ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರದ ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಭಾನುವಾರ ನಗರದ ಮತ್ತೀಕೆರೆ ಬಡಾವಣೆಯ 3ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ಸರ್ಕಾರಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸಿದ ಅವರು, ಜನರ ಅಭಿಪ್ರಾಯಗಳನ್ನು ಆಲಿಸಿದರು. ವಾಹನ ನಿಲುಗಡೆ, ಬೀದಿದೀಪ, ತ್ಯಾಜ್ಯ ವಿಲೇವಾರಿ, ಕುಡಿಯುವ ನೀರು ಪೂರೈಕೆ ಇತ್ಯಾದಿ ಸಮಸ್ಯೆಗಳನ್ನು ಜನರು ಸಚಿವರ ಗಮನಕ್ಕೆ ತಂದರು. ಈ ವೇಳೆ ಸಚಿವರು, ಅವುಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲವೆಡೆಗಳಲ್ಲಿ ಎದುರಾದ ಮಕ್ಕಳ ಬಳಿ ವಿದ್ಯಾಭ್ಯಾಸ, ಶೈಕ್ಷಣಿಕ ಪ್ರಗತಿ, ಶಾಲೆಯಲ್ಲಿ ಇರುವ ಬಿಸಿಯೂಟದ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಸಚಿವರು ಕಾಳಜಿಯಿಂದ ವಿಚಾರಿಸಿದರು. ಇದು ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ.
ಇದನ್ನೂ ಓದಿ | ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು?: ಸಮರ್ಥಿಸಿಕೊಂಡ ಸಿದ್ದರಾಮಯ್ಯ