ಬೆಂಗಳೂರು: ಇದೇ ಮೊದಲ ಬಾರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ (Promotion Order) ನಿರ್ಧರಿಸಿದೆ. ಈ ಸಂಬಂಧ ಬುಧವಾರ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದಿದ್ದಾರೆ.
ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್‌ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಯುಜಿಸಿ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರ್ಕಾರವು 274 ಅಸೋಸಿಯೇಟ್ ಪ್ರೊಫೆಸರ್‌ಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Education News | 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ; ಫೇಲ್ ಆದರೆ ಮುಂದೇನು?