ಬೆಂಗಳೂರು: ಕಂಡು ಕೇಳರಿಯದ ಮಳೆಯಿಂದ(Rain News) ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೆ.7ರಂದು ಸಂಜೆ 5ಗಂಟೆಗೆ ವಿವಿಧ ಸಾಫ್ಟ್‌ವೇರ್ ಕಂಪನಿಗಳ ಮುಖ್ಯಸ್ಥರು, ಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು,
ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ಜಲಮಂಡಳಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು,
ನಗರ ಪೊಲೀಸ್ ಆಯುಕ್ತರು ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಉದ್ಯಮಿಗಳು ಮಳೆಯಿಂದ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಬಹುದು ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ | ನಾನು ಲಿಂಗಾಯತ ಪ್ರಚಾರ ಸಮಿತಿ ಅಧ್ಯಕ್ಷನಲ್ಲ ಎಂದ ಎಂ.ಬಿ.ಪಾಟೀಲ್
ಸಭೆಯಲ್ಲಿ ಇನ್ಫೋಸಿಸ್, ವಿಪ್ರೊ, ಎಂಫಸಿಸ್, ನಾಸ್ಕಾಂ, ಗೋಲ್ಡ್ಮನ್ ಸ್ಯಾಕ್ಸ್, ಇಂಟೆಲ್, ಟಿಸಿಎಸ್, ಫಿಲಿಪ್ಸ್, ಸೊನಾಟ ಸಾಫ್ಟ್‌ವೇರ್ ಮುಂತಾದ ಕಂಪನಿಗಳ ಮುಖ್ಯಸ್ಥರು ಇಲ್ಲವೇ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಲಾಗುವುದು. ಜತೆಗೆ, ನಗರದ ಸಮಸ್ಯೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಪಿಪಿಟಿ ಪ್ರಸ್ತುತ ಪಡಿಸಲಿದ್ದಾರೆ. ಕಂಪನಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Rain News | ಹಸಿವಿನಿಂದ ಕಂಗಾಲಾಗಿದ್ದ ಮೂಕಜೀವಿಗಳು; ನಿರಾಶ್ರಿತ ಪರಿಸ್ಥಿತಿಯಲ್ಲೂ ನೆರವಿಗೆ ಬಂದ ಆಪತ್ಬಾಂಧವ