ಬೆಂಗಳೂರು: ನಗರದ ನಾಗವಾರದಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತಪಟ್ಟ ಬೆನ್ನಲ್ಲೇ ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಹಾಕಿದ್ದ ಬ್ಯಾರಿಕೇಡ್ಗಳು ಕಾರಿನ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಅವಘಡ ನಡೆದಿದೆ. ಇಬ್ಬರು ಸ್ಥಳೀಯರು ಕಾರಿನಲ್ಲಿ ಹೋಗುತ್ತಿದ್ದಾಗ ಬ್ಯಾರಿಕೇಡ್ ಬಿದ್ದಿದ್ದರಿಂದ ಕಾರು ಭಾಗಶಃ ಜಖಂಗೊಂಡಿದೆ. ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದವರಿಗೆ ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ, ಕಾರಿನ ಮಾಲೀಕರು ನೀಡುವ ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Bar Fight: ಬಾರ್ನಲ್ಲಿ ಕಸ್ಟಮರ್ ನಿಂತಿದ್ದ ಜಾಗದ ವಿಚಾರಕ್ಕೆ ಕಿರಿಕ್; ಮನಸೋ ಇಚ್ಛೆ ಥಳಿಸಿದ ಸಿಬ್ಬಂದಿ