Murder case) ಅಂತ್ಯವಾಗಿದೆ. ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿ ಭೀಕರವಾಗಿ ಹತ್ಯೆಯಾಗಿದ್ದಾನೆ. ಸಜಿತ್ (34) ಕೊಲೆಯಾದ ದುರ್ದೈವಿ. ಬೆಂಗಳೂರಿನ ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದೆ.

ಸಜೀತ್ ಇಂಟೀರಿಯರ್ ಡಿಸೈನ್ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದ. ಮೂವರು ಬಿಹಾರ ಮೂಲದವರು ಸೇರಿ ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು ಜತೆಗೆ ಇದ್ದವರೇ ಮರದ ದೊಣ್ಣೆಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದು ಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೊಕೋ ಮತ್ತು ಎಫ್.ಎಸ್.ಎಲ್ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಕೊಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಮೈಕೋ ಲೇಔಟ್ ಕೊಲೆ ಪ್ರಕರಣ ಸಂಬಂಧ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. ಲಿಖಿತ್ ಇಂಟೀರಿಯರ್ ಡಿಸೈನ್ಸ್ ಎಂಬ ಶಾಪ್ ಬಳಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಒಂದು ಗಲಾಟೆ ನಡೆದಿದೆ. ಮೂರು ಜನ ಸೇರಿ ಗಲಾಟೆ ಮಾಡಿಕೊಂಡಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧನ ಮಾಡಿದ್ದೀವಿ. ಮೂವರು ಬಿಹಾರ ಮೂಲದ ಅಕ್ಕಪಕ್ಕದ ಹಳ್ಳಿಯವರು ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು45 ಸೆಕೆಂಡುಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು1 ಗಂಟೆ ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ2 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು3 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು3 ಗಂಟೆಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು4 ಗಂಟೆಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Wall Collapse
ಬೆಂಗಳೂರು5 ಗಂಟೆಗಳು ago

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

karnataka Weather Forecast
ಮಳೆ11 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ21 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ21 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌