ಆನೇಕಲ್: ಮತದಾರರಿಗೆ (voters) ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್‌ಗಳು (Gift box) ಗೋದಾಮಿನಲ್ಲಿ ಪತ್ತೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ (Congress Candidate) ಕಡೆಯವರು ವಿಧಾನ ಪರಿಷತ್ ಚುನಾವಣೆಯ (MLC Election) ಬೆಂಗಳೂರು ಪದವೀಧರ ಕ್ಷೇತ್ರದ (graduates constituency) ಮತದಾರರಿಗೆ ವಿತರಿಸಲು ಇವುಗಳನ್ನು ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ. ದುಬಾರಿ ಬೆಲೆಯ ಕಿಚನ್ ಸೆಟ್‌ಗಳು ಇವುಗಳಲ್ಲಿವೆ. ಅವುಗಳ ಮೇಲೆ RG ಎಂಬ ಪ್ರಿಂಟ್ ಹೊಂದಿವೆ. ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಗೋದಾಮಿನಲ್ಲಿಯೂ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ.
ಸುಳಿವಿನ ಮೇರೆಗೆ ಬಿಜೆಪಿ ಕಾರ್ಯಕರ್ತರು ಗೋದಾಮಿನ ಮೇಲೆ ದಾಳಿ ನಡೆಸಿ ಇದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ. ಜಯನಗರದಲ್ಲಿ ರಾತ್ರಿ ಪತ್ತೆಯಾಗಿರುವ ಗಿಫ್ಟ್ ಸೆಟ್‌ಗಳ ಜೊತೆಗೆ ಇದು ಸಾಮ್ಯತೆ ಹೊಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ನಡೆಸಿರುವ ಬಿಜೆಪಿ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್, ನಿಂಗರಾಜೇಗೌಡ ಬಂಡಾಯ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.
ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್
ಜೆಡಿಎಸ್‌ನಲ್ಲೂ ಬಂಡಾಯ?
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.