Site icon Vistara News

Medical Student : ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Medical student commits suicide in Bengaluru

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ (Medical Student) ನೇಣು (Self Harming) ಬಿಗಿದುಕೊಂಡು ಮೃತಪಟ್ಟಿದ್ದಾನೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ (Bowring hospital) ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ.

ಸೋಮವಾರ ಬೆಳಗ್ಗೆ ಪ್ರಾಕ್ಟಿಕಲ್ ಎಕ್ಸಾಂಗೆ ಹಾಜರಾಗಿ ಬಿದ್ದಿದ್ದ ವಿದ್ಯಾರ್ಥಿ ಬಳಿಕ ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯ ರೂಂ ಲಾಕ್ ಮಾಡಿಕೊಂಡು ರಾಜಸ್ಥಾನ ಮೂಲದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಬಸ್‌-ಕಾರು ಅಪಘಾತ; ಚಾಲಕ ಗಂಭೀರ

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು-ಬಸ್ಸಿನ ಮುಂಭಾಗ ಜಖಂಗೊಂಡಿದೆ. ಸಾಗರ-ಶಿವಮೊಗ್ಗ ರಸ್ತೆಯ ಕಾಸ್ಪಾಡಿ ಬಳಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಚಾಲಕನನ್ನು ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

ಚಿಕ್ಕಮಗಳೂರು: ಸೆಲ್ಫಿ ಕ್ರೇಜ್‌ಗೆ (Selfie Craze)​ ಯುವಕನೊಬ್ಬ ಬಲಿಯಾಗಿದ್ದಾನೆ. ಫಾಲ್ಸ್‌ನಲ್ಲಿ (Hebbe Waterfalls) ಕಾಲು ಜಾರಿ ಬಿದ್ದು ಪ್ರವಾಸಿಗ ಮೃತಪಟ್ಟಿದ್ದಾನೆ. ಹೈದರಾಬಾದ್ ಮೂಲದ ಶ್ರವಣ್ (25) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್‌ನಲ್ಲಿ ಘಟನೆ ನಡೆದಿದೆ.

ಶ್ರವಣ್‌ ತನ್ನ ಸ್ನೇಹಿತನೊಂದಿಗೆ ಹೈದರಾಬಾದ್‌ನಿಂದ‌ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದ. ಸೋಮವಾರ ಬೆಳಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದ. ಹೆಬ್ಬೆ ಫಾಲ್ಸ್‌ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದಿದ್ದಾನೆ.

ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Suspension Order : ಕ್ರಿಮಿನಲ್‌ಗಳಿಗೆ ಮಾಹಿತಿ ಸೋರಿಕೆ; ಐವರು ಪೊಲೀಸ್‌ ಸಿಬ್ಬಂದಿ ಅಮಾನತು

ದೊಡ್ಡಬಳ್ಳಾಪುರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧ ಬಲಿ

ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ವೃದ್ಧನ ಗುರುತು ಪತ್ತೆಯಾಗಿಲ್ಲ. ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ನಡು ರಸ್ತೆಯಲ್ಲೇ ಬಿದ್ದಿದ್ದ ಶವವನ್ನು ತೆರೆವು ಮಾಡಿದ್ದಾರೆ. ಮೃತದೇಹವನ್ನು ದೊಡ್ಡಬಳ್ಳಾಪುರ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಲಾಗಿದೆ. ಅಪಘಾತ ಮಾಡಿ ಪರಾರಿ ಆಗಿರುವ ಆರೋಪಿಗಳಿಗೆ ಹುಡುಕಾಟ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version